Breaking News

ಬೆಂಗಳೂರು

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಸ್‌ಐಟಿಯಿಂದ ಹೈಕೋರ್ಟ್​ಗೆ ಮೆಮೋ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಜುಲೈ 14ರವರೆಗೆ ಅಂತಿಮ ವರದಿ ಸಲ್ಲಿಸದಂತೆ ಎಸ್‌ಐಟಿ ಪೊಲೀಸರಿಗೆ ಸೂಚನೆ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ …

Read More »

ಸಹಜ ಸ್ಥಿತಿಯತ್ತ ಕರ್ನಾಟಕ: ಏನೆಲ್ಲಾ ಇರಲಿದೆ? ಏನೆಲ್ಲಾ ಇರುವುದಿಲ್ಲ?

ಬೆಂಗಳೂರು: ಕೊಡಗು ಮತ್ತು ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತ ಜಾರಿಗೆ ಬರಲಿದೆ. ದೇವಸ್ಥಾನ, ಮಾಲ್‌ ತೆರೆಯಲು ಅವಕಾಶ ದೊರೆಯಲಿದ್ದು, ಬಹುತೇಕ ನಿರ್ಬಂಧಗಳು ರದ್ದಾಗಲಿವೆ. ಕೋವಿಡ್ ಎರಡನೇ ಅಲೆಯು ರಾಜ್ಯವ್ಯಾಪಿ ಹರಡಿದ ಕಾರಣದಿಂದ ಮೇ 10ರಂದು ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಅಂದಿನಿಂದಲೂ ಬಂದ್‌ ಆಗಿದ್ದ ದೇವಸ್ಥಾನಗಳು ಸೋಮವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿವೆ. ಭಕ್ತರು ದೇವರ ದರ್ಶನವನ್ನಷ್ಟೇ ಪಡೆಯಲು ಅವಕಾಶವಿದ್ದು, ಯಾವುದೇ ಸೇವೆಗಳಿಗೆ ಅನುಮತಿ ಇರುವುದಿಲ್ಲ. …

Read More »

ಕೆಪಿಎಸ್‌ಸಿ: ಮುಗಿಯದ ಗೋಳು, ಅಧಿಕಾರಿಗಳ ಅಳಲು

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ 2006ರಲ್ಲಿ ನೇಮಕಗೊಂಡಿದ್ದ 1998ನೇ ಸಾಲಿನ 383 ಅಧಿಕಾರಿಗಳ ಆಯ್ಕೆ ಪಟ್ಟಿಯನ್ನು 15 ವರ್ಷಗಳ ಬಳಿಕ ಕೆಪಿಎಸ್‌ಸಿ ಜ. 30ರಂದು ಮೂರನೇ ಬಾರಿಗೆ ಪರಿಷ್ಕರಿಸಿದೆ. ಹೊಸ ಪಟ್ಟಿಯ ಪ್ರಕಾರ 168 ಅಧಿಕಾರಿಗಳ ಇಲಾಖೆ, ಹುದ್ದೆ, ವೃಂದ ಬದಲಾಗಿದ್ದು, ಅಧಿಕಾರಿಗಳ ಮರು ನೇಮಕಕ್ಕೆ ಸರ್ಕಾರ ಮುಂದಾಗಿದೆ. ಆದರೆ, ಹುದ್ದೆ ಬದಲಾದವರ ಪೈಕಿ ಅರ್ಧಕ್ಕೂ ಹೆಚ್ಚು ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ಇಲ್ಲದವರ …

Read More »

