ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ …
Read More »ರಾಜ್ಯ ಸಚಿವ ಸಂಪುಟ ರಚನೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತಿರುವ ಸಿಎಂ ಬೊಮ್ಮಾಯಿ
ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕೂಡ ಪ್ರಮಾಣ ಸ್ವೀಕರಿಸಿದ್ದಾಗಿದೆ. ಈಗ ಅವರ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಇನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ 33 ಮಂದಿ ಸಚಿವರಿದ್ದರು. ಇದೀಗ ಹೊಸ ಸಂಪುಟ ರಚನೆ ಮಾಡುವ ಅವಕಾಶ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬೊಮ್ಮಾಯಿಯವರು ಬಿಜೆಪಿ ಹೈಕಮಾಂಡ್ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಸಂಪುಟ ರಚನೆ ಕುರಿತು …
Read More »ನಾನೂ ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …
Read More »ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ
ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಕಾಲೇಜುಗಳು ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಅನೇಕ ಕಡೆಗಳಲ್ಲಿ ಶೇಕಡಾ 50 ರಿಂದ 70 ರಷ್ಟು ದಾಖಲಾಗಿದೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಮತ್ತು ತರಗತಿಗೆ ಹಾಜರಾಗಲು ಬಯಸದ …
Read More »ಚುರುಕಿನತ್ತ ಆಡಳಿತ- ಅನಗತ್ಯ ವೆಚ್ಚ ಕಡಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ದೀನ ದಲಿತರ ಕಲ್ಯಾಣಕ್ಕೆ ಒತ್ತು, ವಿಶ್ವಾಸಾರ್ಹ, ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ನೀಡುವುದು ಹಾಗೂ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ನನ್ನ ಸರ್ಕಾರದ ಆದ್ಯತೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು. ‘ಏನೇ ಮಾಡಿದರೂ ನಡೆಯುತ್ತದೆ (ಚಲ್ತಾ ಹೈ) ಎಂಬ ಅಧಿಕಾರಿಗಳ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ’ ಎಂದು ಕಾರ್ಯಭಾರ ವಹಿಸಿಕೊಂಡ ಮೊದಲ ದಿನವೇ ಅವರು ಅಧಿಕಾರಿಗಳ ಮೇಲೆ ಚಾಟಿ ಬೀಸಿದರು. ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ …
Read More »ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …
Read More »ಬೊಮ್ಮಾಯಿ ನಿವಾಸಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಭೇಟಿ; ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ
ಬೆಂಗಳೂರು: ದಾವಣಗೆರೆ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರಿಗೆ ಮನವಿ ಮಾಡಿದ್ದೇವೆ. ದಾವಣಗೆರೆ ಜಿಲ್ಲೆ ಸಮಸ್ತ ಅಭಿವೃದ್ಧಿಗೆ ಸಚಿವ ಸ್ಥಾನ ಕೇಳಿದ್ದೇವೆ ಎಂದು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ ಮನೆ ನಿವಾಸದ ಬಳಿ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಶಕ್ತಿ ಕೇಂದ್ರ, ರಾಜಧಾನಿಯಾಗಬೇಕಿತ್ತು. ವಾಣಿಜ್ಯ ಮತ್ತು ಶೈಕ್ಷಣಿಕವಾಗಿ ಮುಂದುವರೆದ ಜಿಲ್ಲೆ …
Read More »ಶುಭಾಶಯಗಳು ಮಾಮ” : ನೂತನ ಸಿಎಂ ಬೊಮ್ಮಾಯಿ ಗೆ ಅಭಿನಯ ಚಕ್ರವರ್ತಿಯ ಹಾರೈಕೆ
ಬೆಂಗಳೂರು : ರಾಜಭವನದ ಆವರಣದಲ್ಲಿ ಇಂದು(ಬುಧವಾರ, ಜುಲೈ 28) ನಡೆದ ಪ್ರಮಾಣ ವಚನ ಸರಳ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಸಿನಿ ಲೋಕದ ತಾರೆ, ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ …
Read More »ಮಧ್ಯಂತರ ಚುನಾವಣೆ ಕನವರಿಕೆ: “ಕೈ” ಕೊಟ್ಟ ಲೆಕ್ಕಾಚಾರ
ಬೆಂಗಳೂರು:ಯಡಿಯೂರಪ್ಪ ನಿರ್ಗಮನ ಬೆನ್ನಲ್ಲೇ ಮಧ್ಯಂತರ ಚುನಾವಣೆ ಕನವರಿಕೆಯಲ್ಲಿದ್ದ ಕಾಂಗ್ರೆಸ್‌ಗೆ ಬಸವರಾಜ ಬೊಮ್ಮಾಯಿ ಆಯ್ಕೆ ಅನಿರೀಕ್ಷಿತವಾಗಿದ್ದು ಲೆಕ್ಕಾಚಾರ ತಪ್ಪಿದಂತಾಗಿದೆ. ಯಡಿಯೂರಪ್ಪ ಅವರು ಇಲ್ಲದೆ ಯಾರೇ ಮುಖ್ಯಮಂತ್ರಿಯಾದರೂ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ. ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾಗಬಹುದು ಎಂದು ಕಾರ್ಯತಂತ್ರಕ್ಕೆ ಮುಂದಾಗಿದ್ದ ಕಾಂಗ್ರೆಸ್ ಸ್ವಲ್ಪ ಯೋಚಿಸುವಂತಾಗಿದೆ. ವಲಸಿಗರಿಗೆ ಸಚಿವಗಿರಿ ಹಾಗೂ ಬಯಸಿದ ಖಾತೆ ಸಿಗದೆ ಅತೃಪ್ತಿ ಎದ್ದರೆ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಕರೆ ತರುವಯೋಚನೆಮಾಡಲಾಗಿತ್ತು.ಆದರೆ, ಬಸವರಾಜ ಬೊಮ್ಮಾಯಿ ಆಯ್ಕೆಯಿಂದ ಘರ್‌ವಾಪ್ಸಿ …
Read More »ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ …
Read More »