Breaking News

ಬೆಂಗಳೂರು ಗ್ರಾಮಾಂತರ

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು

ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …

Read More »

ವಿದೇಶಿಗರ ಕ್ವಾರಂಟೈನ್- ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿದ ಗ್ರಾಮಸ್ಥರು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಬಾಣವಾಡಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದೇಶಿಗರ ಕ್ವಾರಂಟೈನ್ ವಿಚಾರವಾಗಿ, ಮಠದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಬೇಡ ಎಂದು ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದರು. ಇಂದು ಗ್ರಾಮಸ್ಥರ ಜೊತೆ ಜಂಟಿ ಸಭೆ ನಡೆಸಿದ ಅಧಿಕಾರಿಗಳು ಮತ್ತು …

Read More »

ನೆಲಮಂಗಲದಲ್ಲಿ ಬಿಹಾರಿಗಳ ಗಲಾಟೆ ತಡೆಯಲು ರಾಷ್ಟ್ರಗೀತೆ ಹಾಡಿದ ಪಿಎಸ್‍ಐ

ಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆಯನ್ನು ತಡೆಯವುದು ಹರಸಾಹಸವನ್ನೇ ಪಟ್ಟಿದ್ದರು. ನಂತರ ಗಲಾಟೆ ಹತೋಟಿಗೆ ಬಂದಿತ್ತು. ಗಲಾಟೆ ನಿಯಂತ್ರಣದ ವಿಡಿಯೋ ಇದೀಗ ವೈರಲ್ ಆಗಿದ್ದು, ಗಲಾಟೆ ಸಮಯದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆ ಕಡಿಮೆ ಮಾಡಲು ಇನ್ಸ್ ಪೆಕ್ಟರ್ ಪ್ಲಾನ್ ಮಾಡಿ, ಮಾದನಾಯಕನಹಳ್ಳಿ ಠಾಣೆ ಸಿಪಿಐ ಸತ್ಯನಾರಾಯಣ ಅವರು ಗಲಾಟೆ ಸಮಯದಲ್ಲಿ ಜನಗಣ ಮನ ಹಾಡಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ರೊಂದಿಗೆ ಬಿಹಾರಿ ವಲಸೆ ಕಾರ್ಮಿಕರು ಸಹ …

Read More »

ಕಾರ್ಮಿಕ ದಿನಾಚರಣೆ – ಪೌರಕಾರ್ಮಿಕರು, ಬೆಸ್ಕಾಂ ಸಿಬ್ಬಂದಿಗೆ ಪುಷ್ಪವೃಷ್ಟಿ……….

ನೆಲಮಂಗಲ: ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಸಮಸ್ಯೆ ಎದುರಾಗುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ. ನೆಲಮಂಗಲ ನಗರದ ಬಸವಣ್ಣ ದೇವರಮಠದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಾಮೀಜಿಗಳ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಆಹಾರಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಲಾಕ್‍ಡೌನ್‍ನಿಂದ ಭಾರತದ ಆರ್ಥಿಕತೆ ಕುಸಿತವಾಗಿದೆ. ಆರ್ಥಿಕತೆಗಿಂತ ಜನರ ಪ್ರಾಣ ಉಳಿಸುವುದು ಮುಖ್ಯವಾಗಿದ್ದು ಮುಂದೆ ಆರ್ಥಿಕತೆ ಚೇತರಿಗೆ ಪಡೆಯಲಿದೆ. …

Read More »

ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವು……..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ …

Read More »

ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …

Read More »

ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.:ಎಸ್.ಮಲ್ಲಯ್ಯ

ಬೆಂಗಳೂರು: ಕೊರೊನಾ ಲಾಕ್‍ಡೌನ್ ಆಗಿ ಒಂದು ತಿಂಗಳು ಕಳೆಯುತ್ತಿದ್ದು, ಸಾಕಷ್ಟು ಜನರು ಬಡ ಹಾಗೂ ಕೂಲಿ ಕಾರ್ಮಿಕರ ನೆರವಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ. ಆದರೆ ಇಲ್ಲೊಬ್ಬ ವ್ಯಕ್ತಿ ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಮಲ್ಲಯ್ಯ ಜಾನುವಾರುಗಳಿಗೆ ಮೇವು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ಹೈನುಗಾರಿಕೆ ಆಧಾರಿತ ಕುಟುಂಬಗಳ ಕೃಷಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಹಸುಗಳಿಗೆ …

Read More »

ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ

ಬೆಂಗಳೂರು: ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಲನೆ ನೀಡಿದರು. ಕರೊನಾ ಮಹಾಮಾರಿ ಗುಣಪಡಿಸುವ ಮಹತ್ವದ ಚಿಕಿತ್ಸೆ ಇದಾಗಿದೆ. ಕೇಂದ್ರ ಸರಕಾರದ ಅನುಮತಿಯೊಂದಿಗೆ ಕರ್ನಾಟಕದಲ್ಲಿ ಈಗ ಪ್ರಾಯೋಗಿಕವಾಗಿ ಈ ಚಿಕಿತ್ಸೆ ಆರಂಭವಾಗಿದ್ದು, ಕೊರೊನಾಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡವರ ದೇಹದಿಂದ …

Read More »

ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

ಆನೇಕಲ್: ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ. ಆನೇಕಲ್ ಪಟ್ಟಣದಲ್ಲಿ ಕರುಣೆಯ ಕುಟೀರ ಹಾಗೂ ವಾಚನಾಲಯವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಆನೇಕಲ್ ನ ಪೋಲಿಸರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಕರುಣೆಯ ಕುಟೀರ ಹಾಗೂ ವಾಚನಾಲಯ ತೆರೆಯಲಾಗಿದೆ. ಕೊರೊನಾ …

Read More »

ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ …

Read More »