ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …
Read More »ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಸುಪೀರಿಯರ್ ಕನ್ನಡ ಭಾಷೆ ಇದೆ.: ಪ್ರಕರಣ ಪಕ್ಕಾ ಪ್ಲಾನ್ ಯತ್ನಾಳ್
ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಉನ್ನತ ನಾಯಕರಿದ್ದಾರೆ. ಈ ಇಬ್ಬರು ನಾಯಕರಿಂದಲೇ ಸಿಡಿ ಷಡ್ಯಂತ್ರ ನಡೆದಿದೆ. ಇನ್ನು ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ …
Read More »ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!
ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …
Read More »ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!
ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …
Read More »ಕುಡಿದ ಮತ್ತಿನಲ್ಲಿ ನಡೆದೇ ಹೋಯ್ತು ಕೊಲೆ
ವಿಜಯಪುರ: ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ …
Read More »ಜೈಲು ಪಾಲಾದ ಸಿಡಿಪಿಓಗಳು!
ವಿಜಯಪುರ : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು ಮೂವರು ಸಿಡಿಪಿಓ ಗಳನ್ನು ಪೊಲೀಸರು ಜೈಲಿಗಟ್ಟಿರುವ ಘಟನೆ ನಡೆದಿದೆ. ಜಮಖಂಡಿಯ ಗೋಪಾಲ್ ತೇಲಿ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಗಿರೀಶ್ ತೇಲಿ, ಮಹಾದೇವ ತೇಲಿ ಎಂಬ ಅಧಿಕಾರಿಗಳು ಅಂಗನವಾಡಿ ಮಕ್ಕಳಿಗೆ ಸೇರಬೇಕಿದ್ದ ಕೆಎಂಎಫ್ ಹಾಲಿನ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಜಮಖಂಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದರು. …
Read More »ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ
ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪಟ್ಟಣದ ಅವರ …
Read More »ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!
ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮುಂದೆ ನನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್ ವೈ ಆಡಳಿತವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ …
Read More »ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು
ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »