Breaking News

ಬಾಗಲಕೋಟೆ

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ. ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಎಂಜಿನಿಯರ್ ಬನ್ ಗಯಾ ಚಾಯ್‍ವಾಲಾ – ಬದುಕಿಗೆ ದಾರಿ ತೋರಿಸಿದ ಟೀ ಬ್ಯುಸಿನೆಸ್

ಬಾಗಲಕೋಟೆ: ಸದ್ಯ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದು ನಿರುದ್ಯೋಗ. ಪ್ರಧಾನಿ ಮೋದಿಯವರೂ ನಿರುದ್ಯೋಗ ಸಮಸ್ಯೆಗೆ ಯುವಕರಿಗೆ ಪಕೋಡ ಮಾರಿ ಅಂತ ಕರೆ ನೀಡಿದರು. ಆದರೆ ಉತ್ತರ ಕರ್ನಾಟಕದ ಯುವಕನೊಬ್ಬ ತನ್ನ ಓದಿಗೆ ತಕ್ಕ ಕೆಲಸವೇ ಬೇಕೆಂದು ಸಮಯ ವ್ಯರ್ಥ ಮಾಡದೇ ಭಿನ್ನವಾಗಿ ಯೋಚಿಸಿ ಯಶಸ್ವಿಯಾಗಿದ್ದಾನೆ. ಎಂಜಿನಿಯರ್ ಬನ್ ಗಯಾ ಚಾಯ್ ವಾಲಾ. ಅರೇ ಇದೇನಿದು ಚಾಯ್ ಅಂಗಡಿ ಹೆಸರು ಡಿಫರೆಂಟ್ ಆಗಿದೆ. ಹೌದು ಅಲ್ಲೇ ಇರೋದು ಟ್ವಿಸ್ಟ್. ಅಮೀರ್ …

Read More »

ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.        ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …

Read More »

ನೋ ಪಾರ್ಕಿಂಗ್‌ ನಲ್ಲಿ ಬೈಕ್‌ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ

ಬಾಗಲಕೋಟೆ: ನೋ ಪಾರ್ಕಿಂಗ್‌ ನಲ್ಲಿ ಬೈಕ್‌ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ನಡೆದ ವೇಳೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಸೋಮವಾರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ನವನಗರದ ಗರ್ಭಿಣಿ ತನ್ನ ಮೈದುನನ ಜತೆಗೆ ಬಸವೇಶ್ವರ ವೃತ್ತದ ಬಳಿ ಇರುವ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಬೈಕ್‌ ನಿಲ್ಲಿಸಿದ್ದರಿಂದ ಸಂಚಾರಿ ಪೊಲೀಸರು ಬೈಕ್‌ನ ಪ್ಲಗ್‌ ಕಿತ್ತುಕೊಂಡಿದ್ದರು. ಬೈಕ್‌ ಪ್ಲಗ್‌ ಕೊಡಲು ಒತ್ತಾಯಿಸಿದ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ …

Read More »

ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಶಾಸಕ ಯತ್ನಾಳ ಹೇಳಿಕೆಗೆ  ಬಾದಾಮಿಯಲ್ಲಿ ಪ್ರತಿಕ್ರಿಯೆ

ಬಾಗಲಕೋಟೆ : ನಾವಂತೂ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಒಂದು ವೇಳೆ ಅವರ ತಿಕ್ಕಾಟದಿಂದಲೇ ಸರ್ಕಾರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಯತ್ನಾಳ ಹೇಳಿಕೆಗೆ  ಬಾದಾಮಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಹಳ ದಿನ ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಯಡಿಯೂರಪ್ಪನವರನ್ನು ತೆಗೆಯಬೇಕೆಂದು ಬಹಳ ದೊಡ್ಡ ಚರ್ಚೆ ನಡೆದಿದೆ. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುವ …

Read More »

ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು.

ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು.    ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …

Read More »

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …

Read More »

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ. ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ …

Read More »

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ …

Read More »

ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ ದಂಡ ವಿಧಿಸುತ್ತಿದ್ದಾಗ ಮಾಜಿ ಕಾರ್ಪೋರೇಟರ್ ಆಕ್ಷೇಪಿಸಿದಕ್ಕೆ ಪೊಲೀಸರು ಲಾಠಿಯಿಂದ ಕಾಲು ಮುರಿದಿದೆ

ವಿಜಯಪುರ: ಮಾಜಿ ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೆಟರ್ ಮೇಲೆ ಪೊಲಿಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಪೊಲಿಸರ ವಿರುದ್ದ ಆರೋಪ ಮಾಡಿದ್ದಾರೆ. ವಿಜಯಪುರ ನಗರ ಗಾಂಧಿಚೌಕ್ ಹಾಗೂ ಸಂಚಾರಿ ಠಾಣೆಯ ಎ.ಎಸ್.ಐ. ಹಾಗೂ ಹೆಡ್ ಕಾನ್ಸಟೇಬಲ್ ನಿಂದ ಭಾನುವಾರ ಸಂಜೆ ತಮ್ಮ ಮೇಲೆ ಹಲ್ಲೆ ನಡೆಸಿ ಕಾಲು ಮುರಿದಿದ್ದಾರೆ ಎಂದು ಪ್ರಕಾಶ ಮಿರ್ಜಿ ಆರೋಪಿಸಿದ್ದಾರೆ. ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ …

Read More »