ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಅನುಭವಿ ಮುಖ್ಯಮಂತ್ರಿಗಳಿದ್ದು, 17ನೇ ಬಜೆಟ್ ಮಂಡಿಸುವ ಸುವರ್ಣಾವಕಾಶ ಅವರಿಗೆ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಿನಲ್ಲಿ ಹೋಮ ಮಾಡುವ ಕೆಲಸವನ್ನು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ …
Read More »ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್ಪೋರ್ಟ್ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
Read More »ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು. ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ …
Read More »ಸಚಿವ ದಿನೇಶ್ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಎಐಸಿಸಿ ನೀಡಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್ 10ರ …
Read More »ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ
ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಸಕಾಲದಲ್ಲಿ ನ್ಯಾಯ ಒದಗಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ, ಇದನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಗೃಹ ಇಲಾಖೆ, ಬೆಂಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಇವರ ಸಹಯೋಗದಲ್ಲಿ ವಿಕಾಸ ಸೌಧದ ಸಭಾಂಗಣದಲ್ಲಿ …
Read More »ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆ ಫಲಾನುಭವಿ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ನೀಡುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಹಕಾರ ಸಂಘಗಳ ಮೂಲಕ ಸೀರೆ ವಿತರಣೆ ಮಾಡುವ ಯೋಜನೆ …
Read More »ನಾಳೆ ರಾಜ್ಯ ಬಜೆಟ್: ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ. ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಎಲ್‌ಇಡಿ ಪರದೆಗಳ ಮೂಲಕ …
Read More »ಸಿಎಂ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್ ಮಂಡಿಸಲಿದ್ದಾರೆ: ಜನರ ಮೇಲೆ ತೆರಿಗೆ ಖಚಿತ: ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು: ಫೆ.6, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್ ಮಂಡಿಸಲಿದ್ದಾರೆ. ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಎಂದರೆ ತೆರಿಗೆ ಹೇರುವ ರಾಮಯ್ಯ ಆಗಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ …
Read More »ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿದ ಸಚಿವರ ನಿಯೋಗ
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಇಂದು ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ಸಮುದಾಯದ ಶಾಸಕರು ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಭೇಟಿ ಮಾಡಿ, ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡುವ ಕುರಿತು ಚರ್ಚಿಸಿದರು. ಒಮ್ಮತದ ಅಭಿಪ್ರಾಯದ ಮೂಲಕ (Amikebal setelment) ಮೀಸಲಾತಿ ಹಂಚಿಕೆ ಮಾಡಿಕೊಳ್ಳಲು ಅಧ್ಯಕ್ಷರು ಸಚಿವರಿಗೆ ತಿಳಿಸಿದರು ಪರಿಶಿಷ್ಟ ಜಾತಿಯ ನೂರೊಂದು ಸಮುಯದಾಯಗಳಿಗೂ ನ್ಯಾಯಯುತವಾಗಿ …
Read More »ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದೆ. ಇಂದು ಮುಂಜಾನೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿರುವ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ. ಮೈಸೂರು: ಸಾಂಸ್ಕೃತಿಕ ನಗರಿಯಲ್ಲೂ ಲೋಕಾಯುಕ್ತ ಬಲೆ ಬೀಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಾಗಲಕೋಟೆ: ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲೂ ಅಧಿಕಾರಿಗಳ ತಂಡ ಬೀಡುಬಿಟ್ಟಿದೆ. ಇದರ ಜೊತೆಗೆ ರಾಜ್ಯದ ಇತರೆ …
Read More »
Laxmi News 24×7