Breaking News

ಬಾಗಲಕೋಟೆ

ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!

ಬಾಗಲಕೋಟೆ: ತಂದೆಯೊಬ್ಬರು ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಇಬ್ಬರು ಮಕ್ಕಳ ಹೆಸರಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಆ ಮಕ್ಕಳು ತಂದೆಯ ಜೀವನಕ್ಕೆ ಆರ್ಥಿಕವಾಗಿ ಅಥವಾ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿರಲಿಲ್ಲ. ತನ್ನ ಕೊನೇಗಾಲದಲ್ಲಿ ಮಕ್ಕಳು ಆಸರೆ ನೀಡುತ್ತಿಲ್ಲ ಎಂದು ನೊಂದ ತಂದೆ, ನನ್ನ ಸಾವಿನ ನಂತರ ಮಡದಿಯ ಜೀವನಕ್ಕೂ ಮಕ್ಕಳು ಸಹಾಯ ಕೊಡುತ್ತಾರೆ ಎಂಬ ಭರವಸೆ ಇಲ್ಲ. ನಾನೇನು ಮಾಡಲಿ? ಇರೋ ಆಸ್ತಿಯನ್ನೂ ಮಕ್ಕಳಿಗೆ ಕೊಟ್ಟಿರುವೆ ಎಂದು ಕಣ್ಣೀರು ಹಾಕುತ್ತಿದ್ದರು. ಇವರ ಕಷ್ಟಕ್ಕೆ ಮರುಗಿದ …

Read More »

ಭಾರತೀಯ ಸೇನೆ ಸೇರಿದ ಬಾಗಲಕೋಟೆ ಗ್ರಾಮೀಣ ಯುವತಿ

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳೆಯರು ಮನೆಯಿಂದ ಹೊರಬರುವುದೇ ಕಡಿಮೆ ಎನ್ನುವಂಥ ಪರಿಸ್ಥಿತಿ ಇತ್ತು. ಆದರೆ ಕಾಲ ಬದಲಾಗಿದೆ. ಇದೀಗ ಈ ಭಾಗದ ಯುವತಿಯೋರ್ವಳು ಭಾರತೀಯ ಸೇನೆ ಸೇರುವ ಮೂಲಕ ಮಾದರಿಯಾಗಿದ್ದಾಳೆ. ವಿಜಯಾ ಹದ್ಲಿ, ಬಾಗಲಕೋಟೆ ತಾಲೂಕಿನ ಯಡಹಳ್ಳಿ ಗ್ರಾಮದ ನಿವಾಸಿ. ಮೊದಲ ಪ್ರಯತ್ನದಲ್ಲಿ ದೇಶ ಸೇವೆ ಮಾಡುವ ಅವಕಾಶ ಪಡೆದಿದ್ದಾರೆ. ದೈಹಿಕ ಶಿಕ್ಷಕಿ ಆಗಬೇಕು ಎಂದುಕೊಂಡಿದ್ದರಂತೆ. ಆದರೆ, ಸಿಆರ್​ಪಿಎಫ್ ಯೋಧೆಯಾಗಿ ದೇಶ ಸೇವೆಗೆ ಹೊರಟಿದ್ದಾರೆ. 2021ರಲ್ಲಿ ಬೆಂಗಳೂರಿನ ಯಲಹಂಕದಲ್ಲಿ ನಡೆದ …

Read More »

ಇಡ್ಲಿ ಮಾರುವವನ ಮಗಳಿಗೆ ವೈದ್ಯೆಯಾಗುವಾಸೆ: ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ

ರಬಕವಿ–ಬನಹಟ್ಟಿ: ಬಡತನದಲ್ಲಿಯೇ ಹುಟ್ಟಿ ಬೆಳೆದು, ನಿರಂತರ ಅಧ್ಯಯನ, ಕಠಿಣ ಪರಿಶ್ರಮದ ಮೂಲಕ ಇಡ್ಲಿ ಮಾರಿ ಜೀವನ ನಡೆಸಿತ್ತಿರುವ ವ್ಯಾಪಾರಿಯ ಪುತ್ರಿ ದ್ವಿತೀಯ ಪಿಯುಸಿಯಲ್ಲಿ ಶೇ. 97.5 ರಷ್ಟು ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾಳೆ. ಇದರೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸಿಗೆ ರೆಕ್ಕೆ ಕಟ್ಟಿದ್ದಾಳೆ. ರಬಕವಿಯ ಬ್ರಹ್ಮಾನಂದ ಆಶ್ರಮ ಹತ್ತಿರ ಬಾಡಿಗೆ ಶೆಡ್‌ನಲ್ಲಿ ವಾಸ ಹೊಂದಿರುವ ಪ್ರಕಾಶ ಹನಗಂಡಿಯವರ ಮಗಳು ದಾನೇಶ್ವರಿ ಈ …

Read More »

(KRDIL) ಅಧಿಕಾರಿಗಳು ನಿರ್ಮಿಸಿದ್ದ ಕಟ್ಟಡದ ಗೇಟ್ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(KRDIL) ಅಧಿಕಾರಿಗಳು ನಿರ್ಮಿಸಿದ್ದ ಕಟ್ಟಡದ ಗೇಟ್ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಲಕ ರಂಜಿತ್ ಸೂರಗೊಂಡ(8) ಮೈ ಮೇಲೆ ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಸ್ತುತ ವೀಡಿಯೋ ವೈರಲ್ ಆಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಸವೇಶ್ವರ ಸಮುದಾಯ ಭವನದ ಮುಂದೆ ಗೇಟ್ ಅಳವಡಿಸಲಾಗಿತ್ತು. ಮೇ 31 …

