ಬಾಗಲಕೋಟೆ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು 12 ನಕಲಿ ವೈದ್ಯರ ಚಿಕಿತ್ಸಾ ಕೇಂದ್ರಗಳಿಗೆ ಬೀಗ ಜಡಿದಿದ್ದಾರೆ. ‘ಮುಧೋಳ ತಾಲ್ಲೂಕಿನ ಬೆಳಗಲಿ, ಮಹಾಲಿಂಗಪುರ, ತೇರದಾಳದ ಎರಡು ಚಿಕಿತ್ಸಾ ಕೇಂದ್ರ, ಬೀಳಗಿ ತಾಲ್ಲೂಕಿನ ಮೂರು, ಬಾದಾಮಿ ತಾಲ್ಲೂಕಿನ ಒಂದು, ಬಾಗಲಕೋಟೆಯಲ್ಲಿ ಎರಡು, ಹುನಗುಂದ ಎರಡು ಚಿಕಿತ್ಸಾ ಕೇಂದ್ರ ಬಂದ್ ಮಾಡಲಾಗಿದೆ. ಒಟ್ಟು 32 ಕಡೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ …
Read More »ಜಮಖಂಡಿ ತಾಲ್ಲೂಕಿಗೆ ಹಿಪ್ಪರಗಿ ಮರುಸೇರ್ಪಡೆ
ಜಮಖಂಡಿ: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ. ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು …
Read More »ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು
ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಕೆಸರಗೊಪ್ಪ ಗ್ರಾಮದ ಯುವ ರೈತ ಬಸವರಾಜ ಶ್ರೀಶೈಲ ಸತ್ತಿಗೇರಿ ಸಾಧಿಸಿ ತೋರಿಸಿದ್ದಾರೆ. ಅಂತರ ಬೆಳೆಯಾಗಿ ಕೊತ್ತಂಬರಿ ಸೊಪ್ಪು : ಒಟ್ಟು 3.18 ಎಕರೆ ಜಮೀನು ಹೊಂದಿರುವ ಸಣ್ಣ ರೈತರಾದ ಬಸವರಾಜ ಸತ್ತಿಗೇರಿ ಅವರು ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ 25 ಗುಂಟೆ ಜಮೀನಿನಲ್ಲಿ ಕಳೆದ ಮೇ18 ರಂದು ಅರಿಶಿನ …
Read More »ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ
ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …
Read More »ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ
ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ
ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …
Read More »ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ. BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
ಬಾಗಲಕೋಟೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಸಿಐಡಿ ವಿಚಾರಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿಕೆಯೊಂದನ್ನು ನೀಡಿದ್ದಾರೆ. ಮುಧೋಳದಲ್ಲಿ ಮಾತನಾಡಿದ ಅವರು ಲೈಂಗಿಕ ಕಿರುಕುಳ ನೀಡಿರುವ ವಿಚಾರದ ಬಗ್ಗೆ ಯಡಿಯೂರಪ್ಪ ಅವರನ್ನು ಇಲಾಖೆ ವಿಚಾರಣೆ ಮಾಡುತ್ತಿದೆ, ತನಿಖೆಯಲ್ಲಿ ಸತ್ಯಾಸತ್ಯತೆ ಏನಿದೆಯೋ ಹೊರಬರಲಿ ಎಂದು ಹೇಳಿದ್ದಾರೆ. ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಆಗಬಾರದು. ಇದು ಒಳ್ಳೆಯದೂ ಅಲ್ಲ, …
Read More »ನನ್ನದು ಗಜಕೇಸರಿ ಯೋಗ, ಮುಂದೆ ನಾನು ‘ಪ್ರಧಾನಿ’ಯಾದರು ಆಗಬಹುದು :ಸಂಯುಕ್ತ ಪಾಟೀಲ್
ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. …
Read More »ವೀಣಾಗೆ ಕೈತಪ್ಪಿದ ಟಿಕೆಟ್! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …
Read More »ಜಾತಿಗಣತಿ ವೇಳೆ ಉಪಜಾತಿ ಬರೆಸಬೇಡಿ ಎಂಬ ನಿರ್ಣಯಕ್ಕೆ ಪಂಚಮಸಾಲಿ ಶ್ರೀ ವಿರೋಧ
ಬಾಗಲಕೋಟೆ, ): ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ …
Read More »