ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.
ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …
Read More »ಗೃಹ ಇಲಾಖೆ ಬಲವರ್ಧನೆಗೆ ಪ್ರಯತ್ನ: ಆರಗ ಜ್ಞಾನೇಂದ್ರ
ಬೆಂಗಳೂರು: ಸಿಬ್ಬಂದಿ ಕೊರತೆಯನ್ನು ಪರಿಹರಿಸಿ, ಆಧುನೀಕರಣಕ್ಕೆ ಒತ್ತು ನೀಡುವ ಮೂಲಕ ಗೃಹ ಇಲಾಖೆಯ ಬಲವರ್ಧನೆಗೆ ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗೃಹ ಸಚಿವರಾದ ಬಳಿಕ ಸೋಮವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಐಪಿಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪೊಲೀಸರನ್ನು ನಂಬಿ ಜನರು ನೆಮ್ಮದಿಯಿಂದ …
Read More »ಅಪರಾಧ ವೈರಸ್ ಇದ್ದ ಹಾಗೆ, ಸದೆಬಡಿಯಬೇಕು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು, ಆ.10: ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು. ಜೂಜು, ಡಾರ್ಕ್ ವೆಬ್ ಮತ್ತಿತರ …
Read More »ಸನ್ಮಾನ ಮಾಡಿಸಿಕೊಳ್ಳುವುದರಲ್ಲೇ ಸಚಿವರು ಬ್ಯುಸಿಯಾಗಿದ್ದಾರೆ : ಡಿಕೆಶಿ
ಬೆಂಗಳೂರು, ಆ.10- ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರಸ್ತೆಗೆ ಚೆಲ್ಲುತ್ತಿದ್ದಾರೆ. ಬಿಜೆಪಿ ಸರ್ಕಾರ ಪರಿಹಾರ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆತುರಕ್ಕೆ ಬಿದ್ದು ತಾವು ಟೀಕೆ ಮಾಡುವುದಿಲ್ಲ. ಹೊಸ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು. …
Read More »ಹೆಸರು ಬದಲಾವಣೆಯೇ ಬಿಜೆಪಿ ಸರ್ಕಾರಗಳ ಸಾಧನೆ : ಕಾಂಗ್ರೆಸ್ ಟೀಕೆ
ಬೆಂಗಳೂರು, ಆ.10- ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್‍ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದರೆ ಮುಂದಿನ ದಿನಗಳಲ್ಲಿ ಹಲವು ರಸ್ತೆ, ಸೇತುವೆಗಳಿಗಿರುವ ಬಿಜೆಪಿ ನಾಯಕರ ಹೆಸರುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ದ್ವೇಷದ ರಾಜಕಾರಣ ಬಿಟ್ಟು ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳಬೇಕು. ಯೋಜನೆಗಳಿಗೆ ಮರುನಾಮಕರಣ ಮಾಡಿದಾಕ್ಷಣ ಅವರ ಸಾಧನೆಗಳನ್ನು ಜನರ ಮನಸ್ಸಿನಿಂದ ಮರೆ ಮಾಚಲು ಸಾಧ್ಯವಿಲ್ಲ.ಕಾಂಗ್ರೆಸ್ ತನ್ನ ಅಕಾರವಯಲ್ಲಿ ಎಂದಿಗೂ …
Read More »ಇಂತಹ ಸರಕಾರ ಇದ್ದರೆಷ್ಟು? ಬಿಟ್ಟರೆಷ್ಟು?: ರಾಜ್ಯ ಸರಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು, ಆ. 9: `ಅಸಮಾಧಾನ ಮತ್ತು ಭಿನ್ನಮತದ ಮೂಟೆಯಾಗಿರುವ ಸರಕಾರ ಯಾವ ಕ್ಷಣದಲ್ಲೂ ಬೀಳಬಹುದು. ಬಂಡಾಯದ ಬಿಸಿ ಎದುರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸ್ಥಿತಿ ನೋಡಿದರೆ ಮರುಕ ಹುಟ್ಟುತ್ತಿದೆ’ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಬೊಮ್ಮಾಯಿ ನೇತೃತ್ವದ ನೂತನ ಸರಕಾರ ತೂತು ಬಿದ್ದ ದೋಣಿಯಂತಾಗಿದೆ. ಸಂಪುಟ ರಚನೆಯಾಗಿ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದರೂ, ಸರಕಾರದಲ್ಲಿ ಬಂಡಾಯ ನಿಂತಿಲ್ಲ. ಸದ್ಯ ರಾಜ್ಯ …
Read More »Covid-19 Karnataka Update: ರಾಜ್ಯದಲ್ಲಿ 1,186 ಹೊಸ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ 1,186 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 1,776 ಮಂದಿ ಚೇತರಿಸಿಕೊಂಡಿದ್ದು, 24 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ. ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 29.19 ಲಕ್ಷ ದಾಟಿದೆ. ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 2.02 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 36,817ಕ್ಕೆ ಏರಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ …
Read More »ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರು ಸೇರಿ ರಾಜ್ಯಾದ್ಯಂತ `ಟ್ರಾಫಿಕ್ ಸ್ಪಾಟ್ ಫೈನ್’ ಕ್ಯಾನ್ಸಲ್
ಬೆಂಗಳೂರು : ವಾಹನ ಸವಾರರಿಗೆ ಗೃಹ ಸಚಿವ ಆರಗ ಜ್ಞಾನೆಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟ್ರಾಫಿಕ್ ಪೊಲೀಸರು ಬಳಸುತ್ತಿದ್ದ ಮಷಿನ್ ಗಳನ್ನು ಆಯಾ ಪೊಲೀಸ್ ಠಾಣೆಗಳಲ್ಲಿ ಸರಂಡರ್ ಮಾಡಲು ಸೂಚನೆ ನೀಡಿದ್ದಾರೆ. …
Read More »