ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ (38) ನಾಪತ್ತೆಯಾಗಿರುವ ಮೀನುಗಾರರು. ಗುರುವಾರ ಸಂಜೆ ತೆಪ್ಪದ ಮೂಲಕ ಮೂವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಮಳೆಗಾಳಿಗೆ ತೆಪ್ಪ ಮುಗಿಚಿ ಬಿದ್ದಿದೆ. ಹೀಗಾಗಿ ಮೂವರ ಪೈಕಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದಾನೆ. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. …
Read More »ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ……
ವಿಜಯಪುರ: ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ ಮಾಡಿ ಆತಂಕ ಮೂಡಿಸಿದ್ದಾನೆ. ಜಿಲ್ಲೆಯ ಇಂಡಿಯಿಂದ ಬೈಕಿನಲ್ಲಿ ಸಹೋದರನ ಜೊತೆಗೆ ಲಚ್ಯಾಣ ಗ್ರಾಮಕ್ಕೂ ತೆರಳಿರುವ ವ್ಯಕ್ತಿ ಬುಧವಾರ ದಿಢೀರನೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈತ ಕಲಬುರಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮುಗಿಸಿದ್ದಾನೆ. ಮೇ 16 ರಂದು ಮುಂಬೈನಿಂದ ಪತ್ನಿ ತವರೂರಿಗೆ ತೆರಳಿದ್ದ ವೇಳೆ ಕ್ವಾರಂಟೈನ್ ಗೆ ಒಳಗಾಗಿದ್ದ ಈತ …
Read More »ನೀರು-ಕೆಸರಲ್ಲಿ ಬೈಕ್ ತಳ್ಳುತ್ತಾ ಕರ್ನಾಟಕಕ್ಕೆ ಎಂಟ್ರಿ………..
ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚಾಗಿ ಪತ್ತೆಯಾಗಿದೆ. ಇದರಿಂದ ಜಿಲ್ಲಾಡಳಿತ ಒಂದಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಜನ ಜಿಲ್ಲಾಡಳಿತದ ಕಣ್ಣಿನಿಂದ ತಪ್ಪಿಸಿಕೊಂಡು ಕಳ್ಳದಾರಿ ಮೂಲಕ ಎಂಟ್ರಿ ಆಗುತ್ತಿದ್ದಾರೆ. ಕರ್ನಾಟಕಕ್ಕೆ ಮುಂಬೈನದ್ದೇ ಟೆನ್ಶನ್. ಮಹಾರಾಷ್ಟ್ರದಿಂದ ಬರೋರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರ ಗಡಿದಾಟಿದೆ. ಈಗ 7 ದಿನ ಕ್ವಾರಂಟೈನ್‍ಗೆ ಸೂಚಿಸಿದ್ದರಿಂದ ಮುಂಬೈನಿಂದ ಬರುವವರು ಕಳ್ಳಾಟ ಮಾಡುತ್ತಿದ್ದಾರೆ. ಕ್ವಾರಂಟೈನ್ ತಪ್ಪಿಸಿಕೊಳ್ಳಲು ನದಿಯಿಂದ …
Read More »ಮಹಾರಾಷ್ಟ್ರದಲ್ಲಿ ಮಳೆ ಆರಂಭ ; ಜೂನ್ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಾಖಲು
ವಿಜಯಪುರ(ಜೂ. 06): ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ನೀರಿನ ಒಳಹರಿವು ಆರಂಭವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜೂನ್ ಮೊದಲ ವಾರದಲ್ಲಿ ನೀರಿನ ಒಳಹರಿವು ಆರಂಭವಾಗಿದ್ದು ಗಮನಾರ್ಹವಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ನಿನ್ನೆಯಿಂದಲೇ ನೀರಿನ ಒಳಹರಿವು ಆರಂಭವಾಗಿದೆ. ನಿನ್ನೆ 12,761 ಕ್ಯೂಸೆಕ್ಸ್ ನೀರಿನ ಒಳಹರಿವು …
Read More »ಕೊರೊನಾ ಪಾಸಿಟಿವ್- ಕರೆದೊಯ್ಯಲು ಬಂದ ಅಧಿಕಾರಿಗಳಿಗೆ ಅಜ್ಜಿ ಅವಾಜ್
ವಿಜಯಪುರ: ಕೊರೊನಾ ಪಾಸಿಟಿವ್ ಇರುವವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದವರಿಗೆ ಅಜ್ಜಿಯೊಬ್ಬರು ಅವಾಜ್ ಹಾಕಿದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ತಾಂಡಾದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಬಂದವರನ್ನು ಮೊದಲು 14 ದಿನ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಆ ಬಳಿಕ ಸ್ವಾಬ್ ಟೆಸ್ಟ್ ಗೆ ಕಳಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದಂತೆ ವರದಿಗೂ ಮುನ್ನವೇ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ ಅವರ ವರದಿ ಪಾಸಿಟಿವ್ ಬಂದ ಕಾರಣಕ್ಕೆ …
Read More »ವಿಜಯಪುರದಲ್ಲಿ ಗರಿಷ್ಠ 45.3 ಡಿಗ್ರಿ ಉಷ್ಣಾಂಶ ದಾಖಲು………
ವಿಜಯಪುರ: ಗುಮ್ಮಟಗಳ ಜಿಲ್ಲೆ ವಿಜಯಪುರ ಜನರಲ್ಲಿ ಒಂದು ಕಡೆ ಕೊರೊನಾ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ಭಯಾನಕ ಬಿಸಿಲಿನಿಂದ ಆತಂಕ ಶುರುವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ವಿಜಯಪುರ ಜಿ. ಆಲಮೇಲ ಪಟ್ಟಣದಲ್ಲಿ ದಾಖಲಾಗಿದೆ. ಗರಿಷ್ಠ 45.3 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ …
Read More »ಹೊರ ರಾಜ್ಯದ ಪುಂಡರಿಂದ ಕ್ವಾರಂಟೈನ್ ಕೇಂದ್ರದ ಅಡುಗೆ ಕೆಲಸದವನ ಮೇಲೆ ಹಲ್ಲೆ……..
