Breaking News

ಬಾಗಲಕೋಟೆ

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ‍್ಯಾಲಿ …

Read More »

ಬ್ಲೇಡ್​ನಿಂದ ಶಸ್ತ್ರಚಿಕಿತ್ಸೆ ನಡೆಸಿದ ನಕಲಿ ವೈದ್ಯನ ಬಂದನ

ಬಾಗಲಕೋಟೆ: ಗರ್ಭ ಧರಿಸಿದ್ದ ಎಮ್ಮೆಗೆ ನಕಲಿ ವೈದ್ಯನೊಬ್ಬ ಬ್ಲೇಡ್​ನಿಂದ ಶಸ್ತ್ರಚಿಕಿತ್ಸೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಎಮ್ಮೆ ಮತ್ತು ಕರು ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ನಕಲಿ ವೈದ್ಯನ ಹೆಸರು ಶಿವಾನಂದ ಮಲ್ಲಪ್ಪ ರುದ್ರಪ್ಪನವರ. ಈತ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮಳಲಿ ಗ್ರಾಮದವ. ಮುಧೋಳ ತಾಲೂಕಿನ ಕನಸಗೇರಿ ಗ್ರಾಮದ ಹನುಮಂತ ಬಾಳಪ್ಪ ಪೂಜೇರಿ ಅವರಿಗೆ ಸೇರಿದ ಎಮ್ಮೆ ಗರ್ಭ ಧರಿಸಿ ಹಲವು ತಿಂಗಳಾಗಿತ್ತು. ಅನಾರೋಗ್ಯ ಕಾರಣ ಮಾಲೀಕರು ಪಶು …

Read More »

ಸಿದ್ದರಾಮಯ್ಯ ಜನ್ಮದಿನಕ್ಕೆ ಹೊರಟಿದ್ದ ವಾಹನ ಅಪಘಾತ: ಒಬ್ಬ ಸಾವು

ಬಾಗಲಕೋಟೆ : ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ‌ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್, ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಮೃತರಾಗಿದ್ದಾರೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು. ಮಂಗಳವಾರ ಸಂಜೆ ವಾಹನ ಗ್ರಾಮದಿಂದ ಹೊರಟಿತ್ತು. ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು‌ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾ …

Read More »

ಸಿದ್ದರಾಮಯ್ಯ ಜನ್ಮ ದಿನ: 325 ಬಸ್‌ ಬುಕಿಂಗ್‌, ಸಾರಿಗೆ ಸಂಸ್ಥೆಗೆ ₹39 ಲಕ್ಷ ಆದಾಯ

ಬಾಗಲಕೋಟೆ: ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನ ಕಾರ್ಯಕ್ರಮಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 325 ಹೆಚ್ಚು ಬಸ್‌ಗಳನ್ನು ಬುಕಿಂಗ್‌ ಮಾಡಲಾಗಿದೆ. ಇನ್ನು ನೂರಾರು ಬಸ್‌ಗಳು ಬುಕಿಂಗ್‌ ಆಗುವ ನಿರೀಕ್ಷೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 50 ಬಸ್‌ಗಳು ಬುಕಿಂಗ್‌ ಆಗಿವೆ. ಹಾವೇರಿಯಲ್ಲಿ 90, ಗದುಗಿನಲ್ಲಿ 85 ಹಾಗೂ ಧಾರವಾಡ ಜಿಲ್ಲೆಯಲ್ಲಿ 90 ಬಸ್‌ಗಳು ಬುಕಿಂಗ್‌ ಆಗಿವೆ. ಇದರಿಂದ …

Read More »

ಮತದಾರರ ಪಟ್ಟಿಗೆ ಆಧಾರ ಜೋಡಣೆ: ರಾಜಕೀಯ ಮುಖಂಡರ ಸಭೆ

ರಬಕವಿ-ಬನಹಟ್ಟಿ: ಮತದಾರರ ಪಟ್ಟಿಗೆ ಆಧಾರ ಜೋಡಣೆಯ ಕಾರ್ಯಕ್ರಮ ಅಗಸ್ಟ್ 1 ರಿಂದ ನಡೆಯಲಿದ್ದು, ಈ ನಿಟ್ಟಿನಲ್ಲಿ ಮತದಾರರು ತಾವೇ ಖುದ್ದಾಗಿ ಮೊಬೈಲ್ ಆಯಪ್ ಮೂಲಕ ಮಾಡಿಕೊಳ್ಳಬಹುದು ಇಲ್ಲವೆ ತಮ್ಮ ಮನೆಗಳಿಗೆ ಬರುವ ಬಿಎಲ್‌ಓಗಳಿಗೆ ಸೂಕ್ತ ಮಾಹಿತಿ ನೀಡುವುದರ ಮೂಲಕ ಮತದಾರರ ಪಟ್ಟಿಗೆ ಆಧಾರ ಜೋಡಣಿಗೆ ಸಹಕರಿಸಬೇಕು ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಎಸ್.ಬಿ.ಇಂಗಳೆ ತಿಳಿಸಿದರು.   ಅವರು ಶುಕ್ರವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ರಾಜಕೀಯ ಮುಖಂಡರ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ …

Read More »

