ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ …
Read More »ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಕಾಂಗ್ರೆಸ್ ನೆರವು
ಬೆಂಗಳೂರು, ಜೂ.26- ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಆಳುವ ಸರ್ಕಾರಕ್ಕಿಂತಲೂ ಹೆಚ್ಚಿನದಾಗಿ ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿದೆ ಎಂದು ರಾಜ್ಯ ಸಭಾಸದಸ್ಯ ಎಲ್.ಹನುಮಂತಯ್ಯ ಅವರ ನೇತೃತ್ವದ ಸಮಿತಿ ವರದಿ ನೀಡಿದೆ. ಕೋವಿಡ್ ಸಂದರ್ಭದಲ್ಲಿನ ಕಾರ್ಯಚಟುವಟಿಕೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಧ್ಯಂತರ ವರದಿ ನೀಡಿದೆ. ಬೂತ್ ಮಟ್ಟದಿಂದಲೂ ಮಾಹಿತಿ ಕಲೆ ಹಾಕಿರುವ ಸಮಿತಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಎಷ್ಟು …
Read More »ವಾರದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾಯಿಸಲಾಗುವುದು. ಎಂದ ಸತೀಶ್ ಜಾರಕಿಹೊಳಿ
ಬೆಂಗಳೂರು – ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುವುದು. ವಾರದೊಳಗೆ ಈ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಮುಖರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಕಡೆ 3 ವರ್ಷ ಪೂರ್ಣಗೊಂಡಿದೆ. ಕೆಲವು ಕಡೆ ಬದಲಾವಣೆ ಬೇಡಿಕೆ ಇದೆ. ಕೆಲವರು ಸ್ವಯಂ ಪ್ರೇರಿತರಾಗಿ ಸ್ಥಾನ ಬಿಟ್ಟುಕೊಡಲು ಮುಂದಾಗಿದ್ದಾರೆ. ಅಂತಹ ಕಡೆಗಳಲ್ಲಿ ಜಿಲ್ಲಾವಾರು ಸಭೆ ನಡೆಸಿ …
Read More »ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ
ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು …
Read More »ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ
ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್ ಪಿನ್ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್, ಸ್ಥಳೀಯ ನಿವಾಸಿ …
Read More »ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್’ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು. ಅರ್ಜಿ …
Read More »ಪ್ರಧಾನಮಂತ್ರಿ ಆವಾಸ್ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ
\: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ. ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ …
Read More »ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ
ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
Read More »ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಹೇಳಿದರು. ‘ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ …
Read More »ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ
ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …
Read More »