ವಿಜಯಪುರ: ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.
Read More »ಸಚಿವ ಸಂಪುಟ ವಿಸ್ತರಣೆ ಆಗಲಿ, ಬಿಡಲಿ ನಾನಂತೂ ಅದರಲ್ಲಿ ಇಲ್ಲ ಎಂದ ಯತ್ನಾಳ್
ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಪುಟ ವಿಸ್ತರಣೆ ಆಗಲಿ, ಬಿಡಲಿ ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನಗೆ ಕರೆ ಮಾಡಿದ್ದರು. ಡಿಸೆಂಬರ್ ನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಈ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಲಾಗುತ್ತದೆ. ವಿಜಯಪುರ ಮಹಾನಗರ ಪಾಲಿಕೆಗೆ ಹೆಚ್ಚುವರಿ 100 ಕೋಟಿ …
Read More »ಭಾರಿ ಮಳೆಗೆ ಉಕ್ಕಿ ಹರಿಯುತ್ತಿವೆ ಹಳ್ಳಗಳು
ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಉಕ್ಕಿ ಬಂದ ಹಳ್ಳದಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ. 108 ವಾಹನ ಅಂಬುಲೆನ್ಸ್ ವಾಹನ ಸಂಚಾರಕ್ಕೂ ಹಳ್ಳ ಅಡ್ಡಿಯಾಗಿದೆ. ಕೆಳ ಹಂತದ ಸೇತುವೆ ಮೇಲೆ ಹಳ್ಳದ ನೀರು ಹರಿಯುತ್ತಿರು ವದರಿಂದ 108 ಸಿಬ್ಬಂದಿ ಪರದಾಡಬೇಕಾದ ಪರಿಸ್ಥಿತಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರೀ ಮಳೆಯಿಂದ ಹಳ್ಳದ ನೀರು ತುಂಬಿ …
Read More »ವಿಜಯಪುರ ಪಾಲಿಕೆ ಚುನಾವಣೆ : ವಾಮಾಚಾರ ಹಾವಳಿ; ಜನರ ಆಕ್ರೋಶ
ವಿಜಯಪುರ: ವಿಜಯಪುರ ಮಹಾನಗರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಈ ಹಂತದಲ್ಲಿ ಮಾಟ-ಮಂತ್ರದ ಕ್ಷುದ್ರ ಚಟುವಟಿಕೆಗಳು ತಲೆ ಎತ್ತಿದ್ದು, ಸಾರ್ವಜನಿಕರನ್ನು ಆತಂಕ ಪಡುವಂತೆ ಮಾಡಿವೆ. ವಾರ್ಡ್ ನಂ. 14 ರಲ್ಲಿ ಬರುವ ನಗರದ ಶಿಖಾರಖಾನೆ ಪ್ರದೇಶದ ಅನಂತಲಕ್ಷ್ಮೀ ಹಾಲ್ ಬಳಿ ಕಿಡಿಗೇಡಿಗಳು ಮಾಟ ಮಂತ್ರ ಮಾಡಿಸಿದಂತೆ ಕುಂಕು, ಅರಿಷಿಣ, ನಿಂಬೆಹಣ್ಣು, ಎಲೆ, ಮೊಟ್ಟೆ, ಹಣ ಸೇರಿದಂತೆ ಹೂವುಗ ಳೊಂದಿಗೆ ಮಾಟ ಮಂತ್ರ ಮಾಡಿ ಎಸೆದಿದ್ದಾರೆ. ಸದರಿ ವಾರ್ಡ್ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ …
Read More »ಬ್ರಿಟಿಷರೊಂದಿಗೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನವರು ದೇಶ ಭಕ್ತರಲ್ಲ: ರಾಮಲಿಂಗಾ ರೆಡ್ಡಿ
ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು. ಸ್ವಾತಂತ್ರ್ಯ …
Read More »ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು. ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು. ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.
Read More »ಬಸ್ ನಲ್ಲಿ ಪ್ರಾರಂಭವಾದ ಲವ್ ಕೊಲೆಯಲ್ಲಿ ಅಂತ್ಯ
ವಿಜಯಪುರದಲ್ಲೊಂದು ಬಸ್ ನಲ್ಲಿ ಶುರುವಾದ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ. ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ ಬಲಿಯಾಗಿದ್ದಾರೆ. ಪ್ರಿಯತಮನಿಗೋಸ್ಕರ ಪ್ರಿಯತಮೆ ವಿಷ ಕುಡಿದರೆ ಇತ್ತ ತನ್ನ ಮಗಳ ಸಾವಿಗೆ ಕಾರಣನಾದ ಎಂದು ಯುವತಿಯ ಪ್ರೇಮಿಯನ್ನು ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಕಳ್ಳಕವಟಗಿಯಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ತಿಕೋಟ ತಾಲೂಕಿನ ಕಳ್ಳಕವಟಗಿಯ ಅಪ್ರಾಪ್ತ ಯುವತಿ ಹಾಗೂ ಘೊಣಸಗಿಯ …
Read More »ಬೈಕ್ ಗೆ ಸರಕಾರಿ ಬಸ್ ಡಿಕ್ಕಿ ಮಹಿಳೆ ಸಾವು
ವಿಜಯಪುರ… ಬೈಕ್‌ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ, ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಯಕ್ಕುಂಡಿ ರಸ್ತೆಯಲ್ಲಿ ನಡೆದಿದೆ. ಮುತ್ತವ್ವ ಗಸ್ತಿ ಮೃತಪಟ್ಟಿರುವ ಮಹಿಳೆಯಾಗಿದ್ದು ಅಪಘಾತದ ಬಳಿಕ ಬಸ್ ಸ್ಥಳದಲ್ಲಿಯೇ ಬಿಟ್ಟು ಕಂಡಕ್ಟರ್, ಚಾಲಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್ ಮಾಡಬೇಕು: ಬಸವಗೌಡ ಪಾಟೀಲ
ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್ಎಸ್ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್ಎಸ್ಎಸ್ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. …
Read More »ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ವಿಜಯಪುರ : ಕೋವಿಡ್ ನಂತರದ ಭಾರತಕ್ಕೆ ವಿಶ್ವದಲ್ಲೇ ವಿಶೇಷ ಸ್ಥಾನ, ವಿಶೇಷ ಗುರುತಿಸುವಿಕೆ ಆರಂಭಗೊಂಡಿದೆ. 21ನೇ ಶತಮಾನದಲ್ಲಿ ಬಲಿಷ್ಠ ಭಾರತ ಕಟ್ಟುವ ಕನಸು ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಸಾಗಿದೆ. ಯುಎನ್ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಾತಿನಿಧ್ಯವಿಲ್ಲದೇ ಯಾವ ಸಭೆಗಳೂ ನಡೆಯುವುದಿಲ್ಲ. ಅಷ್ಟರ ಮಟ್ಟಿಗೆ ಭಾರತ ವಿಶ್ವಕ್ಕೆ ಅನಿವಾರ್ಯ ಎನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಶುಕ್ರವಾರ ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ …
Read More »