ವಿಜಯಪುರ : ರಾಜ್ಯದ ಜಲಸಂಪನ್ಮೂಲ ಸಚಿವನಾಗಿ ಸೇವೆ ಸಲ್ಲಿಸಿರುವ ನಾನು ವಿಜಯಪುರ ಜಿಲ್ಲೆ ಮಾತ್ರವಲ್ಲ ರಾಜ್ಯದ ಎಲ್ಲ ನೀರಾವರಿ ಯೋಜನೆ ಬಗ್ಗೆ ಮಾತನಾಡುವ ಅಧಿಕಾರ ಹೊಂದಿದ್ದೇನೆ. ತಿಡಗುಂದಿ ಶಾಖಾ ಕಾಲುವೆ ಹಾಗೂ 16 ಕೆರೆ ತುಂಬುವ ಯೋಜನೆ ನನ್ನ ಕನಸಿನ ಯೋಜನೆ. ಈ ಬಗ್ಗೆ ವಿಪಕ್ಷದಲ್ಲಿದ್ದರೂ ಮಾತನಾಡುವುದಕ್ಕೆ ಯಾರ ಅನುಮತಿ ಬೇಕಿಲ್ಲ ಎಂದು ಜಲಸಂಪನ್ಮೂಲ ಮಾಜಿ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದೇ ಕಾಂಗ್ರೆಸ್ …
Read More »ಕ್ರಷರ್ ಘಟಕದಲ್ಲಿ ಹಗಲಿನಲ್ಲೇ ಬ್ಲಾಸ್ಟ್: ಕಲ್ಲುಬಡಿದು ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ
ವಿಜಯಪುರ: ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಅಲಿಯಾಬಾದ್ ಕಲ್ಲು ಕ್ರಷರ್ ಘಟಕದ ಬಳಿ ಘಟನೆ ನಡೆದಿದ್ದು ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿನ ಕಲ್ಲಿನ ಕಣಿಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಮೂವರು ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಈ …
Read More »ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿ ವಿಜಯಪುರಕ್ಕೆ ಸ್ಥಳಾಂತರವಾಗಲಿ : ಯತ್ನಾಳ್ ಆಗ್ರಹ
ವಿಜಯಪುರ : ಪಾರಂಪರಿಕ ಹಿನ್ನೆಲೆ ವಿಜಯಪುರ ನಗರ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆ. ಜಗತ್ತಪ್ರಸಿದ್ಧ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ನೂರಕ್ಕೂ ಹೆಚ್ಚು ಸ್ಮಾರಕಗಳು ವಿಜಯಪುರ ನಗರದಲ್ಲಿವೆ. ಹೀಗಾಗಿ ವಿಶ್ವದರ್ಜೆಯ ಸ್ಮಾಕರಗಳೇ ಇಲ್ಲದ ಧಾರವಾಡ ನಗರದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿಯನ್ನು ವಿಜಯಪುರ ಪಾರಂಪರಿಕ ನಗರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಮಂಗಳವಾರ ನಗರದಲ್ಲಿ ಭೂತನಾಳ ಬಳಿ ಪ್ರವಾಸೋದ್ಯಮ ನಿಮಗದಿಂದ ನಿರ್ಮಿಸುತ್ತಿರುವ ತ್ರಿಸ್ಟಾರ್ …
Read More »ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ
ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.
Read More »ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …
Read More »ಅರುಣ್ ಸಿಂಗ್ ಭೇಟಿ ಮಾಡುವವರ ಲಿಸ್ಟ್ ನ್ನು ಹಂಚಿಕೊಂಡ ಯತ್ನಾಳ್
ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಬದಲಾವಣೆಯ ಕುರಿತು ಪರ, ವಿರೋಧ ಚರ್ಚೆ ಕೂಡ ನಡೆದಿದೆ. ಇದರ ಮಧ್ಯೆ ನಾಯಕತ್ವ ಬದಲಾವಣೆ ಕುರಿತು ಮಾತನಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೈಲೆಂಟಾಗಿದ್ದು, ಯಾರ ಕೈಗೂ ಸಿಗುತ್ತಿಲ್ಲ. ಇದೆಲ್ಲದರ ಮಧ್ಯೆ ಇಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಅರುಣ್ ಸಿಂಗ್ ಭೇಟಿಗೆ ಅವಕಾಶ ಕೇಳಿಲ್ಲ ಎಂದಿದ್ದಾರೆ. ಈ ಕುರಿತು ಫೆಸ್ಬುಕ್‍ನಲ್ಲಿ ಪೋಸ್ಟ್ …
Read More »ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ. ನಾಯಕತ್ವ ಬದಲಾವಣೆ …
Read More »ಮದುವೆ ಮಾಡಿಸುತ್ತೇನೆ ಎಂದು ಕರೆದೊಯ್ದು ಬಾಲಕಿ ಕೊಂದ ಸೋದರಮಾವ!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಇತ್ತೀಚೆಗೆ ಪತ್ತೆಯಾದ ಯುವತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೋದರಮಾವನನ್ನು ಬಂಧಿಸಿದ್ದಾರೆ. ಜೂನ್ 9 ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂಬ ಯುವತಿ ಹತ್ಯೆ ಪ್ರಕರಣದಲ್ಲಿ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಬಂಧಿಸಲಾಗಿದೆ. ಕೊಲೆಯಾದ ದಿನದಿಂದ ದೇವರಹಿಪ್ಪರಗಿಯ ಮಲ್ಲಯ್ಯನ …
Read More »ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!
ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …
Read More »ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ
ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …
Read More »