Breaking News

ಬೆಂಗಳೂರು ಗ್ರಾಮಾಂತರ

ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿ,ಸ್ಥಳೀಯ ಕಾರ್ಪೋರೇಟರ್ ಶಿವರಾಜ್ ಸಹಾಯದಿಂದ ಅಂತ್ಯಕ್ರಿಯೆ

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಅಂತ್ಯಕ್ರಿಯೆಗೂ ಬಾರದ ಪತಿ   ಬೆಂಗಳೂರು: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಂಕರಮಠ ವಾರ್ಡ್ ಜೆ.ಸಿ ನಗರದಲ್ಲಿ ವಾಸಿಸುತ್ತಿದ್ದ ದಂಪತಿ 2 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪತಿ ಕಾರು ಚಾಲಕ, ಪತ್ನಿ ಮಾಲ್ ವೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ರು. ಕಳೆದ 4-5 ದಿನಗಳಿಂದ …

Read More »

ನಂದಿಬೆಟ್ಟದಲ್ಲಿ ಮುಂದುವರಿದ ಲಾಕ್‍ಡೌನ್- ನಿರಾಸೆಯಿಂದ ವಾಪಸ್ಸಾಗ್ತಿರೋ ಪ್ರವಾಸಿಗರು

ಚಿಕ್ಕಬಳ್ಳಾಪುರ: ಕೊರೊನಾ ಹಿನ್ನೆಲೆಯಲ್ಲಿ ಜಗದ್ವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧ ಇನ್ನೂ ಮುಂದುವರಿದಿದೆ. ಹೀಗಾಗಿ ಲಾಕ್‍ಡೌನ್ ಸಡಿಲಿಕೆ ಆಗಿದೆ ಅಂತ ಭಾವಿಸಿ ನಂದಿಗಿರಿಧಾಮಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ಸಾಗುತ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ನಿರಾಸೆಯಿಂದ ವಾಪಸ್ಸುಗುವಂತಾಗಿದೆ. ಅಂದಹಾಗೆ ಲಾಕ್‍ಡೌನ್ ಬಹುತೇಕ ಸಡಿಲಿಕೆ ಆಗಿದ್ದರೂ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ಇನ್ನೂ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ …

Read More »

ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ- ಶೆಟ್ಟರ್ ಸೂಚನೆ

ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಸಚಿವರು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು. ಡಾಬಸ್‍ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ …

Read More »

‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ : H.D.K.

ಬೆಂಗಳೂರು: ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ. ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ, 24 ಶಾಸಕರಿಗೆ ನಿಗಮ …

Read More »

ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್‌ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ

ಬೆಂಗಳೂರು,-ಕೋವಿಡ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …

Read More »

ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …

Read More »

ಲಾಕ್‍ಡೌನ್ಮಾತಿಗಷ್ಟೆ ಎನ್ನುವಂತಾಗಿದೆ.ನೆಲಮಂಗಲ ಟೋಲ್‍ನಲ್ಲಿ ನಡೆಯುತ್ತಿಲ್ಲ ವಾಹನಗಳ ತಪಾಸಣೆ

ನೆಲಮಂಗಲ: ಲಾಕ್‍ಡೌನ್‍ಗೂ ಕ್ಯಾರೆ ಎನ್ನದೆ ವಾಹನಗಳು ಬೆಂಗಳೂರಿನತ್ತ ಹೆಚ್ಚು ವಾಹನಗಳು ಆಗಮಿಸುತ್ತಿದ್ದು, ಸಿಬ್ಬಂದಿ ಸಹ ತಪಾಸಣೆ ನಡೆಸದೆ ಬಿಡುತ್ತಿದ್ದಾರೆ. ಇದರಿಂದಾಗಿ ಎಂದಿನಂತೆ ನೆಲಮಂಗಲ ಟೋಲ್‍ನಲ್ಲಿ ವಾಹನ ಸಂಚಾರ ಜೋರಾಗಿಯೇ ನಡೆಯುತ್ತಿದೆ. ನೆಲಮಂಗಲ ಟೋಲ್‍ನಲ್ಲಿ ವಾಹನಗಳ ತಪಾಸಣೆ ನಡೆಸಿ, ವಾಹನಗಳ ಸಂಚಾರಕ್ಕೆ ಸಿಬ್ಬಂದಿ ಹಾಗೂ ಪೊಲೀಸರು ಬ್ರೇಕ್ ಹಾಕಿಲ್ಲ. ಹೀಗಾಗಿ ಟೋಲ್‍ನಲ್ಲಿ ವಾಹನಗಳ ಸಂಚಾರ ಎಂದಿನಂತೆ ಜೋರಾಗಿದೆ. ಲಾಕ್‍ಡೌನ್ ಸಮಯದಲ್ಲೂ ಬರೋರು ಬರಬಹುದು, ಹೋಗೋರು ಹೋಗಬಹುದು ಎನ್ನವಂತಾಗಿದೆ. ಟೋಲ್‍ನ ಮುಖ್ಯರಸ್ತೆಗಳನ್ನು ಬಂದ್ …

Read More »

ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ

ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್​ಬುಕ್ ಲೈವ್​ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …

Read More »

ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….

ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …

Read More »

ಕೋರ್ಟ್ ಆದೇಶಿಸಿದರೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಈಗಾಗಲೇ ಲೋಕಾಯಕ್ತ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾತ್ರ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ ಎಂದು ದೂರುದಾರ ರಾಮಕೃಷ್ಣಯ್ಯ ಆರೋಪಿಸಿದ್ದಾರೆ. ಮಾದಾವರ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಒತ್ತುವರಿ ತೆರವುಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. …

Read More »