ಬಿಜೆಪಿಯಲ್ಲಿ ಗೆಲ್ಲುವಂತವರಿದ್ದರೆ 80 ವರ್ಷದ ಮುದುಕನಿಗೂ, ಸೋನಿಯಾ ಗಾಂಧಿಗೂ ಟಿಕೆಟ್ ಕೊಡ್ತಾರೆ

ಬಾಗಲಕೋಟೆ: ಶ್ರೀರಾಮ ಸೇನೆ ಮತ್ತು ಬಿಜೆಪಿಗೆ ಏನು ಸಂಬಂಧ ಇಲ್ಲ ಎಂದು ಕಟೀಲ್​​ ಹೇಳಿದ್ದಾರೆ. ನಾನೂ ಕೂಡ ಹೇಳಿದ್ದೇನೆ. ನಾನೇನು ಬಿಜೆಪಿ ಸದಸ್ಯನಲ್ಲ. ಯಾವ ಪಕ್ಷದ ಸಂಬಂಧವೂ ನಮ್ಮ ಸಂಘಟನೆಗೆ ಇಲ್ಲ. ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ತ್ಯಾಗ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್ ಪ್ರತಿಕ್ರಿಯಿಸಿದರು. ​​ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇನು …

Read More »

ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಬಳಿಯೇ ಬಿತ್ತು ವಿಂಡ್​ ಪವರ್​ ಫ್ಯಾನ್

ಬಾಗಲಕೋಟೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ವಿಂಡ್​ ಪವರ್​ ಫ್ಯಾನ್​ ಬಿದ್ದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕೆಲಸಗಾರರು ಪಾರಾಗಿದ್ದಾರೆ. ಹಿರೇಓತಗೇರಿ ಗ್ರಾಮದಲ್ಲಿ ಹೊಲಗಳಿಗೆ ಅಳವಡಿಸಲಾಗಿರುವ ವಿಂಡ್ ಪವರ್ ಫ್ಯಾನ್​ ಬಿದ್ದಿದ್ದು, ಅದೇ ಹೊಲದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.   ಇಳಕಲ್ ತಾಲೂಕಿನ‌ ಹಿರೇಓತಗೇರಿ ಗ್ರಾಮದಲ್ಲಿ ಕೆಲವೆಡೆ ವಿಂಡ್​ ಪವರ್ ಫ್ಯಾನ್​ ಅಳವಡಿಕೆ ಮಾಡಲಾಗಿದೆ. ಆದರೆ ಭಾನುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಬಳಿಯೇ ತುಂಡಾಗಿ ಬಿದ್ದಿದ್ದು, ಇಲ್ಲಿನ ಜನರಿಗೆ ಆತಂಕ …

Read More »

ರಾಜ್ಯದ ನಿಯೋಗಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪಿಯುಷ್ ಗೋಯಲ್

ರಬಕವಿ-ಬನಹಟ್ಟಿ: ಕೇಂದ್ರ ಸರ್ಕಾರದ ನಿಯಮದಂತೆ ಪವರ್ ಲೂಮ್ ಮಗ್ಗಗಳ ಮೇಲೆ ಕೇವಲ ಬಿಳಿ ಬಟ್ಟೆಯನ್ನು ಮಾತ್ರ ಉತ್ಪಾದನೆ ಮಾಡಬೇಕು. ಕರಿ ಮತ್ತು ರೇಷ್ಮೆ ಬಟ್ಟೆಯನ್ನು ಕೈಮಗ್ಗದ ಮೇಲೆ ಉತ್ಪಾದನೆ ಮಾಡಬೇಕು. ಈ ನಿಮಿತ್ತವಾಗಿ ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪವರ್ ಲೂಮ್ ಮಗ್ಗಗಳ ಮೇಲೆ ಕರಿ ಬಟ್ಟೆಯನ್ನು ಉತ್ಪಾದನೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸಜ್ಜಾಗಿತ್ತು.   ಆದ್ದರಿಂದ ಕೇಂದ್ರ ಸಚಿವೆ ಪ್ರಹ್ಲಾದ್ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, …

Read More »

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಚಾಕು ಇರಿತ

ಬಾಗಲಕೋಟೆ, ಜುಲೈ 6: ನೂಪುರ್‌ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ …

Read More »

ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!

ಬಾಗಲಕೋಟೆ: ತಂದೆಯೊಬ್ಬರು ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಇಬ್ಬರು ಮಕ್ಕಳ ಹೆಸರಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಆ ಮಕ್ಕಳು ತಂದೆಯ ಜೀವನಕ್ಕೆ ಆರ್ಥಿಕವಾಗಿ ಅಥವಾ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿರಲಿಲ್ಲ. ತನ್ನ ಕೊನೇಗಾಲದಲ್ಲಿ ಮಕ್ಕಳು ಆಸರೆ ನೀಡುತ್ತಿಲ್ಲ ಎಂದು ನೊಂದ ತಂದೆ, ನನ್ನ ಸಾವಿನ ನಂತರ ಮಡದಿಯ ಜೀವನಕ್ಕೂ ಮಕ್ಕಳು ಸಹಾಯ ಕೊಡುತ್ತಾರೆ ಎಂಬ ಭರವಸೆ ಇಲ್ಲ. ನಾನೇನು ಮಾಡಲಿ? ಇರೋ ಆಸ್ತಿಯನ್ನೂ ಮಕ್ಕಳಿಗೆ ಕೊಟ್ಟಿರುವೆ ಎಂದು ಕಣ್ಣೀರು ಹಾಕುತ್ತಿದ್ದರು. ಇವರ ಕಷ್ಟಕ್ಕೆ ಮರುಗಿದ …

Read More »