ಬೆಂಗಳೂರು, ಫೆ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರು ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆಗೆ ಒಳಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ಕಾರಣವಾಯಿತು. ಇಂದು ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿಯಮ 69ರ ಅಡಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು. ಚರ್ಚೆ ಆರಂಭಿಸಿದ ಸಿದ್ದರಾಮಯ್ಯ …
Read More »250 ಚಿತ್ರಗಳಲ್ಲಿ ನಟಿಸಿದ ಹಿರಿಯ ಕಲಾವಿದನಿಗೆ ಕಿಡ್ನಿ ವೈಫಲ್ಯ- ಉಳಿಸಿಕೊಳ್ಳಲು ಜಗ್ಗೇಶ್ ಪ್ರಯತ್ನ
ಬೆಂಗಳೂರು: ನವರಸನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಒಂದು ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಕಲಾವಿದನ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಇದೀಗ ಆ ಕಲಾವಿದ ಯಾರು ಎಂಬುದನ್ನು ತಿಳಿಸಿದ್ದಾರೆ. ಜಗ್ಗೇಶ್ ಅಂದು ಕನ್ನಡ ಚಿತ್ರರಂಗದ ಪೋಷಕ ನಟ ಕಿಲ್ಲರ್ ವೆಂಕಟೇಶ್ ಬಗ್ಗೆ ಮಾತನಾಡಿದ್ದು. ಇವರು ಒಂದು ಕಾಲದಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದರು. ಆದರೆ ಇಂದು ವೆಂಕಟೇಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡುವ …
Read More »ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ. ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..
ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ..? ತಡರಾತ್ರಿ ಪಂಚಮಸಾಲಿ ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್.. ಬೆಂಗಳೂರು, ಫೆ.19-ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ.ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ ಹಾಗೂ ಮುರುಗೇಶ್ ನಿರಾಣಿ ಭಾಗವಹಿಸಿದ್ದರು. ನಿನ್ನೆ ರಾತ್ರಿ ಅವರ ನೇತೃತ್ವದಲ್ಲಿ …
Read More »ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ
ಬೆಂಗಳೂರು: ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರ ನಗರದ ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಬೆಂಟ್ಲಿ ಕಾರು ಅಪಘಾತ ಮಾಡಿದ್ದು ಮಹಮ್ಮದ್ ನಲಪಾಡ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ಅಂದು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದ್ದು, ನಲಪಾಡ್ …
Read More »ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶಿಸಿ ತಾವೇ ನಟಿಸಿದ ಲವ್ ಮಾಕ್ ಟೈಲ್ ಸಿನಿಮಾಗೆ ಮೊದಲ ಎರಡು ದಿನ ಜನರ ನೀರಸ ಪ್ರತಿಕ್ರಿಯೆ ನೋಡಿ ಕಿಚ್ಚ ಸುದೀಪ್ ಬೇಸರಗೊಂಡಿದ್ದರು
ಲವ್ ಮಾಕ್ ಟೈಲ್ ಬಿಡುಗಡೆಯಾದ ತಕ್ಷಣ ಜನರಿಂದ ಉತ್ತಮ ಪ್ರತಿಕ್ರಿಯೆ ಬರಲಿಲ್ಲ. ಚಿತ್ರದ ಕಲೆಕ್ಷನ್ ಡಲ್ ಆಗಿತ್ತು. ಇದರಿಂದಾಗಿ ಮಾಲ್ ಗಳಲ್ಲಿ ಶೋಗಳು ರದ್ದಾಗುವ ಸ್ಥಿತಿಗೆ ಬಂದಿತ್ತು. ಕೊನೆಗೆ ಕೃಷ್ಣ ಮಾಲ್ ಮುಖ್ಯಸ್ಥರಿಗೆ ವೀಕೆಂಡ್ ನಲ್ಲಿ ಕನಿಷ್ಠ ಒಂದು ಶೋ ಇಡುವಂತೆ ಮನವಿ ಮಾಡಿದ್ದಾರೆ. ವೀಕೆಂಡ್ ನಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಇದೀಗ ಪ್ರದರ್ಶನ ಹೆಚ್ಚಿಸಲು ಮುಂದಾಗಿದ್ದಾರೆ. ಇದರಿಂದ ಡಾರ್ಲಿಂಗ್ ಕೃಷ್ಣ ಮೊಗದಲ್ಲಿ ಗೆಲುವಿನ ನಗೆ ಮೂಡಿದೆ. …
Read More »ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ.
ಬೆಂಗಳೂರು: ಸರೋಜಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಬಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿದೆ. ಇತ್ತ …
Read More »ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ.
ಬೆಂಗಳೂರು: ಬೆಳಗಾವಿ ರಾಜಕಾರಣ ಪ್ರವೇಶಿಸಿದ್ದಕ್ಕೆ ಅಸಮಾಧಾನಗೊಂಡು ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ. ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಅಥವಾ ಇಂಧನ ಇಲಾಖೆ ಸಿಗಲಿದೆ ಎಂದು ಹೇಳಲಾಗುತಿತ್ತು. ಆದರೆ ಈಗ ವೈದ್ಯಕೀಯ ಶಿಕ್ಷಣ ಖಾತೆ ಫೈನಲ್ ಆಗಿದೆ ಮಂತ್ರಿಗಳಾಗಿ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರೂ ಇನ್ನು ಖಾತೆ ಹಂಚಿಕೆ ಆಗಿರಲಿಲ್ಲ. ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಜಾರಕಿಹೊಳಿ ಪಟ್ಟು …
Read More »ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.
ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು. ವಿವಿಧ …
Read More »-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ
ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …
Read More »10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …
Read More »