ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು …
Read More »ಪೋಷಕರ ಸಂಬಂಧ ಅನಧಿಕೃತವಾದರೂ ಮಗು ಅಧಿಕೃತ: ಹೈಕೋರ್ಟ್
ಬೆಂಗಳೂರು: ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಕಾನೂನು ಗುರುತಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ. ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. …
Read More »ಆಗಸ್ಟ್‌ಗೆ ವಿಧಾನಮಂಡಲ ಅಧಿವೇಶನ ಸಾಧ್ಯತೆ
ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ ಒಳಗೆ ಮುಂಗಾರು ಅಧಿವೇಶನ ನಡೆಸಬೇಕಿದ್ದು, ಕೋವಿಡ್ ಮೂರನೇ ಅಲೆಯೂ ಹೆಚ್ಚು ಕಡಿಮೆ ಅದೇ ಸಂದರ್ಭದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್‌ನಲ್ಲೇ ನಡೆಯಲಿದೆ. ಅಧಿವೇಶನ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ನಡೆಸಬೇಕೆ ಎಂಬ ವಿಚಾರದ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ‘ಲಾಕ್‌ಡೌನ್ ಸಂದಿಗ್ಧತೆಯಿಂದ …
Read More »ಮಾಟ ಮಂತ್ರ ವಿಚಾರ -ಪಕ್ಕದ ಮನೆ ಮಹಿಳೆಗೆ ನಡು ರಸ್ತೆಯಲ್ಲೇ ಥಳಿತ
ಬೆಂಗಳೂರು: ಮಾಟ ಮಂತ್ರದ ಆರೋಪವೊಡ್ಡಿ ಪಕ್ಕದ ಮನೆಯವರಿಗೆ ಕಿರುಕುಳ ನೀಡಿ ಜುಟ್ಟು ಹಿಡಿದು ಹಲ್ಲೆ ಮಾಡಿದ ಘಟನೆ ಕೆಂಗೇರಿಯಲ್ಲಿ ನಡೆದಿದೆ. ರೇಣುಕಾ ಅನ್ನೋ ಮಹಿಳೆಗೆ ಪಕ್ಕದ ಮನೆಯವರು ಕಿರುಕುಳ ನೀಡ್ತಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ರೇಣುಕಾ ಪಕ್ಕದ ಮನೆಯಲ್ಲಿ ಅಲಮೇಲಮ್ಮ ಎಂಬುವವರ ಕುಟುಂಬ ವಾಸಿಸುತ್ತಿದ್ದು ಅವರ ಮನೆಯಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಳು. ಆ ಸಾವಿಗೆ ಪಕ್ಕದ ಮನೆಯ ರೇಣುಕಾ ಕಾರಣವೆಂದು ದಿನಪ್ರತಿ ಅಲಮೇಲಮ್ಮ ಕುಟುಂಬದವರು ಹಲ್ಲೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. …
Read More »ಭ್ರಷ್ಟಾಚಾರ ಆರೋಪ: ಸಿಎಂ ಯಡಿಯೂರಪ್ಪ, ಇತರರ ವಿರುದ್ಧ ದೂರು ದಾಖಲು
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಹುದ್ದೆ ನೀಡಲು ತಮ್ಮ ಬಳಿ ರೂ.16 ಕೋಟಿ ಲಂಚಕ್ಕೆ ಬೇಡಿಕೆ ಇರಿಸಿ, ರೂ.9.75 ಕೋಟಿ ಪಡೆದಿದ್ದರು ಎಂದು ಮಂಡಳಿಯ ಮಾಜಿ ಅಧ್ಯಕ್ಷ ಡಾ.ಎಂ. ಸುಧೀಂದ್ರ ರಾವ್ ಮಾಡಿರುವ ಆರೋಪದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ಸಲ್ಲಿಸಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ …
Read More »ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್
ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ? ಬೆಂಗಳೂರು ಮೈಸೂರು ಮಂಡ್ಯ ವಿಜಯಪುರ ಮಂಗಳೂರು ಉಡುಪಿ ಕೋಲಾರ ಚಿತ್ರದುರ್ಗ ಬಳ್ಳಾರಿ ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ? ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ ಕೃಷ್ಣ.ಎಸ್ …
Read More »ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ
ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …
Read More »ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …
Read More »ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತ: ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು : ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ …
Read More »ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!
ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ …
Read More »