ಬೀದರ್: ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಸಸ್ತಾಪುರ ಬಂಗ್ಲಾ ಬಳಿಯ ಶಾಸಕರ ನಿವೇಶನ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಿತು. ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿ ವಿಧಾನಗಳನುಸಾರ ಕೊರೊನಾ ನಿಯಮಗಳನ್ನನುಸರಿಸಿ ಅಗಲಿದ ಶಾಸಕರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಅಂತ್ಯಕ್ರಿಯೆ ವೇಳೆ ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ …
Read More »ಮಕ್ಕಳಿಗೆ ಸಿಗಬೇಕಾದ ಪೌಷ್ಟಿಕ ಆಹಾರ ಅಂಗನವಾಡಿ ಕಾರ್ಯಕರ್ತೆಯರ ಮನೆಗೆ
ಬೀದರ್ : ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಮುಖಾಂತರ ಸರ್ಕಾರ ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ನೀಡುತ್ತಿದೆ. ಆದರೆ ಗಡಿ ಜಿಲ್ಲೆ ಬೀದರನಲ್ಲಿ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಪೌಷ್ಠಿಕ ಆಹಾರ ಧಾನ್ಯ ಅಂಗನವಾಡಿ ಕಾರ್ಯಕರ್ತೆಯರ ಹೊಟ್ಟೆ ಪಾಲಾಗುತ್ತಿದೆ. ಪಾಲಕರ ತಿಳುವಳಿಕೆ ಕೊರತೆಯಿಂದ ಬೀದರ್ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳ ಪ್ರಮಾಣ ಗಣನೀಯವಾಗಿದೆ. ಈ ಸಮಸ್ಯೆಯನ್ನು ಕೇಂದ್ರ …
Read More »ಮಾಜಿ ಶಾಸಕರ ಪುತ್ರ ಕೊರೋನಾ ಸೋಂಕಿಗೆ ಬಲಿ
ಬೀದರ್ : ಔರಾದ ತಾಲೂಕಿನ ಸಂತಪೂರ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪುತ್ರ ಅನೀಲ್ ಗುಂಡಪ್ಪ ಬಿರಾದಾರ (47) ಹೆಮ್ಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನೀಲ್ ಇಂದು (ಭಾನುವಾರ) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೋವಿಡ್ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಬೀದರಿನಲ್ಲಿ ಆರಂಭಿಕ ಚಿಕಿತ್ಸೆ ಪಡೆದು, ನಂತರ ಕಳೆದ 10 ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ …
Read More »ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ
ಬೀದರ್ : ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿನುಸಾರ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲು ಮನವಿ ಮಾಡಿದರು. ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು …
Read More »ಸಂಸದ ಭಗವಂತ್ ಖೂಬಾ ಸೇರಿ ಬೀದರ್‌ನಲ್ಲಿ 35 ಜನರಿಗೆ ಕೊರೊನಾ
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ಸಂಸದರು ಸೇರಿದಂತೆ 35 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಸಂಸದ ಭಗವಂತ್ ಖೂಬಾಗೆ ಇಂದು ಪಾಸಿಟಿವ್ ಧೃಡವಾಗಿದ್ದು, ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನಲ್ಲಿ 11, ಬಾಲ್ಕಿಯಲ್ಲಿ 11, ಹುಮ್ನಬಾದ್ ನಲ್ಲಿ 10 ಬಸವಕಲ್ಯಾಣದಲ್ಲಿ 3 ಜಿಲ್ಲೆಯಾದ್ಯಂತ ಒಟ್ಟು 35 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ದೃಢಪಟ್ಟಿವೆ. ಸಂಸದರಿಗೆ ಹೇಗೆ ಕೊರೊನಾ ವಕ್ಕಿಸಿತು ಎಂಬುದೇ ಆಶ್ಚರ್ಯವಾಗಿದ್ದು, ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಉಳಿದಂತೆ …
