Breaking News

ಬಾಗಲಕೋಟೆ

ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ

ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …

Read More »

ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?

ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …

Read More »

ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್

ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ. ವಿಠ್ಠಲ್ ರಾಷ್ಟ್ರಪಕ್ಷಿಯಾದ ನವಿಲು ಹಾಗೂ ಕಾಡು ಮೊಲವನ್ನು ಬೇಟೆಯಾಡುತ್ತಿದ್ದ. ಅಷ್ಟೇ ಅಲ್ಲದೆ ಅದನ್ನು ಹಿಡಿದು ವಿಡಿಯೋ ಮಾಡಿ ಟಿಕ್ ಟಾಕ್‍ನಲ್ಲಿ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ …

Read More »

ಎರಡನೇ ಮದ್ವೆಯಾದ ಪತಿ- ಪ್ರಶ್ನಿಸಿದ ಮೊದಲ ಪತ್ನಿ ಮೇಲೆ ಹಲ್ಲೆ………

ಬಾಗಲಕೋಟೆ: ಮೊದಲ ಪತ್ನಿ ಇದ್ದರೂ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಮೊದಲ ಪತ್ನಿಯ ಮೇಲೆ ಪಾಪಿ ಪತಿಯೋರ್ವ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನಲ್ಲಿ ನಡೆದಿದೆ. ಬಾದಮಿಯ ಚಿಂಚಲಕಟ್ಟಿ ತಾಂಡಾದ ನಿವಾಸಿ ಶಂಕರ್ ಪಮ್ಮಾರ ಹಲ್ಲೆ ಮಾಡಿದ ಪತಿ ಎಂದು ಗುರುತಿಸಲಾಗಿದೆ. ಮೊದಲ ಪತ್ನಿ ಭಾರತಿ ಪಮ್ಮಾರಳನ್ನು ಮನಬಂದಂತೆ ಎಳೆದಾಡಿ ಥಳಿಸಿದ್ದಾನೆ. ಇದರ ಜೊತೆಗೆ ಪತ್ನಿ ಜೊತೆಗೆ ಇದ್ದ 15 ವರ್ಷದ ಮಗಳು ಸುಪ್ರೀತಾ ಮೇಲೂ ಹಲ್ಲೆ …

Read More »

ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿದ್ದ ವ್ಯಕ್ತಿ ಸಾವು

ಬಾಗಲಕೋಟೆ: ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಮೆ 16 ರಂದು ತುಕರಾಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು …

Read More »

ಕುಡಿದ ಮತ್ತಲ್ಲಿ ಕೆಎಸ್ಆರ್‌ಟಿಸಿ ಬಸ್ ಚಾಲಕನ ಎಡವಟ್ಟು- ತಪ್ಪಿದ ಭಾರೀ ಅನಾಹುತ

ಬಾಗಲಕೋಟೆ: ಕುಡಿದ ಮತ್ತಲ್ಲಿ ಕೆಎಸ್ಆರ್‌ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್‍ಗೆ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ. ಆಸಂಗಿ ಗ್ರಾಮದ ಜ್ಯೋತೆವ್ವ ಜಾರ್ಜ್ ಆಸಂಗಿ (36), ನವೀನ್ ರತ್ನಪ್ಪ ನಾಗರಾಳ (22) ಹಾಗೂ 8 ವರ್ಷದ ಬಾಲಕಿ ಗಾಯಾಳುಗಳು. ಗುಳೇದಗುಡ್ಡ ತಾಲೂಕಿನ ಮಂಗಳಗುಡ್ಡ ನಿವಾಸಿ ಪರಸಪ್ಪ ಶಿರಗುಪ್ಪಿ ಕುಡಿದು ಬಸ್ ಚಾಲನೆ ಮಾಡಿದ ಚಾಲಕ. ಪರಸಪ್ಪ ಶಿರಗುಪ್ಪಿ ಮಂಗಳೂರಿನಿಂದ …

Read More »

