Breaking News

ಬೆಂಗಳೂರು

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು’ ಎಂದರು. ‘ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದೆ. ಅಂದೇ ವರ್ಗಾವಣೆ ಪ್ರಕ್ರಿಯೆ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »

ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ.   ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ …

Read More »

ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರ ನಡೆಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರಕ್ಕೆ ಬಂದು ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಪಂಚಾಯಿತಿ ಮೆಂಬರ್ ವರೆಗೆ ಖರೀದಿ ಮಾಡುವ ನಡವಳಿಕೆ ಇಟ್ಟುಕೊಂಡಿರುವ ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ಕೆ ಪಾಳ್ಯದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಹಾಗೂ ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ …

Read More »

ವೀಕೆಂಡ್ ಕರ್ಫ್ಯೂಗೂ ಡೋಂಟ್ ಕೇರ್: ಮಾರುಕಟ್ಟೆಗಳಲ್ಲಿ ಖರೀದಿಗೆ ಮುಗಿಬಿದ್ದ ಜನರು..!

ಬೆಂಗಳೂರು : ಬೆಂಗಳೂರಿನಲ್ಲಿ ಹಂತ ಹಂತವಾಗಿ ಅನ್ ಲಾಕ್ ಘೋಷಣೆ ಬೆನ್ನಲ್ಲೇ ಜನರು ಕೋವಿಡ್ ನಿಯಮಾವಳಿಯನ್ನ ಗಾಳಿಗೆ ತೂರಿದ್ದಾರೆ. ರಾಜಧಾನಿಯ ಮಾರುಕಟ್ಟೆಗಳಲ್ಲಿ ಕೊರೊನಾ ಭಯವಿಲ್ಲದೆ ಜನರು ಖರೀದಿಯಲ್ಲೇ ಫುಲ್ ಬ್ಯುಸಿ ಆಗಿದ್ರು. ವೀಕೆಂಡ್ ಕರ್ಫ್ಯೂ ಇದ್ರೂ ಕೂಡ ಶಿವಾಜಿನಗರದಲ್ಲಿ ಜನಜಂಗುಳಿಯೇ ಸೇರಿತ್ತು. ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಮಟನ್, ಚಿಕ್ಕನ್ ಖರೀದಿಗೆ ಜನರು ಮುಗಿಬಿದ್ರು. ಸಣ್ಣ ಪುಟ್ಟ ರಸ್ತೆಗಳಲ್ಲೂ ಜನರು ತುಂಬಿದ್ರು. ಬೈಕ್, ಆಟೋ ಸಂಚಾರಕ್ಕೆ ಬ್ರೇಕ್ ಅನ್ನೋದೆ ಇರಲಿಲ್ಲ.. ಸಾಮಾಜಿಕ …

Read More »

ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ, 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯವೇ ಇಲ್ಲ

ಬೆಂಗಳೂರು: ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ ಇವೆ. 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ. 18 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಫ್ಯಾನ್‌ ಇಲ್ಲ. ಇದನ್ನು ಸರಿಪಡಿಸಲು ಪ್ರತ್ಯೇಕ ಹಣಕಾಸಿನ ಲಭ್ಯತೆ ಇಲ್ಲ ಎಂದು ಸ್ವತಃ ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಒಪ್ಪಿಕೊಂಡಿದೆ. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಲಿಖೀತ …

Read More »

ಬೆಂಗಳೂರಿಗೆ ಸ್ಮಾರ್ಟ್‌ ಪುರಸ್ಕಾರ : ತುಮಕೂರು ಡಿಜಿಟಲ್‌ ಗ್ರಂಥಾಲಯಕ್ಕೂ ಪ್ರಶಸ್ತಿ

ಬೆಂಗಳೂರು: ಕೋವಿಡ್‌ ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ)ವನ್ನು ಅತ್ಯುತ್ತಮವಾಗಿ ಬಳಕೆ ಮಾಡಿದ ರಾಜಧಾನಿ ಬೆಂಗಳೂರಿಗೆ ಸ್ಮಾರ್ಟ್‌ ಸಿಟಿ ವಿಶೇಷ ಪುರಸ್ಕಾರ ಲಭಿಸಿದೆ. ದೇಶದ ವಿವಿಧೆಡೆ ಸ್ಮಾರ್ಟ್‌ ಸಿಟಿ ಯೋಜನೆ ಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಸ್ಪರ್ಧೆಗಳಲ್ಲಿ ಕೇಂದ್ರ ಸರಕಾರದ ವತಿಯಿಂದ ಈ ಪುರಸ್ಕಾರ ನೀಡಲಾಗಿದೆ. ಕಾಮಗಾರಿಗಳಲ್ಲಿ ಪದವೀಧರರಿಗೆ ಇಂಟರ್ನ್ ಶಿಪ್‌ ನೀಡುವ ಯೋಜನೆಯ ವಿಭಾಗದಲ್ಲಿ ಬೆಂಗಳೂರು ಸ್ಮಾರ್ಟ್‌ ಸಿಟಿಯನ್ನು ರನ್ನರ್‌ ಅಪ್‌ ಎಂದು ಘೋಷಿಸಲಾಗಿದೆ. ಹವಾಮಾನ …

Read More »

ಸಾರಿಗೆ ಮುಷ್ಕರ: ಡಿ.31ರ ವರೆಗೆ ನಿಷೇಧ

ಬೆಂಗಳೂರು: ಅಗತ್ಯ ಸೇವೆಗಳ ಅಡಿಯಲ್ಲಿ ಸಾರಿಗೆ ನೌಕರರ ಮುಷ್ಕರವನ್ನು ಇದೇ 30ರವರೆಗೆ ನಿಷೇಧಿಸಿದ್ದ ರಾಜ್ಯ ಸರ್ಕಾರ, ಇದೀಗ ಡಿ. 31ರವರೆಗೆ ಆ ಆದೇಶವನ್ನು ವಿಸ್ತರಿಸಿದೆ. ‘ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ- 2013ರಡಿ ಅಗತ್ಯ ಸೇವೆಗಳಲ್ಲಿ ಮುಷ್ಕರ ನಿಷೇಧಿಸಿ, ಫೆ. 2ರಂದು ಆದೇಶ ಹೊರಡಿಸಲಾಗಿತ್ತು. ಪ್ರತಿ ಆರು ತಿಂಗಳಿಗೊಮ್ಮೆ ಇಂಥ ಆದೇಶ ಹೊರಡಿಸಲಾಗುತ್ತದೆ’ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ ‘ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಮತ್ತೆ ಮುಷ್ಕರಕ್ಕೆ …

Read More »

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.   ಜುಲೈ 1ರಿಂದ ಡಿಸೆಂಬರ್​​ 31ರವರೆಗೆ …

Read More »

ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ ,ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ : ಸಿಎಂ.ಇಬ್ರಾಹಿಂ

ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ …

Read More »