ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ …
Read More »ಯುವತಿಗಾಗಿ ಹೊಡೆದಾಟ : ಕೊಲೆಯಲ್ಲಿ ಅಂತ್ಯವಾದ ಜಗಳ
ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್‌ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …
Read More »ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳ: ಮಾಡಬಾರದನ್ನ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು..!
ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಪ್ರೇಯಸಿಗೆ ಗಿಫ್ಟ್ ಕೊಡಲು ಕಳ್ಳತನಕ್ಕೆ ಇಳಿದಿದ್ದ ಪ್ರಿಯಕರನಿಗೆ ಪ್ರೇಯಸಿಯೇ ಸಾಥ್ ಕೊಡುತ್ತಿದ್ದಳು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಂದ್ರಲೇಔಟ್ ಪೊಲೀಸರಿಂದ ಪ್ರೇಮಿಗಳ ಬಂಧನವಾಗಿದೆ. ಪ್ರೇಮಿ ವಿನಯ್, ರಾಜಾಜಿನಗರದ ರೌಡಿಶೀಟರ್. ಗಿಫ್ಟ್ ಕೊಡಿಸುವಂತೆ ವಿನಯ್ನನ್ನು ಪ್ರೇಯಸಿ ಕೀರ್ತನಾ ಪೀಡಿಸುತ್ತಿದ್ದಳು. ಹೀಗಾಗಿ, ವಿನಯ್ ಒಂದು …
Read More »ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ.. ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ …
Read More »ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್‌ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ
ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …
Read More »ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ …
Read More »ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು : ಬಸವರಾಜ ಬೊಮ್ಮಾಯಿ
ಬೆಂಗಳೂರು: ಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ ಉದ್ದೇಶಕ್ಕೆ ಭೂಮಿ ಹಂಚಿಕೆಯಾಗಿದ್ದರೂ ಕಾರ್ಯಾರಂಭ ಮಾಡದೆ ಇದ್ದರೆ ಪುನರ್ ಪರಿಶೀಲನೆ ನಡೆಸಿ ಭೂಮಿ ಹಂಚಿಕೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಬಳ್ಳಾರಿ ಭಾಗದಲ್ಲಿ ಭೂಮಿ, ನೀರು ಹಂಚಿಕೆಯಾಗಿ ಹತ್ತು ಹನ್ನೆರಡು ವರ್ಷಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಇದರ ಬಗ್ಗೆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಬಿಜೆಪಿ ಗೆಲ್ಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …
Read More »ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ …
Read More »