ಬಾಗಲಕೋಟೆ, ಸೆಪ್ಟೆಂಬರ್ 10: ಜನಸ್ಪಂದನ ಅಂದರೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು, ರಾಜ್ಯ ಸರಕಾರ ಜನರ ಕಷ್ಟ ಸುಖಗಳಿಗೆ ನೆರವಾಗುತ್ತಿದ್ದಾರಾ? ಮಳೆ ಬಂದು ಹಲವು ಕಡೆ ಪ್ರವಾಹ ಉಂಟಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳು ಹಾಳಾಗಿವೆ, ಮನೆಗಳು ಕುಸಿದಿವೆ, ರೈತರ ಜಮೀನು ಹಾಳಾಗಿವೆ ಅವರಿಗೆ ಪರಿಹಾರ ಕೊಡದೇ ಯಾವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ಪ್ರವಾಹದ ಸಮೀಕ್ಷೆಗೆ ಆಗಮಿಸಿದ್ದ ಮಾಜಿ ಸಿಎಂ ಮಾಧ್ಯಮದವರೊಂದಿಗೆ …
Read More »ಸ್ಮಶಾನ ಇಲ್ಲದ್ದಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಸಂಸ್ಕಾರಕ್ಕೆ ಸಿದ್ಧತೆ; ಕೊನೇಲಿ ಆಗಿದ್ದೇ ಬೇರೆ..
ಬಾಗಲಕೋಟೆ: ಸ್ಮಶಾನ ಇಲ್ಲದೆ ಸರ್ಕಾರಿ ಜಾಗದಲ್ಲಿ ಸಂಸ್ಕಾರಕ್ಕೆ ಮುಂದಾದಂತಹ ಪ್ರಕರಣಗಳು ಬಹಳಷ್ಟಿದ್ದು, ಇಂದು ಅಂಥದ್ದೇ ಮತ್ತೊಂದು ಪ್ರಕರಣ ಕಂಡುಬಂದಿದೆ. ಸ್ಮಶಾನ ಇಲ್ಲದ ಕಾರಣಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಕೆರಕಲಕಟ್ಟಿ ಗ್ರಾಮ ಪಂಚಾಯತ್ ಚಾವಡಿ ಮೇಲೆ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಒಂದಷ್ಟು ಕಾಲ ಪ್ರಕ್ಷುಬ್ಧ ವಾತಾವರಣ ಉಂಟಾಗಿತ್ತು. ನಿನ್ನೆ ರಾತ್ರಿ ಸಾವಿಗೀಡಾಗಿದ್ದ ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ ಕೆರಕಲಮಟ್ಟಿಯ ಕಾಳಪ್ಪ …
Read More »ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..
ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ …
Read More »ವಿಡಿಯೋ: 20 ಸಾವಿರ ಪ್ಲಾಸ್ಟಿಕ್ ಬಾಟಲ್ಗಳಿಂದ ತಯಾರಾದ ಗಣೇಶ
ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್ ಬಾಟಲ್ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. 20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್‌ಗಳನ್ನು ಬಳಸಲಾಗಿದೆ. ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.
Read More »ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು
ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ. ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ …
Read More »ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಕೊಲೆ
ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ. ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ …
Read More »ರಾಜೀನಾಮೆ ಸ್ವೀಕಾರ ಮಾಡಿಲ್ಲ, ನನ್ನನ್ನು ಸಿಲುಕಿಸುವ ಸಂಚು ಇರಬಹುದು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್
ಬಾಗಲಕೋಟೆ, ಆ. 23: ‘ಒಂದು ವರ್ಷವಾದರೂ ನನ್ನ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಹೀಗಾಗಿ, ನನ್ನನ್ನು ಸಿಲುಕಿಸುವ ಸಂಚು ಇರಬಹುದು’ ಎಂದು ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರಿದರೆ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಹೀಗಾಗಿ, ಇನ್ನೂ ರಾಜೀನಾಮೆ ಸ್ವೀಕಾರ ಮಾಡಿಲ್ಲ. ಅಲ್ಲದೆ, ನನ್ನನ್ನು ಯಾವುದರಲ್ಲಾದರೂ ಸಿಕ್ಕಿಸಬಹುದು’ ಎಂದು ಅವರು …
Read More »ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ‍್ಯಾಲಿ …
Read More »ಬ್ಲೇಡ್ನಿಂದ ಶಸ್ತ್ರಚಿಕಿತ್ಸೆ ನಡೆಸಿದ ನಕಲಿ ವೈದ್ಯನ ಬಂದನ
ಬಾಗಲಕೋಟೆ: ಗರ್ಭ ಧರಿಸಿದ್ದ ಎಮ್ಮೆಗೆ ನಕಲಿ ವೈದ್ಯನೊಬ್ಬ ಬ್ಲೇಡ್ನಿಂದ ಶಸ್ತ್ರಚಿಕಿತ್ಸೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಎಮ್ಮೆ ಮತ್ತು ಕರು ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ನಕಲಿ ವೈದ್ಯನ ಹೆಸರು ಶಿವಾನಂದ ಮಲ್ಲಪ್ಪ ರುದ್ರಪ್ಪನವರ. ಈತ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮಳಲಿ ಗ್ರಾಮದವ. ಮುಧೋಳ ತಾಲೂಕಿನ ಕನಸಗೇರಿ ಗ್ರಾಮದ ಹನುಮಂತ ಬಾಳಪ್ಪ ಪೂಜೇರಿ ಅವರಿಗೆ ಸೇರಿದ ಎಮ್ಮೆ ಗರ್ಭ ಧರಿಸಿ ಹಲವು ತಿಂಗಳಾಗಿತ್ತು. ಅನಾರೋಗ್ಯ ಕಾರಣ ಮಾಲೀಕರು ಪಶು …
Read More »ಸಿದ್ದರಾಮಯ್ಯ ಜನ್ಮದಿನಕ್ಕೆ ಹೊರಟಿದ್ದ ವಾಹನ ಅಪಘಾತ: ಒಬ್ಬ ಸಾವು
ಬಾಗಲಕೋಟೆ : ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್, ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಮೃತರಾಗಿದ್ದಾರೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು. ಮಂಗಳವಾರ ಸಂಜೆ ವಾಹನ ಗ್ರಾಮದಿಂದ ಹೊರಟಿತ್ತು. ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾ …
Read More »