Breaking News

ಬೆಂಗಳೂರು

ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. 127 ಪಿಎಸ್‌ಐ, 130 ಎಸ್‌ಎಸ್‌ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು …

Read More »

ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ …

Read More »

ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾಜಿನಗರದ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ಅವ್ಯವಹಾರ, ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿ.ಆರ್.ಪಿ.ಎಫ್. ಭದ್ರತೆಯೊಂದಿಗೆ ಇಡಿ ದಾಳಿ ನಡೆಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬಿಜೆಪಿ ಮುಖಂಡ ರೋಷನ್ …

Read More »

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.   24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …

Read More »

ಬಿಎಸ್ವೈ ನಾಯಕತ್ವದ ವಿರುದ್ಧ ಸಡ್ಡು ಹೊಡೆದವರಿಗೆ ಕೈತಪ್ಪಿದ ಮಂತ್ರಿ ಸ್ಥಾನ..!

ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ ಒಕ್ಕಲಿಗ ಸಮುದಾಯದಿಂದ ಸಿ.ಪಿ.ಯೋಗೇಶ್ವರ್, ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಅರವಿಂದ ಬೆಲ್ಲದ್ …

Read More »

ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ

ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …

Read More »

ಸಿಎಂ ಸ್ವಗೃಹದ ಬಳಿ ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸ್ವಗೃಹದ ಬಳಿ ಲಘು ಅಪಘಾತ ಸಂಭವಿಸಿದೆ. ಯಾವುದೇ ಅನಾಹುತು ಸಂಭವಿಸಿಲ್ಲ. ಆರ್. ಟಿ. ನಗರದ ಮುಖ್ಯಮಂತ್ರಿ (Chief Minister) ನಿವಾಸದ ಬಳಿ ಘಟನೆ ನಡೆದಿದೆ. ಓನ್ ವೇ(one way) ಮಾಡಿರುವ ಹಿನ್ನಲೆ ವಾಹನ ಸವಾರರಿಗೆ ಗೊಂದಲವಾಗಿದ್ದು, ಅಪಘಾತಕ್ಕೆ( Accident) ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್​.ರಾಜಶೇಖರ್​ ರೆಡ್ಡಿ …

Read More »

ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ. ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ …

Read More »

ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…

ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …

Read More »

ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ- ಯಾರಿಗೆ ಮಂತ್ರಿಗಿರಿ?

ಬೆಂಗಳೂರು: ಅಂತೂ ಇಂತೂ ಸಂಪುಟ ಯೋಗ ಕೂಡಿ ಬಂದಿದ್ದು, ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮುಖ್ಯಕಾರ್ಯದರ್ಶಿಯಿಂದ ಶಿಷ್ಟಾಚಾರ ವಿಭಾಗಕ್ಕೆ ಸಹ …

Read More »