Breaking News

ಬೆಂಗಳೂರು ಗ್ರಾಮಾಂತರ

ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ; ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದ್ದು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, …

Read More »

ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …

Read More »

ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್​ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್‌ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ. ನಕಲಿ …

Read More »

ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್‌ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿದೆ. ಡಿಸೆಂಬರ್‌ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನವೆಂಬರ್‌ 26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ …

Read More »

ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಟ ಶರತ್ ಕುಮಾರ್ ಹೇಳಿದ್ದಾರೆ. ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು ಎಂದು ಹೇಳಿದ್ದಾರೆ. ಅಪ್ಪು ನಿಧನದ ಸುದ್ದಿ ಕೇಳಿ ದೇವರನ್ನು ಕ್ಷಮಿಸಲಾಗಲಿಲ್ಲ. …

Read More »

ಅಪ್ಪು ನಿಧನದ ಸುದ್ದಿ ಶಿವಣ್ಣನಿಗೆ ಹೇಗಾಯ್ತು ಗೊತ್ತಾ..? ಆ ಕರಾಳ ಕ್ಷಣದ ಬಗ್ಗೆ ಮಾತಾಡಿದ್ದಾರೆ..!

ಬೆಂಗಳೂರು: . ಒಂದು ಕಡೆ ಭಜರಂಗಿ 2 ಭರ್ಜರಿಯಾಗಿ ಓಡ್ತಾ ಇತ್ತು.. ಆ ಸಂತೋಷ ಖುಷಿಯಲ್ಲಿ ಅಭಿಮಾನಿಗಳು ತೇಲ್ತಾ ಇದ್ರು. ಅಭಿಮಾನಿಗಳ ನಡುವೆಯೇ ಶಿವಣ್ಣ ಕೂಡ ಕೂತು ಎಂಜಾಯ್ ಮಾಡ್ತಾ ಇದ್ರು. ಆ ಖುಷಿಯ ನಡುವೆ ಬರ ಸಿಡಿಲು ಬಡಿದಂತೆ ಆದದ್ದು ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ. ಹೌದು, ಸಿನಿಮಾ ನೋಡುತ್ತಿದ್ದ ಎಲ್ಲರಿಗೂ ಒಂದು ಕ್ಷಣ ದಿಗ್ಬ್ರಮೆಯುಂಟು ಮಾಡಿತ್ತು. ಸುಮಾರು 11 ಗಂಟೆಗೆ ಅಪ್ಪು ಆಸ್ಪತ್ರೆ ಸೇರಿದ್ರು. ಅದಾಗಲೇ ಇಲ್ಲ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …

Read More »

ರಾಜ್ಯೋತ್ಸವ: ‍‍ಪ್ರಶಸ್ತಿ ಮೊತ್ತ ₹ 1 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ

ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ ‌60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.   ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …

Read More »

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಬೆಂಗಳೂರು: ಹಾನಗಲ್‌ ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್‌ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …

Read More »

‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್​ ಗುಂಡೂರಾವ್​ ಆಕ್ರೋಶ

ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …

Read More »