Read More »ಸರ್ಕಾರ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡಬೇಕು : ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ : ಸರ್ಕಾರ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡುವ ಕೆಲಸ ಮಾಡಬೇಕಾಗಿದ್ದು. ಆ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳು ಬಹುಮುಖ್ಯವಾಗಲಿವೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾದ ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದ …
Read More »ಬೀದರ್‍ನಲ್ಲಿ 5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು
ಬೀದರ್: ಗಡಿ ಜಿಲ್ಲೆ ಬೀದರಿನಲ್ಲಿ ಕೊರೊನಾ ಮರಣ ಕೇಕೆ ಮುಂದುವರಿದಿದೆ. ಬೀದರ್‍ನಲ್ಲಿ 5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಬೀದರಿನಲ್ಲಿ 4 ಹಾಗೂ ಬಸವಕಲ್ಯಾಣದಲ್ಲಿ ಒಬ್ಬರನ್ನು ಕೊರೊನಾಗೆ ಇಂದು ಬಲಿಯಾಗಿದ್ದಾರೆ. ಬೀದರ್, ಬಸವಕಲ್ಯಾಣ, ಭಾಲ್ಕಿ, ಔರಾದ್‍ನಲ್ಲಿ ಸೇರಿ ಒಟ್ಟು 51 ಜನಕ್ಕೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಅಸ್ತಮಾ, ಉಸಿರಾಟ, ಜ್ವರ, ಹೃದಯ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಐವರು ಇಂದು ಸಾವನ್ನಪ್ಪಿದ್ದಾರೆ. ಇಂದು 51 …
Read More »ಬೀದರ್‌ನಲ್ಲಿ ಕೊರೊನಾ ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನ ಬಲಿ…….
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಕೊರೊನಾ ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನರನ್ನು ಬಲಿ ಪಡೆದಿದ್ದು, ಜಿಲ್ಲೆಯ ಜನರನ್ನು ಭಯಭೀತರನ್ನಾಗಿಸಿದೆ. ಬೀದರ್ ನ ಹಳೆ ನಗರದ 55 ವರ್ಷದ ವ್ಯಕ್ತಿ ಹಾಗೂ 70 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಭಾಲ್ಕಿ ಪಟ್ಟಣದ 50 ಹಾಗೂ 31 ವರ್ಷದ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪಟ್ಟಣದ 24 ವರ್ಷದ ಯುವತಿ ಹಾಗೂ ಹುಮ್ನಬಾದ್ ಪಟ್ಟಣದ 70 ವರ್ಷದ ವೃದ್ಧೆ ಕೊರೊನಾ …
Read More »ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ.
ಬೀದರ : ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ. ಅವರು ಸಹ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಕಾರಾಂಜ ಜಲಾಶಯದ ಬಳಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಕಾರಾಂಜ ಜಲಾಶಯದಲ್ಲಿ ಪ್ರಸ್ತುತ 0.3 ಟಿಎಂಸಿ ನೀರಿದ್ದು ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಕ್ಕೆ ಗೋದಾವರಿ ಇಲ್ಲವೇ …
Read More »ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ
ಬೀದರ್: ಕಲಬುರಗಿ, ದಕ್ಷಿಣ ಕನ್ನಡ ಮತ್ತು ಗಡಿ ಜಿಲ್ಲೆ ಬೀದರ್ ಸೇರಿದಂತೆ ಅನೇಕ ಕಡೆ ಬೆಳಗ್ಗೆಯಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ತಡರಾತ್ರಿ ಕೂಡ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಇಂದು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುವ ಸಾಧ್ಯತೆ ಇದೆ. ರೈತರು ಬಿತ್ತನೆಗಾಗಿ ಬೀಜಗಳನ್ನು ಸಿದ್ಧ ಮಾಡಿಕೊಂಡು ಮಳೆಯಾಗಿ ಕಾದುಕುಳಿತ್ತಿದ್ದರು. ಹೀಗಾಗಿ ಇಂದು ವರುಣ ದೇವ ಕೃಪೆ ತೋರಿದ್ದಾನೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿರುವ ಕಾರಣ ರೈತರ …
Read More »
Laxmi News 24×7