Breaking News

ಬೆಂಗಳೂರು

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದಾನಂದನಗರದ ಎನ್‌ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್​​ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ. ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ …

Read More »

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್​ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ. ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ …

Read More »

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …

Read More »

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ. ವಯಸ್ಸಾದಂತೆ ಅವರಿಗೆ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಆನೇಕರು ವೃದ್ಧರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿರುತ್ತಾರೆ. ಇದೆಲ್ಲವನ್ನೂ ಮನಗಂಡಿರುವ ಸರ್ಕಾರ, 65 ವರ್ಷದ ಅಥವಾ ಮೇಲ್ಪಟ್ಟ ವೃದ್ಧರಿಗಾಗಿ 2007 ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿತ್ತು. ಏನಿದು ಸಂಧ್ಯಾ ಸುರಕ್ಷಾ ಯೋಜನೆ? ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು, ವಿಶೇಷಚೇತನರು, ಅವಿವಾಹಿತ ಮಹಿಳೆಯರಿಗೆ …

Read More »

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್​ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್‌ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …

Read More »

ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. …

Read More »

ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಸೋದರ ಸಂಬಂಧಿಯನ್ನ ಹೆದರಿಸಲು ಸಾರ್ವಜನಿಕರ ಮೇಲೆ ಲಾಂಗ್ ಹಾಗೂ ಕಬ್ಭಿಣದ ರಾಡ್ ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಹಾಗೂ ತಲೆಮರೆಸಿಕೊಂಡಿರುವ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋರ್ಟರ್ ಬಾಯ್ ಆಗಿ ಕೆಲಸ ಮಾಡಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ …

Read More »

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಚೆನ್ನಮ್ಮ, ರಾಯಣ್ಣಿಗೆ ಗೌರವ

ಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ (Bengaluru) ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್​​ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು, ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ …

Read More »

ಅಹಿಂದ ಒಂದು ಮತಬ್ಯಾಂಕ್ ಅಲ್ಲ, ಇದು ಭಾರತದ ಆತ್ಮಸಾಕ್ಷಿಯ ಧ್ವನಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ನಾನು ದೃಢವಾಗಿ ಹೇಳುತ್ತೇನೆ. ಕರ್ನಾಟಕ ಮಾದರಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧವಾಗಿದೆ. ಇದು ಭ್ರಾತೃತ್ವದಲ್ಲಿ ಬೇರೂರಿದೆ, ಡೇಟಾ ಆಧಾರಿತವಾಗಿದೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಳವಡಿಕೆಗೆ ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ಕೆಪಿಸಿಸಿ ಭಾರತ್ ಜೋಡೋದಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, OBC ಸಲಹಾ ಸಮಿತಿಯ ಪಾತ್ರ ಮತ್ತು ಮುಂದಿನ ದಾರಿ, ಈ ಸಮಿತಿಯು ಕೇವಲ ಔಪಚಾರಿಕವಲ್ಲ, ಇದು …

Read More »