Breaking News

ಬೆಂಗಳೂರು ಗ್ರಾಮಾಂತರ

ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ಮಾಡಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರಾಜ್ಯದ 9 ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್‌ ಕೊಟ್ಟಿದ್ದಾರೆ.   ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಮುಂಜಾನೆ 4.30ಕ್ಕೆ ಏಕಕಾಲದಲ್ಲಿ ನೂರಾರು ಲೋಕಾಯಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪೈಕಿ 7 ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಂಗ್ರಹಿಸಿಟ್ಟಿದ್ದ ಕಂತೆ-ಕಂತೆ ನೋಟುಗಳನ್ನು ಕಂಡು ಲೋಕಾ ಪೊಲೀಸರೇ ದಂಗಾಗಿದ್ದಾರೆ. ಇನ್ನು …

Read More »

ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ.     ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …

Read More »

ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ಬಂಧನ

ಬೆಂಗಳೂರು: ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ 6 ಜನರ ಗ್ಯಾಂಗ್​ವೊಂದನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನೀಲ್, ಡಿ ರೂಪಂ, ಭಟ್ಟಾಚಾರ್ಯ ಹಾಗೂ ರವಿ ಬಂಧಿತರು. ಪ್ರವೀಣ್ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಆರೋಪಿ. ಈತ ಆಧಾರ್ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್ ಬೇಕಿರುವವರ ಮಾಹಿತಿ‌ ಪಡೆದು ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಎರಡನೇ ಆರೋಪಿ ರಮೇಶ್ ಆಟೋ ಚಾಲಕ. ಈತ ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ …

Read More »

ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್​ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …

Read More »

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …

Read More »

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್​ಐಆರ್​ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್​ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …

Read More »

ವಿಮ್ಸ್‌ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್‌) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್‌ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿತು. ವಿಧಾನಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ವಿಮ್ಸ್‌ನಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಜನರೇಟರ್‌ ಕೂಡ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ಮೌಲಾ ಹುಸೇನ್‌ …

Read More »

ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ

ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …

Read More »

ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್

ಬೆಂಗಳೂರು ಗ್ರಾಮಾಂತರ: ಬಸ್‌ಗಾಗಿ ಕಾಯುತ್ತ ನಿಂತಿದ್ದ ಅಜ್ಜಿಯೊಬ್ಬರ ಕೊರಳಿಗೆ ಕೈಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಹೋದ ಸರಗಳ್ಳಿಯೊಬ್ಬಳು ಗಟ್ಟಿಗಿತ್ತಿ ಅಜ್ಜಿಯ ಬಿಗಿಪಟ್ಟಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಧುರೆ ಹೋಬಳಿ ಕನಸವಾಡಿಯಲ್ಲಿ ಗುರುವಾರ ಈ ಪ್ರಕರಣ ನಡೆದಿದ್ದು, ಸರಗಳ್ಳಿ ಈಗ ದೊಡ್ಡಬೆಳವಂಗಲ ಠಾಣೆ ಪೊಲೀಸರ ಅತಿಥಿಯಾಗಿದ್ದಾಳೆ. ಸರ ನಾಲ್ಕೈದು ತುಂಡಾದರೂ ಒಂದೂ ತುಂಡು ಕೂಡ ಕಳ್ಳಿಯ ಪಾಲಾಗದಂತೆ ನೋಡಿಕೊಂಡ ಅಜ್ಜಿ ಎದೆಗಾರಿಕೆಗೆ ಹಾಗೂ ಸಮಯಪ್ರಜ್ಞೆಗೆ ಪೊಲೀಸರು ಸೆಲ್ಯೂಟ್ ಹೊಡೆದಿದ್ದಾರೆ. ಏನಿದು …

Read More »