Breaking News

ಬಾಗಲಕೋಟೆ

ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್

ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ. ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು. ‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ …

Read More »

ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್

ಬಾಗಲಕೋಟೆ : ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ, ನಿಮ್ಮ ಅಕ್ಕ -ತಂಗಿ ರಕ್ಷಣೆಗಾಗಿ ಹಾಗೂ ಗೋ ಮಾತೆ ರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.   ಪ್ರತಿಯೊಬ್ಬ ಹಿಂದೂ ಮನೆಯಲ್ಲಿ …

Read More »

ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿಮಠದ ಶ್ರೀ

ಜಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ. ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಯವನ್ನು ಚುರುಕುಗೊಳಿಸಲಿವೆ. ಈ ನಡುವೆ ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ …

Read More »

ಬಿಜೆಪಿಯಲ್ಲಿ ಗಂಡಸರೇ ಇಲ್ವಾ: ಹರಿಪ್ರಸಾದ್‌

ಬಾಗಲಕೋಟೆ: ಬಿಜೆಪಿಯಲ್ಲಿ ಸ್ಯಾಂಟ್ರೋ ರವಿ, ಫೈಟರ್‌ ರವಿ, ಪಿಂಪ್‌ ರವಿ, ಸಿ.ಟಿ. ರವಿ ಹೀಗೆ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅಂತಹ ರವಿಗಳಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಪಿಂಪ್‌ ಕೆಲಸ ಮಾಡಿಯೇ ಸಚಿವರಾಗಿದ್ದಾರೆ ಎಂದು ಒಬ್ಬ ಬಿಜೆಪಿಯ ಶಾಸಕರು ಹೇಳುತ್ತಾರೆ. ಶಾಸಕ ಯತ್ನಾಳ್‌ ಹೇಳಿಕೆಗೆ ಉತ್ತರ ಕೊಡಲು ಬಿಜೆಪಿಯಲ್ಲಿ ಒಬ್ಬ ಗಂಡಸೂ ಇಲ್ವಾ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಪ್ರಶ್ನಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ …

Read More »

ಡಾ.ವಿಜಯ ಸಂಕೇಶ್ವರ ಅವರಿಗೆ ‘ಶ್ರೀ ಸಿದ್ಧಶ್ರೀ ಪ್ರಶಸ್ತಿ’, ವಿಜಯಾನಂದ ಚಿತ್ರಕ್ಕೆ ‘ಅತ್ಯುತ್ತಮ ಬಯೋಪಿಕ್​’ ಪ್ರದಾನ

ಬಾಗಲಕೋಟೆ: ಪುಣ್ಯಕ್ಷೇತ್ರ ಸಿದ್ಧನಕೊಳ್ಳದ ಸಿದ್ಧೇಶ್ವರ ಮಠದಿಂದ 2023ನೇ ಸಾಲಿನ ‘ಶ್ರೀ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ’ಯನ್ನು ವಿಆರ್​ಎಲ್​ ಸಮೂಹ ಸಂಸ್ಥೆ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರಿಗೆ ಪ್ರದಾನ ಮಾಡಲಾಯಿತು. ಮೂರು ದಿನಗಳ ಸಿದ್ಧಶ್ರೀ ಉತ್ಸವದಲ್ಲಿ ಎರಡನೇ ದಿನವಾದ ಭಾನುವಾರ ರಾತ್ರಿ ನಡೆದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಾ.ವಿಜಯ ಸಂಕೇಶ್ವರ ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್​ ಪ್ರಶಸ್ತಿಯನ್ನೂ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು. ಸಿದ್ಧನಕೊಳ್ಳದ ಧರ್ಮಾಧಿಕಾರಿ ಡಾ. …

Read More »

ಒಂದೇ ಬಾರಿಗೆ 4 ಕರುಗಳಿಗೆ ಜನ್ಮನೀಡಿ ಅಚ್ಚರಿ ಮೂಡಿಸಿದ ಹಸು!

ಬಾಗಲಕೋಟೆ: ಪ್ರಪಂಚದಲ್ಲಿ ಪ್ರತಿದಿನವೂ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ವಿಷಯಗಳನ್ನು ನಂಬಲು ಸಹ ಸಾಧ್ಯವಾಗುವುದಿಲ್ಲ. 2 ಮುಖ, 5 ಕಾಲಿನ ಕರುಗಳು ಮತ್ತು ಪ್ರಾಣಿಗಳನ್ನು ನೀವು ನೋಡೇ ಇರುತ್ತೀರಿ. ಒಂದೇ ಬಾರಿಗೆ 2 ಕರುಗಳಿಗೆ ಜನ್ಮನೀಡಿದ ಹಸುಗಳನ್ನೂ ನೀವು ಕಂಡಿರುತ್ತೀರಿ. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದ್ದು, ಅಚ್ಚರಿ ಮೂಡಿಸಿದೆ. ಹೌದು, ಅಚ್ಚರಿಯಾದರೂ ಇದು ನಿಜ.ಬಾಗಲಕೋಟೆಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ …

Read More »

ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …

Read More »

ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್‌ ಪಾಟೀಲ್‌, 20 ವರ್ಷದ ಹನಮಂತ್‌ ಬೊಮ್ಮಕ್ಕನವರ್‌, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್‌ ಓವರ್‌ ಟೇಕ್‌ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ. ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್‌ ಗುದ್ದಿದ್ದರಿಂದ ಟ್ರ್ಯಾಕ್ಟರ್‌ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್‌ ನಲ್ಲಿದ್ದ ಇಬ್ಬರು …

Read More »

ಸಂಕ್ರಾಂತಿ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಸಿದ್ದರಾಮಯ್ಯ

ಬಾಗಲಕೋಟೆ : ಜನವರಿ 15 ರಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದಲ್ಲಿ ಬಳಿ ಎಸ್ ಆರ್ ಕೆ ಶುಗರ್ ಕಾರ್ಖಾನೆ ಯ ಅಡಿಗಲ್ಲು ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡುತ್ತಾ, ಜನವರಿ ಡಿಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ,ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಪ್ರವಾಸ …

Read More »

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ!

ಬಾಗಲಕೋಟೆ ಜಿಲ್ಲೆಯ ಹೆರಕಲ್ಲ ಗ್ರಾಮದ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ. ಗ್ರಾಮದ ಯೋಧ ಈರಪ್ಪ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವಾಗ ಪತ್ತೆಯಾದ ನರಿ ಮರಿಗಳು.   ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೆರಕಲ್ಲ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆಯಾಗಿವೆ.   ಗ್ರಾಮದ ಯೋಧ ಈರಪ್ಪ ವಾರದ ಎಂಬುವವರ ಜಮೀನಿನಲ್ಲಿ ಮರಿಗಳು ಪತ್ತೆಯಾಗಿವೆ.   ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಈರಪ್ಪ ಅವರು …

Read More »