Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 28)

ಬೆಂಗಳೂರು ಗ್ರಾಮಾಂತರ

ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ

ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …

Read More »

ಸರ್ಕಾರದ ವಿರುದ್ಧ ಗಂಭೀರ ಆರೋಪ; ರಾಜ್ಯಪಾಲರಿಗೆ ಎಚ್‌ಡಿಕೆ ಪತ್ರ

ಬೆಂಗಳೂರು, ಜೂನ್ 25; ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಹಲವು ಬಾರಿ ಅವರು ಸರ್ಕಾರವನ್ನು ಅಧಿವೇಶನ ಕರೆಯಲು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕು ಎಂದು …

Read More »

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್!

ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ …

Read More »

ಕೋವಿಡ್‍ ನಿಂದ ತೊಂದರೆಗೊಳಗಾದ 3500 ಕ್ರೀಡಾಪಟುಗಳಿಗೆ ಡ್ರೀಮ್‍ ಸ್ಪೋರ್ಟ್ಸ್ ನೆರವು

ಬೆಂಗಳೂರು: ಡ್ರೀಮ್‍ ಸ್ಪೋರ್ಟ್ಸ್ ಫೌಂಡೇಶನ್‌ ಸಂಸ್ಥೆಯು ‘ಬ್ಯಾಕ್ ಆನ್ ಟ್ರ್ಯಾಕ್’ ಕಾರ್ಯಕ್ರಮದಡಿ ಕೋವಿಡ್ ನಿಂದ ತೊಂದರೆಗೀಡಾದ 3500 ಕ್ಕೂ ಹೆಚ್ಚು ಭಾರತೀಯ ಕ್ರೀಡಾ ವೃತ್ತಿಪರರಿಗೆ ನೆರವು ನೀಡುತ್ತಿದೆ. ಇದರಲ್ಲಿ ಕರ್ನಾಟಕದ ಕ್ರೀಡಾಳುಗಳು ಸಹ ಸೇರಿದ್ದಾರೆ. ಈ ಸಾಂಕ್ರಾಮಿಕ ಸಮಯದಲ್ಲಿ 29 ಕ್ರೀಡೆಗಳ 3,500 ಕ್ಕೂ ಹೆಚ್ಚು ಕ್ರೀಡಾ ವೃತ್ತಿಪರರಿಗೆ ಸಹಾಯ ಮಾಡಿದೆ. ಈ 3,500 ಫಲಾನುಭವಿಗಳಲ್ಲಿ 3,300 ಪ್ರಸ್ತುತ ಮತ್ತು ನಿವೃತ್ತ ಕ್ರೀಡಾಪಟುಗಳು, 100 ಕ್ಕೂ ಹೆಚ್ಚು ತರಬೇತುದಾರರು, ಮತ್ತು …

Read More »

ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್​ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ …

Read More »

ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ …

Read More »

ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ.

ಬೆಂಗಳೂರು, ಜೂನ್.24: ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ. ಭೂಗತ ಪಾತಕಿ ರಶೀದ್ ಮಲ್ಬಾರಿಯ ಸಹಚರನ ಹತ್ಯೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಗೋವಿಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮದ್ ಸಲೀಂ ಗುಂಡೇಟು ತಿಂದ ಆರೊಪಿ. ಭೂಗತ ಪಾತಕಿ ರಶೀದ್ ಮಲ್ಬಾರಿ ಸಹಚರ ಕಲೀಂ ಆಲಿ ಮಹಿಳೆ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ತಿಳಿದ ಮಮಹದ್ ಸಲೀಂ ಕೆಲ ದಿನಗಳ …

Read More »

ಗಾಳಿಪಟದ ದಾರ ಕುತ್ತಿಗೆಗೆ ಉರುಳು: ತಪ್ಪಿಸಿಕೊಳ್ಳಲು ಹೋದ ಬೈಕ್‌ ಸವಾರನ ಬೆರಳುಗಳು ಕಟ್‌!

ಬೆಂಗಳೂರು: ಆಡುಗೋಡಿ ಸಂಚಾರ ಠಾಣೆ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಸವಾರರೊಬ್ಬರ ಕತ್ತಿಗೆ ಗಾಳಿಪಟದ ದಾರ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ದಾರವನ್ನು ಬಿಡಿಸಲು ಹೋಗಿ 2 ಬೆರಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು. ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. …

Read More »

ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಕಿತ್ತಾಟವಾಡಿ ಜನರ ನಡುವೆ ನಗೆಪಾಟಲಿಗೀಡಾಗುವ ನಾಯಕರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಹಾಗೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿ ಬಂದ ನಂತ್ರ ಹೈಕಮಾಂಡ್ ಸಿದ್ದರಾಮಯ್ಯ(Siddaramaiah) ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, …

Read More »

ಬಿಗ್​ಬಾಸ್​ ಮನೆ ಒಳಗೆ ಬರ್ತಿದ್ದಂತೆ ಫೈಟ್ ಶುರು ಮಾಡಿದ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್!

ಬೆಂಗಳೂರು: ಕರೊನಾ ಕಾರಣದಿಂದಾಗಿ ಮಧ್ಯಂತರದಲ್ಲೇ ನಿಲ್ಲಿಸಲಾಗಿದ್ದ ಬಿಗ್​ಬಾಸ್ ಇದೀಗ ಮತ್ತೊಮ್ಮೆ ಸೆಕೆಂಡ್​ ಇನ್ನಿಂಗ್ಸ್ ಮೂಲಕ ವೀಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈಗಾಗಲೇ ಎಲ್ಲ ಸ್ಪರ್ಧಾಳುಗಳು ಮನೆ ತಲುಪಿದ್ದು ಕಲರ್ಸ್​ ಕನ್ನಡ ವಾಹಿನಿ ಅದರ ವಿಟಿಯನ್ನೂ ತೋರಿಸಿದೆ. ಆದರೆ ಒಂದು ವಿಟಿಯಲ್ಲಿ ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಬಿಗ್​ಬಾಸ್ ನೋಡಿದಾಗ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್ ಸ್ನೇಹಿತರಂತೆಯೇ ಕಾಣಿಸಿಕೊಂಡಿದ್ದಾರೆ. …

Read More »