Read More »

PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಮೂಡ್​ನಲ್ಲಿದ್ದವನಿಗೆ ಸಿಐಡಿ ಶಾಕ್

ಬಾಗಲಕೋಟೆ: ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮ ಉರುಳು ನವ ವಿವಾಹಿತನಿಗೂ ಸುತ್ತಿಕೊಂಡಿದ್ದು, ಮೊದಲ ರಾತ್ರಿಯ ಮೂಡ್​ನಲ್ಲಿದ್ದವನಿಗೆ ಸಿಐಡಿ ಶಾಕ್​ ಕೊಟ್ಟಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಶ್ರೀಕಾಂತ್ ಚೌರಿ ಬಂಧಿತ. ಮೇ 14ರಂದು ಜಮಖಂಡಿ ನಗರದಲ್ಲಿ ಶ್ರೀಕಾಂತ್​ನ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಇದಾದ 5 ದಿನಕ್ಕೆ ಸಿಐಡಿ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡದಲ್ಲಿರುವ ಇನ್ಸ್ಪೈರ್ ಇಂಡಿಯಾ ಐಎಎಸ್ ಆಯಂಡ್ ಕೆಎಎಸ್ ಕೋಚಿಂಗ್​ ಸೆಂಟರ್​ನ ಮಾಜಿ ನಿರ್ದೇಶಕನಾಗಿದ್ದ ಶ್ರೀಕಾಂತ, ಪಿಎಸ್​ಐ ಅಭ್ಯರ್ಥಿಗಳಿಂದ …

Read More »

ಹತ್ತಾರು ಜನರ ಎದುರೇ ವಕೀಲೆ ಮೇಲೆ ಹಲ್ಲೆ; ಆರೋಪಿಯ ಬಂಧನ..

ಬಾಗಲಕೋಟೆ: ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ. ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ …

Read More »

ಬಾದಾಮಿಯಲ್ಲಿ ಸಿದ್ದು ಸ್ಪರ್ಧೆಗೆ ವಿರೋಧದ ಕೂಗು?

ಬಾಗಲಕೋಟೆ: ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದರೂ ಸದ್ಯ ಆಡಳಿತ ಪಕ್ಷ ಬಿಜೆಪಿಯಲ್ಲಿನ ಅಸಮಾಧಾನ ಬೂದಿ ಮುಚ್ಚಿದ ಕೆಂಡದಂತಿದೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಹಾಗೂ ಆಮ್‌ ಆದ್ಮಿ ಪಕ್ಷ ಕೂಡ ಈ ಬಾರಿ ಜಿಲ್ಲೆಯ ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕೆಂಬ ತವಕದಲ್ಲಿ ಸಂಘಟನೆಯಲ್ಲಿ ತೊಡಗಿವೆ.   ಜಿಲ್ಲೆಯಲ್ಲಿ 7 ವಿಧಾನಸಭೆ ಕ್ಷೇತ್ರಗಳಿದ್ದು, ಅದರಲ್ಲಿ ಬಾದಾಮಿ, ಜಮಖಂಡಿ ಕ್ಷೇತ್ರಗಳು ಕಾಂಗ್ರೆಸ್‌ ಹಿಡಿತದಲ್ಲಿವೆ. ಉಳಿದ 5 ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಎರಡು ಕ್ಷೇತ್ರ ಪ್ರತಿನಿಧಿಸುವ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ:ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಭವಿಷ್ಯ ನುಡಿದಿದ್ದಾರೆ. ಅವರು ಇಲ್ಲಿನ ಕಳ್ಳಿಗುಡ್ಡ ಗ್ರಾಮದಲ್ಲಿ ಮಾತನಾಡಿ, ಮೀಸಲಾತಿ ನೀಡದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡರು. ಮೀಸಲಾತಿ ನೀಡದೇ ಹೋದರೆ ಈಗ ಬೊಮ್ಮಾಯಿ ಸಹ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಗುಡುಗಿದ್ದಾರೆ. ಸಮುದಾಯದಿಂದ ಒಗ್ಗಟ್ಟಿನ ಹೋರಾಟ ನಡೆದಿದ್ದರೆ ಇಷ್ಟೊತ್ತಿಗಾಗಲೇ ನಮ್ಮ ಮಕ್ಕಳ ಕೈಯಲ್ಲಿ ಸಟಿ೯ಫಿಕೆಟ್ ಇರಬೇಕಾಗಿತ್ತು. ಸಮಾಜವನ್ನು …

Read More »

ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ

ಬಾಗಲಕೋಟೆ: ನಗರದ ಡಾ. ಪ್ರಹ್ಲಾದ ಭೋವಿ ಎಂಬುವರು ಕಳೆದ 15 ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ವರ್ಲ್ಡ್ ಬುಕ್ ಆಫ್​​ ರೆಕಾರ್ಡ್​​ ದಾಖಲೆ ಮಾಡುವ ಜೊತೆಗೆ ರಾಜ್ಯದ ವಿವಿಧ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಡೆಸಿಕೊಂಡು ಬರುವುದರ ಜೊತೆ ಹಲವು ಸಾಧನೆಗೈದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ, ವಯಸ್ಕರಿಗೆ ಅಕ್ಷರ ಜ್ಞಾನದ ಜಾಗೃತಿ ಮೂಡಿಸಿದ್ದಾರೆ. ಹೆಚ್​ಐವಿ ಸೋಂಕು ತಡೆಯುವಂತೆ ಗ್ರಾಮೀಣ ಪ್ರದೇಶಗಳಲ್ಲಿ …

Read More »

ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು.   ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ.   ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ.   ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …

Read More »