ವಿಜಯಪುರ: ಕೊರೊನಾ ವಾರೊಯರ್ಸ್‍ಗಳಂತೆಯೇ ಕೆಲಸ ಮಾಡುತ್ತಿರುವ ಕ್ವಾರಂಟೈನ್ ಕೇಂದ್ರದ ಅಡುಗೆ ಕೆಲಸದವನ ಮೇಲೆ ಹೊರ ರಾಜ್ಯದ ಪುಂಡರು ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಸಿಂದಗಿಪಟ್ಟಣದ ಸರ್ಕಾರಿ ಶಾಲೆ, ವಸತಿ ನಿಲಯದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಡುಗೆ ಕೆಲಸ ಮಾಡುತ್ತಿದ್ದ ಮೈಬೂಬಸಾಬ ಬನ್ನೆಟ್ಟಿ(60) ಅವರ ಮೇಲೆ ಯುವಕರಾದ ದೇವರನಾವದಗಿಯ ಅರುಣ ರಾಠೋಡ್ ಹಾಗೂ ರಾಹುಲ್ ರಾಠೋಡ್ ಹಲ್ಲೆ ನಡೆಸಿದ್ದಾರೆ. ಯುವಕರಿಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೊರೊನಾ ವೈರಸ್ ಹಿನ್ನೆಲೆ ಹೊರ ರಾಜ್ಯದಿಂದ …
Read More »ಗೋವಾದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ………..
ಗೋವಾ ರಾಜ್ಯ ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ ವಿವಿಧ ರಾಜ್ಯಗಳಿಂದ ಆಗಮಿಸಿದ ಒಟ್ಟು 17,626 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಂದ ಆಗಮಿಸಿದವರಲ್ಲಿ ಅಧಿಕೃತ ಪರವಾನಿಗೆ ಪಡೆದು 9987 ಹಾಗೂ ಪರವಾನಿಗೆ ಪಡೆಯದೆ 7639 ಜನರು ಜಿಲ್ಲೆಗೆ ಆಗಮಿಸಿದ್ದು, ಒಟ್ಟು 17,626 ಜನರು ಜಿಲ್ಲೆಗೆ ಆಗಮಿಸಿದ್ದು ಅವರೆಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ನಗರ …
Read More »ವಿಜಯಪುರದಲ್ಲಿ ಬಸ್ ಸಂಚಾರ ಆರಂಭ; ಆದರೆ ಪ್ರಯಾಣಿಕರದ್ದೇ ಸಮಸ್ಯೆ; ಯಾಕೆ ಗೊತ್ತಾ?
ವಿಜಯಪುರ(ಮೇ.19): ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 55 ದಿನಗಳ ಬಳಿಕ ಬಸ್ ಸಂಚಾರ ಆರಂಭವಾಗಿದ್ದು, ಬೆಳಿಗ್ಗೆ ಕೇವಲ ನಾಲ್ಕಾರು ಜನರು ಮಾತ್ರ ಬಸ್ ನಲ್ಲಿ ಸಂಚರಿಸುತ್ತಿರುವುದು ಕಂಡು ಬಂದಿದೆ. ನಗರದಲ್ಲಿ ಇಂದು ಸುಮಾರು 200 ರಿಂದ 250 ಬಸ್ಸುಗಳನ್ನು ಓಡಿಸಲಾಗುತ್ತಿದೆ. ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 180 ರಿಂದ 190 ಮತ್ತು ಸೆಟಲೈಟ್ ಬಸ್ ನಿಲ್ದಾಣದಿಂದ ಸುಮಾರು …
Read More »ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ………..
ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಶ್ರಮಿಕ್ ವಿಶೇಷ ರೈಲಿನ ಮೂಲಕ ಮಹಾರಾಷ್ಟ್ರದ ಸಿಂಧದುರ್ಗದಿಂದ ಒಟ್ಟು 1,590 ಕಾರ್ಮಿಕರು ಬೆಳಗಿನ ಜಾವ 4 ಗಂಟೆಗೆ ವಿಜಯಪುರಕ್ಕೆ ಬಂದಿಳಿಯಲಿದ್ದಾರೆ. ಜಿಲ್ಲೆಗೆ ಆಗಮಿಸುವ ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಕಾರ್ಮಿಕರನ್ನು ಅವರ ತಾಲೂಕುಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ರೈಲ್ವೇ ನಿಲ್ದಾಣದಿಂದಲೇ ಕಾರ್ಮಿಕರನ್ನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲು …
Read More »