ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ …
Read More »ಪೊಲೀಸರ ಎಷ್ಟೇ ಎಚ್ಚರಿಕೆ ನೀಡಿದ್ರು ಬಗ್ಗದ ರೌಡಿಗಳು: 10ಕ್ಕೂ ಹೆಚ್ಚು ಕಾರುಗಳು ಧ್ವಂಸ
ಬೆಂಗಳೂರು :ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದ್ರು ಕೂಡ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ.. ಕುರುಬರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿ ಪುಂಡರು ಮತ್ತೆ ಬಾಲಬಿಚ್ಚಿದ್ದಾರೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ 10ಕ್ಕೂ ಹೆಚ್ಚು ಕಾರುಗಳು ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ತಡರಾತ್ರಿ 1.30ರ ಸುಮಾರಿಗೆ ಬಂದ ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವೇಶ್ವರ ನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.. …
Read More »ಮೆಟ್ರೋ ಕಾಮಗಾರಿ: 350 ಮರಗಳನ್ನು ಕಡಿಯಲು ಹೈಕೋರ್ಟ್ ಸಮ್ಮತಿ
ಬೆಂಗಳೂರು, ಜುಲೈ 16: ನಮ್ಮ ಮೆಟ್ರೋ ಕಾಮಗಾರಿಗಾಗಿ 350 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದಿಂದಾಗಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಮಾರ್ಗ ಕಾಮಗಾರಿ ಪುನಾರಂಭವಾಗಲಿದೆ. ಆದರೆ ಷರತ್ತೊಂದನ್ನು ವಿಧಿಸಿತ್ತು, ಅದರ ಬದಲಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಸೂಚಿಸಲಾಗಿದೆ ನಾಗವಾರ-ಗೊಟ್ಟಿಗೆರೆ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ …
Read More »ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ …
Read More »ಈ ವರ್ಷ ಜಿ.ಪಂ., ತಾ.ಪಂ. ಚುನಾವಣೆ ಇಲ್ಲ
ಬೆಂಗಳೂರು: ಕೊರೊನಾ 3ನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಜಿ.ಪಂ. ಮತ್ತು ತಾ. ಪಂ. ಚುನಾವಣೆಗಳನ್ನು ಈ ವರ್ಷಾಂತ್ಯದ ವರೆಗೆ ನಡೆಸದಿರಲು ಸರಕಾರ ನಿರ್ಧರಿಸಿದೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿ.ಪಂ., ತಾ.ಪಂ. ಚುನಾವಣೆ ನಡೆಯದಿದ್ದರೂ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ. ಇಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಚುನಾವಣೆಗೆ ಅವಕಾಶ ನೀಡಲು ಸಚಿವ ಸಂಪುಟ …
Read More »ಎಸಿಬಿ ದಾಳಿ: 9 ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲು
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿದ್ದ ಎಸಿಬಿ ಅಧಿಕಾರಿಗಳು ಇಂದು ಒಟ್ಟು 9 ಸರ್ಕಾರಿ ನೌಕರರಿಗೆ ಸೇರಿದ 43 ಸ್ಥಳಗಳಲ್ಲಿ ಒಟ್ಟು 310 ಅಧಿಕಾರಿಗಳಿಂದ 43 ತಂಡಗಳಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಸಿಕ್ಕ ಆಸ್ತಿ-ಪಾಸ್ತಿ, ಚಿನ್ನ ಹಣದ ಅಂಕಿ ಅಂಶಗಳು ಹೀಗಿವೆ.. 1. ಜಿ ಶ್ರೀಧರ್- ಕಾರ್ಯ ಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಡಿಸಿ ಕಚೇರಿ ಮಂಗಳೂರು. …
Read More »ಡಿಸೆಂಬರ್ ವರೆಗೆ ತಾ. ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ …
Read More »ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್
ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು …
Read More »ಪೋಷಕರ ಸಂಬಂಧ ಅನಧಿಕೃತವಾದರೂ ಮಗು ಅಧಿಕೃತ: ಹೈಕೋರ್ಟ್
ಬೆಂಗಳೂರು: ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಕಾನೂನು ಗುರುತಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ. ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. …
Read More »ಆಗಸ್ಟ್‌ಗೆ ವಿಧಾನಮಂಡಲ ಅಧಿವೇಶನ ಸಾಧ್ಯತೆ
ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ ಒಳಗೆ ಮುಂಗಾರು ಅಧಿವೇಶನ ನಡೆಸಬೇಕಿದ್ದು, ಕೋವಿಡ್ ಮೂರನೇ ಅಲೆಯೂ ಹೆಚ್ಚು ಕಡಿಮೆ ಅದೇ ಸಂದರ್ಭದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್‌ನಲ್ಲೇ ನಡೆಯಲಿದೆ. ಅಧಿವೇಶನ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ನಡೆಸಬೇಕೆ ಎಂಬ ವಿಚಾರದ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ‘ಲಾಕ್‌ಡೌನ್ ಸಂದಿಗ್ಧತೆಯಿಂದ …
Read More »