ವಿಡಿಯೋ ಕಾಲ್ ಮಾಡಿದ ವೈದ್ಯಾಧಿಕಾರಿ- ಮನೆಗೆ ಯಾವಾಗ ಬರ್ತಿಯಪ್ಪಾ ಎಂದ ಮಕ್ಕಳು

ಬಾಗಲಕೋಟೆ: ಕೊರೊನಾ ಯುದ್ಧದಲ್ಲಿ ತಿಂಗಳುಗಟ್ಟಲೇ ಪತ್ನಿ, ಮಕ್ಕಳು ತಂದೆ ತಾಯಿಯಿಂದ ದೂರವಾದ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಕುಶಲೋಪರಿ ವಿಚಾರಿಸಿದರು. ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ನೂಡಲ್ ಅಧಿಕಾರಿಯಾಗಿರುವ ಚಂದ್ರಕಾಂತ ಜವಳಿ ಕಳೆದ ಒಂದೂವರೆ ತಿಂಗಳಿಂದ ಕೊರೊನಾ ಪ್ರಕರಣಗಳ ಮಾಹಿತಿ ಅಂಕಿ ಅಂಶ ದಾಖಲಾತಿ ಕಾರ್ಯ ನಿಭಾಯಿಸುತ್ತಿದ್ದಾರೆ. ಹೀಗಾಗಿ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿರುವ ತಂದೆ, ತಾಯಿ, ಪತ್ನಿ ಮಕ್ಕಳ ಭೇಟಿ ಮಾಡಿಲ್ಲ. ಕೊರೊನಾ ಕರ್ತವ್ಯದಲ್ಲಿರುವ ವೈದ್ಯ ಚಂದ್ರಕಾಂತ …

Read More »

ಬಾಗಲಕೋಟೆ ಗರ್ಭಿಣಿ ಕುಟುಂಬದವರ 8 ಜನರ ವರದಿ ನೆಗೆಟಿವ್

ಬಾಗಲಕೋಟೆ: ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿಯ ಕುಟುಂಬಸ್ಥರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಧ್ಯಮ ಬುಲೆಟಿನ್ ನಲ್ಲಿ 12 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಜನರಿಗೆ ಸೋಂಕು ತಗುಲಿಲ್ಲ ಎಂಬುವುದು ವರದಿಯಲ್ಲಿ ಬಂದಿದೆ. ಜಿಲ್ಲಾಡಳಿತ ಇಂದು ಗ್ರಾಮದ 45 ಜನರ ಗಂಟಲು ದ್ರವ ಪರೀಕ್ಷೆ ವರದಿ ನಿರೀಕ್ಷೆಯಲ್ಲಿದೆ. ಸದ್ಯ ಡಾಣಕಶಿರೂರು ಗ್ರಾಮಸ್ಥರಲ್ಲಿ ಯಾರ ವರದಿ ಪಾಸಿಟಿವ್ …

Read More »

ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ………..

ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್ -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. …

Read More »

ಕಳ್ಳಬಟ್ಟಿ ಅಡ್ಡೆಗಳ ಮೇಲೆ ದಾಳಿ- ಸಾವಿರ ಲೀಟರ್ ಕಳ್ಳಬಟ್ಟಿ ನಾಶ……….

ಬಾಗಲಕೋಟೆ: ಒಂದೇ ದಿನ 3 ವಿವಿಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಜಿಲ್ಲಾ ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರ ಲೀಟರ್ ಗೂ ಅಧಿಕ ಕಳ್ಳಬಟ್ಟಿ ನಾಶಪಡಿಸಿದ್ದಾರೆ. ತಾಲೂಕಿನ ನಾಯನೇಗಲಿ, ಸೀತಿಮನಿ ತಾಂಡಾದಲ್ಲಿನ ಅಡ್ಡೆಗಳ ಮೇಲೆ ದಾಳಿ ವೇಳೆ 800 ಲೀಟರ್ ಬೆಲ್ಲದ ಕೊಳೆ, ಬೀಳಗಿ ತಾಲೂಕಿನ ಬಿಸನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸುಮಾರು 200 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದೆ. ಒಟ್ಟು …

Read More »