ಕಾಳಸಂತೆಗೆ ಪಡಿತರ ಅಕ್ಕಿ: 17 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಪಾಲಿಶ್‌ ಮಾಡಿ ವಿವಿಧ ಬ್ರ್ಯಾಂಡುಗಳಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಗಾರಪೇಟೆ-ಕೆ.ಜಿ.ಎಫ್‌ ರಸ್ತೆಯ ದಾಸರಹೊಸಹಳ್ಳಿ ಬಳಿ ಇರುವ ಪಿಆರ್‌ಎಸ್‌ ಆಗ್ರೋಟೆಕ್‌ ಅಕ್ಕಿ ಗಿರಣಿ ಮಾಲೀಕ ಸೇರಿ 17 ಮಂದಿಯ ವಿರುದ್ಧ ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಆಹಾರ ಇಲಾಖೆಯ ರಾಜ್ಯ ಮಟ್ಟದ ತನಿಖಾ ದಳದ ಮುಖ್ಯಸ್ಥರೂ ಆಗಿರುವ ಜಂಟಿ ನಿರ್ದೇಶಕ (ಐಟಿ ವಿಭಾಗ) ಕೆ. ರಾಮೇಶ್ವರಪ್ಪ ಅವರು ಭಾನುವಾರ ದೂರು ನೀಡಿದ್ದಾರೆ. ಅಕ್ಕಿ ಅಕ್ರಮ …

Read More »

ಏರಿದ ದರ: ಒಲೆ ಉರಿಸದ ‘ಅನಿಲ’

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್‌ಗಳ ದರದ ಸತತ ಏರಿಕೆಯಿಂದ ರಾಜ್ಯ ಸರ್ಕಾರದ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆಯ ಫಲಾನುಭವಿಗಳು ಕಂಗಾಲಾಗಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳು ದುಬಾರಿ ದರ ಪಾವತಿಸಲಾಗದೇ ಯೋಜನೆಯಿಂದ ದೂರ ಸರಿಯುತ್ತಿವೆ. ಅನಿಲ ಭಾಗ್ಯ ಯೋಜನೆಯಡಿ 97,256 ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿತ್ತು. ಈ ಪೈಕಿ 13,461 (ಶೇ 13.8) ಮಂದಿ ಈ ವರ್ಷದ ಆರು ತಿಂಗಳಿನಲ್ಲಿ ಎಲ್‌ಪಿಜಿ ತುಂಬಿದ ಒಂದು ಸಿಲಿಂಡರ್‌ ಕೂಡ ಖರೀದಿಸಿಲ್ಲ. 32,462 …

Read More »

ವಿದ್ಯುತ್‌ ಪರಿವರ್ತಕಗಳ ಎತ್ತರಿಸಲು ಸೂಚನೆ

ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್‌ ಪರಿವರ್ತಕಗಳಿಗೆ …

Read More »

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಭೂ ಸಂಕಷ್ಟ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎ ಸ್‌.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ತಿರಸ್ಕರಿಸಿದ್ದು, ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ. 2015ರಲ್ಲಿ ದಾಖಲಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು 10 ಸಾವಿರ …

Read More »

ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm

Read More »

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

  ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ. ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

Read More »

ಕರ್ನಾಟಕ ಪೊಲೀಸರಿಗೆ ತಲೆನೋವಾಯ್ತು ಆಂಧ್ರ-ತೆಲಂಗಾಣ ರೈತರ ಜಗಳ

ರಾಯಚೂರು: ಸುಮಾರು ವರ್ಷಗಳಿಂದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ರಾಜೋಳಿ ಬಂಡಾ ಜಲಾಶಯದ ನೀರು ಹಂಚಿಕೆ ವಿಚಾರವಾಗಿ ಆಂಧ್ರ – ತೆಲಂಗಾಣ ನಡುವೆ ಗಲಾಟೆ ನಡೆಯುತ್ತಲೇ ಇದೆ. ಇಷ್ಟು ದಿನ ರಾಜೋಳಿ ಬಂಡಾ ಜಲಾಶಯದ ನೀರನ್ನು ಕೇವಲ ತೆಲಂಗಾಣಕ್ಕೆ ಮಾತ್ರ ಬಿಡಲಾಗುತ್ತಿತ್ತು. ಈಗ ಆಂಧ್ರದ ರಾಯಲಸೀಮ ಪ್ರದೇಶಕ್ಕೂ ಈ ಜಲಾಶಯದ ನೀರು ಬೇಕು ಎಂಬ ಕೂಗು ಕೇಳಿ ಬಂದಿದೆ. ರಾಜೋಳಿ ಬಂಡಾ ಜಲಾಶಯದ ನೀರನ್ನು ನಮಗೂ ಬಿಡಿ ಎಂದು ಆಂಧ್ರದ …

Read More »