.ನವದೆಹಲಿ: ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್‍ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೀರೆ ಧರಿಸಿ ಮಾಡಿರುವ ಕಸರತ್ತು ಕಂಡ ನೆಟ್ಟಿಗರು ಮೆಚ್ಚುಗೆ ಸೂಚಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್‍ಫ್ಲಿಪ್ ಮಾಡಿರುವ ಯುವತಿಯ ಹೆಸರು ಮಿಲಿ ಸರ್ಕಾರ. ಈ ಬ್ಯಾಕ್‍ಫ್ಲಿಪ್ ಸೇರಿದಂತೆ ಹಲವು ಕಸರತ್ತಿನ ವೀಡಿಯೋಗಳನ್ನು ಮಿಲಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಮಿಲಿ ಓರ್ವ ಯೋಗಾಪಟು, ಕಟೆಂಪರಿ, ಡ್ಯಾನ್ಸರ್ ಆಗಿದ್ದಾರೆ. ಬಾಲಿವುಡ್ ನಟ ಟೈಗರ್ ಶ್ರಾಫ್ ಸಹ …
Read More »ಸೋತವರನ್ನು ಮಂತ್ರಿ ಮಾಡಲು ಹೊರಟವರು ಸ್ಥಾನ ತ್ಯಾಗ ಮಾಡಲಿ”: ಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ
ಬೆಂಗಳೂರು, ನ.29- ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಕೊಡಿಸಲು ಪ್ರಯತ್ನಿಸುವವರು ಸಾಧ್ಯವಾದರೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿ ಮಂತ್ರಿ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಾಭವಗೊಂಡವರನ್ನು ಮಂತ್ರಿ ಮಾಡುವುದಾದರೆ ಜನರಿಂದ ಆಯ್ಕೆ ಆದವರು ಏನು ಮಾಡಬೇಕು? ಗೆದ್ದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಸರಿ. ಸೋತವರನ್ನು ಮಂತ್ರಿ ಮಾಡಲು ಹೊರಟವರು ಮೊದಲು …
Read More »ಮೊಣಕೈನಲ್ಲಿ ಅಭಿಮಾನಿ ಬಿಡಿಸಿದ ಭಾವಚಿತ್ರಕ್ಕೆ ಅಪ್ಪು ಫುಲ್ ಫಿದಾ
ಬೆಂಗಳೂರು: ಬೆಂಗಳೂರು: ತಮ್ಮ ನೆಚ್ಚಿನ ನಟ-ನಟಿಯರಿಗಾಗಿ ಅಭಿಮಾನಿಗಳು ಏನು ಮಾಡಲು ಸಿದ್ಧರಿದ್ದಾರೆ. ಹುಟ್ಟುಹಬ್ಬಗಳು ಬಂದರಂತೂ ಕೇಳೋದೇ ಬೇಡ, ನಟ ಅಥವಾ ನಟಿಯ ಬರ್ತ್ ಡೇಯನ್ನು ತಮ್ಮದೇ ಹುಟ್ಟುಹಬ್ಬ ಎಂಬಂತೆ ಆಚರಿಸುತ್ತಾರೆ. ಒಟ್ಟಿನಲ್ಲಿ ಏನೆಲ್ಲಾ ಹರಸಾಹಸ ಮಾಡಿ ತನ್ನ ನೆಚ್ಚಿನ ನಟ ತಮ್ಮತ್ತ ಒಂದು ಬಾರಿ ತಿರುಗಿ ನೋಡುವಂತೆ ಪ್ರಯತ್ನ ಪಡುತ್ತಿರುತ್ತಾರೆ. ಅಂತೆಯೇ ಅಭಿಮಾನಿಯೊಬ್ಬ ತನ್ನ ಮೊಣಕೈನಲ್ಲಿ ಭಾವಚಿತ್ರ ಬಿಡಿಸಿ ನಟ ಪುನೀತ್ ರಾಜ್ ಕುಮಾರ್ ಗಮನ ಸೆಳೆದಿದ್ದಾನೆ. ತನ್ನ ಮೊಣಕೈ …
Read More »ಕಂಪ್ಲೀಟ್ ಲಾಕ್‍ಡೌನ್ ಮಾಡಿ:ಮಾಜಿಸ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯಗಳು ಕೊರೊನಾದೊಂದಿಗೆ ಬದುಕಿ ಎಂದು ಹೇಳುವ ಮೂಲಕ ನಮ್ಮ ಕೈಯಲ್ಲಿ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಶನಿವಾರ, ಭಾನುವಾರದ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಾಡಿದರೇ ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕಿದೆ ಎಂದು ಮಾಜಿಸ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ಲಾಕ್‍ಡೌನ್ ತೆಗೆದು ಹಾಕಿದಾಗ ಕೋವಿಡ್ ಹೆಚ್ಚಳ ಆಗಿತ್ತು. ಆದರೆ ಆಗ ಲಾಕ್‍ಡೌನ್ ಮುಂದುವರಿಸಬೇಕಿತ್ತು. …
Read More »ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ
ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ. ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ …
Read More »ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು
ಬೆಂಗಳೂರು, ಸೆ.19- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು, ಇಂಟರ್‍ನೆಟ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ …
Read More »ಸ್ಯಾಂಡಲ್‍ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …
Read More »C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ
ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …
Read More »ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ
ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ …
Read More »ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.
ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …
Read More »