Breaking News

ಬೀದರ್

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

ಬೀದರ್: ಜಿಲ್ಲೆಯ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌  ಅವರು ಮಠಮಾನ್ಯಗಳು, ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್ ವಿಶ್ವಶಾಂತಿ ಟ್ರಸ್ಟ್, ತಡೋಳ, ಹಾರಕೋಡ ಶ್ರೀ ಚನ್ನಬಸವೇಶ್ವರ ಸಂಸ್ಥಾನ, ದೇಗಲಮಾಡಿ ಬಸವಲಿಂಗ ಅವಧೂತ ಆಶ್ರಮ, ಹುಡುಗಿ ಹಿರೇಮಠ ಟ್ರಸ್ಟ್, ಬೆಲ್ದಾಳೆಯ ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸೇರಿದಂತೆ ಸುಮಾರು 28 ಮಠಗಳಿಗೆ ರಾಜ್ಯ …

Read More »

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್  ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ …

Read More »

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

ಬೀದರ್: ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ 9 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಮಾಂಗರ್ ವಾಡಿ ಗಲ್ಲಿ ಬಳಿ ನಡೆದಿದೆ. 9 ವರ್ಷದ ರುದ್ರ ಮೃತ ಬಾಲಕ. ಮಾರುತಿ ಸೂಜುಕಿ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಮೃತ ಬಾಲಕ ಅಂಗಡಿಯಿಂದ ಮನೆಗೆ ವಾಪಸ್ಸಾಗುತ್ತಿದ್ದ. ಈ ವೇಳೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ …

Read More »

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು  ಬಡಿದು ಯುವರೈತ  ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ಯುವರೈತ. ಕೆಲಸದ ನಿಮಿತ್ತ ರಾಹುಲ್ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಸಿಡಿಲು ಸಹಿತ ಮಳೆ ಆರಂಭವಾಗಿ ಜಮೀನಿನಲ್ಲಿದ್ದ ರಾಹುಲ್‌ಗೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ. ಬೀದರ್, ಔರಾದ್, …

Read More »

ತೈಲ ಅಭಾವ – ಬೀದರ್‌ನಲ್ಲಿ 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಕ್ಲೋಸ್

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೀದರ್‌ನ  ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಅಭಾವ ಸೃಷ್ಟಿಯಾಗಿ ಬಂಕ್‌ಗಳು  ಕ್ಲೋಸ್ ಆಗಿವೆ. ತೈಲ ಕೊರತೆ ವದಂತಿ ಹಿನ್ನೆಲೆ ಜನ ಮುಗಿಬಿದ್ದು ಪೆಟ್ರೋಲ್, ಡಿಸೇಲ್ ಖರೀದಿಸಿದ್ದು, ಬೀದರ್ ನಗರದ ಬಸವೇಶ್ವರ ವೃತದ ಬಳಿ ಇರುವ ನಯಾರಾ ಪೆಟ್ರೋಲ್ ಬಂಕ್ ಸೇರಿದಂತೆ 7ಕ್ಕೂ ಅಧಿಕ ಬಂಕ್‌ಗಳಲ್ಲಿ ಪೆಟ್ರೋಲ್, ಡಿಸೇಲ್ ಖಾಲಿಯಾಗಿ ಬಂಕ್‌ಗಳನ್ನು ಬಂದ್ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ ಪೆಟ್ರೋಲ್, ಡಿಸೇಲ್ …

Read More »

ಪ್ಯಾನ್‌ಗೆ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. …

Read More »

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್  ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ  ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ  ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಸದ್ಯ …

Read More »

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ  ಪ್ರಧಾನಿ ಮೋದಿ  ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್‌ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು …

Read More »

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಬೀದರ್  ಜನ್ರ ಪಾಲಿಗೆ ಇದ್ದು ಇಲ್ಲವಾಗಿದೆ. ಗೃಹಲಕ್ಷ್ಮಿ ಹಣದಲ್ಲೇ ಬದುಕಿರುವ ಬಡಪಾಯಿ ಮಹಿಳೆಯರಿಗೆ ಸರಿಯಾಗಿ ಹಣ ನೀಡದೇ ಸತ್ತವರ ಖಾತೆಗೆ 10 ಕೋಟಿ ರೂ. ಹಣ ನೀಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಹೌದು, ಹಣ ಬಿಡುಗಡೆ ವಿಳಂಬ ಸೇರಿ ತಾಂತ್ರಿಕ ಸಮಸ್ಯೆಗಳಿಂದ ಸದಾ ಚರ್ಚೆಗೆ ಬರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂಡು ಯಡವಟ್ಟು ಬಟಾಬಯಲಾಗಿದೆ. ಬೀದರ್ ಜಿಲ್ಲೆಯಲ್ಲಿ ಅಧಿಕಾರಿಗಳ ನಿಷ್ಕಾಳಜಿಯಿಂದ …

Read More »

ವರ್ಷದ ಮೊದಲ ಚಂದ್ರಗ್ರಹಣ – ಬೀದರ್‌ನ ಪ್ರಮುಖ ದೇವಾಲಯಗಳು ಬಂದ್

ಬೀದರ್: ಇಂದು ವರ್ಷದ ಮೊದಲ ಚಂದ್ರಗ್ರಹಣ ಹಿನ್ನೆಲೆ ಬೀದರ್ ಜಿಲ್ಲೆಯ ಪ್ರಮುಖ ದೇವಾಲಯಗಳ ಬಾಗಿಲು ಬಂದ್ ಮಾಡಲಾಗಿದೆ. ಬೀದರ್ ಹೊರವಲಯದಲ್ಲಿರುವ ದಕ್ಷಿಣ ಭಾರತದ ಏಕೈಕ ಝರಣಿ ನರಸಿಂಹಸ್ವಾಮಿ ಗುಹಾಂತರ ದೇವಾಲಯದ ಬಾಗಿಲು ಬಂದ್ ಮಾಡಿ, ಪ್ರಧಾನ ಅರ್ಚಕರು ಬೀಗ ಹಾಕಿದ್ದಾರೆ. ಒಂದು ಕಿ.ಮೀ ದೂರ ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು ಹೋಗಿ ನರಸಿಂಹಸ್ವಾಮಿ ದೇವರ ದರ್ಶನ ಪಡೆಯುತ್ತಿದ್ದ ಭಕ್ತರಿಗೆ ಬ್ರೇಕ್ ಹಾಕಿ, ಚಂದ್ರಗ್ರಹಣದ ಸ್ಪರ್ಶ ತಟ್ಟದಂತೆ ದೇವರಿಗೆ ಅಷ್ಟದಿಗ್ಬಂಧನ ಹಾಕಲಾಗಿದೆ. ದೇವರ …

Read More »