ಬೆಂಗಳೂರು: ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಡಗದ ಸ್ಥಾನಮಾನ ಕಲ್ಪಿಸುವ ವಿಚಾರವಾಗಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಲ್ಲಿಸಿರುವ ಅಧ್ಯಯನ ವರದಿಯನ್ನು ಪರಿಗಣಿಸುವ ಮೊದಲು ಸೂಕ್ತ ಮಾನದಂಡಗಳನ್ನು ಅನುಸರಿಸಿ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಧ್ಯಯನದ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನೀಡಿರುವ ಪ್ರಶ್ನಾವಳಿ ಮತ್ತು ಅರ್ಜಿ ನಮೂನೆಯನ್ನು ರದ್ದಪಡಿಸುವಂತೆ ಕೋರಿ ಕೊಡವ ನ್ಯಾಷನಲ್ ಕೌನ್ಸಿಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ …
Read More »ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿ
ಬೆಂಗಳೂರು, ಜು. 20: ಕರ್ನಾಟಕದಲ್ಲಿ ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 445 ವಿದ್ಯಾರ್ಥಿಗಳು 600 ಅಂಕಗಳಿಗೆ ಸರಾಸರಿ 600 ಅಂಕ ಗಳಿಸಿದ್ದಾರೆ. ಮಂಗಳವಾರ ಸಂಜೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದರು. ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್ ಸಿ ಯಲ್ಲಿ …
Read More »ಕ್ರಿಮಿನಲ್ ಗಳು ಒಳ್ಳೆಯ ಕೆಲಸ ಮಾಡಲು ಸಾಧ್ಯವೇ?: ಕೇಂದ್ರದ ವಿರುದ್ಧ ಕಿಡಿಕಾರಿದ ದಿನೇಶ್
ಬೆಂಗಳೂರು: ಪೆಗಸಸ್ ಸ್ಪೈವೇರ್ ಮೂಲಕ ಪ್ರತಿಷ್ಟಿತ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡುವ ಕೇಂದ್ರದ ದುಷ್ಟ ಬುದ್ದಿ ಜಗತ್ತಿನ ಮುಂದೆ ಬೆತ್ತಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೂ ಕಣ್ಗಾವಲು ನಡೆಸಿರುವುದು ಕ್ರಿಮಿನಲ್‌ಗಳು ಮಾಡುವಂತ ಕೆಲಸ. ಕೇಂದ್ರದ ಆಯಕಟ್ಟಿನ ಜಾಗದಲ್ಲಿ ಕ್ರಿಮಿನಲ್‌ಗಳೇ ಇರುವಾಗ ಕ್ರಿಮಿನಲ್ ಕೆಲಸವಲ್ಲದೆ ಒಳ್ಳೆ ಕೆಲಸ ಮಾಡಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಅಸಮರ್ಥ ನಾಯಕನಿಗೆ ಸದಾ ಅಸ್ತಿತ್ವದ ಭಯ ಕಾಡುತ್ತದೆ. ಮೋದಿಯವರಿಗೂ …
Read More »ಸಚಿವ ಮುರಿಗೇಶ್ ನಿರಾಣಿ ಓರ್ವ ‘ಸಿಡಿ ಬಾಬಾ’; ಅವರ ಬಳಿ 500 ಸಿಡಿಗಳಿವೆ; ಹೊಸ ಬಾಂಬ್ ಸಿಡಿಸಿದ ಆಲಂ ಪಾಷಾ
ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿಡಿಗಳಿವೆ. ಯಾರದ್ದೂ ಬೇಕಾದರೂ ಸಿಡಿ ಇರಬಹುದು. ಒಂದು ವೇಳೆ ಇವರಿಗೆ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಉದ್ಯಮಿ ಎ.ಆಲಂ ಪಾಷ ಆರೋಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ರಾಜ್ಯದ ಮಂತ್ರಿಗೂ ಸಿಡಿ ಇದೆ ಎಂದು ಹೆದರಿಸಿದ್ದಾರೆ. ಅವರು ಕೋರ್ಟ್ ನಿಂದ ಸ್ಟೇ …
Read More »BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ
ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು! ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, …
Read More »6 ಬ್ಯಾಗ್ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ
ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …
Read More »ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ
ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ …
Read More »ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ
ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ …
Read More »ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರದ ನಡುವೆ ಇದೀಗ ಇಂದ್ರಜಿತ್ ಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಕಳೆದ 24 ಗಂಟೆಗಳಿಂದ ಫೋನ್ ಕರೆಗಳು ನಿರಂತರವಾಗಿ ಬರುತ್ತಿವೆ. ಈ ಮೂಲಕ ದರ್ಶನ್ ಹಿಂಬಾಲಕರು ದುರ್ವರ್ತನೆ ತೋರುತ್ತಿದ್ದಾರೆ. 30 ರಿಂದ 35 ಜನರಿಂದ ರಾತ್ರಿ ಹಗಲು ಫೋನ್ ಮಾಡ್ತಿದ್ದಾರೆ ಎಂದು ದೂರಿದ್ದಾರೆ. ಬೆದರಿಕೆ ಕರೆಗಳು …
Read More »ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ
ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …
Read More »