ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಲಾಕ್ ಡೌನ್ ವೇಳೆ ವಾಹನಗಳ ಪರಿಶೀಲನೆ, ತಪಾಸಣೆ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುವವರನ್ನು ನಿಯಂತ್ರಿಸಲು ವಾಹನಗಳನ್ನು ಸೀಜ್ ಮಾಡಲಾಗಿತ್ತು. ಹೀಗೆ ನಿಯಮ ಉಲ್ಲಂಘಿಸಿದವರ ಲಕ್ಷಾಂತರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವುಗಳನ್ನು ಪೊಲೀಸ್ ಠಾಣೆ ಆವರಣದಲ್ಲಿ ನಿಲುಗಡೆ …
Read More »ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ : ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ ಸರ್ಕಾರವು ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು, ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರು ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲ್ಲುವುದು ಖಚಿತ, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, “ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ. ಜನರಿಗೂ ಅವರ ನಾಟಕ ತಿಳಿಸಿದೆ. ಅದಕ್ಕಾಗಿ ಬಿಎಸ್‌ವೈಯವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ” ಎಂದರು. “ಯಡಿಯೂರಪ್ಪ …
Read More »CD ಕೇಸ್; ಆರೋಪಿಗಳಿಗೆ ಸಿಕ್ತು ನಿರೀಕ್ಷಣಾ ಜಾಮೀನು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.
Read More »ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು.?
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ …
Read More »ಡೀಸೆಲ್ ದರ ಹೆಚ್ಚಾದರೂ ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲ್ಲ ; ಸಚಿವ ಸವದಿ
ಬೆಂಗಳೂರು: ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನಾಲ್ಕೂ ನಿಗಮಗಳು ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿತ್ತು. ಆವಾಗ ಬಿಎಂಟಿಸಿ ದರ ಹೆಚ್ಚಳ ಮಾಡಿಲ್ಲವೆಂದು ಶೇ.15 ರಷ್ಟು ದರ ಹೆಚ್ಚಿಸುವಂತೆ ಸಂಸ್ಥೆ ಕೋರಿದೆ. ಆದರೆ ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ನಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. …
Read More »ಸಿ.ಟಿ.ರವಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು – ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿನೆ ಮಾಡಿದ್ದ ಆರೋಪ ಸಂಬಂಧ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ. ಸಿ.ಟಿ.ರವಿ ಮತ್ತು ಅವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್ …
Read More »ಸಿಂಧೂರಿ ನೇಮಕ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್ ನೋಟಿಸ್
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ಆದೇಶಿಸಿದೆ. ‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು. …
Read More »ಜಿಂದಾಲ್ಗೆ 3,667 ಎಕರೆ ಭೂಮಿ ಪರಭಾರೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಭೂಮಿ ಪರಭಾರೆ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಕೆ.ಎ.ಪಾಲ್ ಎಂಬುವವರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರ ಪಿಐಎಲ್ಗೆ ಉತ್ತರಿಸುವಂತೆ ರಾಜ್ಯ ಸರ್ಕಾರ, ಜಿಂದಾಲ್ ಸಂಸ್ಥೆಗೆ ನೋಟಿಸ್ ನೀಡಿದೆ. ಹೈಕೋರ್ಟ್ನ ಮುಖ್ಯ ವಿಭಾಗೀಯ ಪೀಠ ನೋಟಿಸ್ ನೀಡಿದೆ. ಸಿಎಂ ಯಡಿಯೂರಪ್ಪ ವಿರುದ್ಧ ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ರಾಜ್ಯದಲ್ಲಿ ಸರ್ವಾಧಿಕಾರಿ ರೀತಿಯಲ್ಲಿ ಜಿಂದಾಲ್ಗೆ ಭೂಮಿಯನ್ನ …
Read More »ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ವಿತರಣೆ; ‘ಸುಪ್ರೀಂ ಕೋರ್ಟ್ಗೆ ಧನ್ಯವಾದ’ ಎಂದ ಕಾಂಗ್ರೆಸ್
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಇಂದು ಮಾತನಾಡಿದ ಸಂದರ್ಭದಲ್ಲಿ ಜೂನ್ 21 ರಿಂದ ಕೋವಿಡ್ 19 ಲಸಿಕೆ ಉಚಿತವಾಗಿ ಕೇಂದ್ರೀಕೃತ ವಿತರಣೆಯನ್ನು ಮತ್ತೆ ಆರಂಭಿಸುವುದಾಗಿ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಶೇ. 75ರಷ್ಟು ಲಸಿಕೆಯನ್ನು ವಿತರಿಸುವುದರಿಂದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸೇವಾ ಶುಲ್ಕ 150/- ರೂ. ಗಳಿಗೆ ನಿಗದಿ ಪಡಿಸಿರುವುದರಿಂದ ಲಸಿಕೆ ಅಭಿಯಾನ ಇನ್ನಷ್ಟು ಸುಗಮವಾಗಿ …
Read More »ಕನ್ನಡವನ್ನು ಕಾಯಲು ಕಠಿನ ಕಾನೂನೇ ಇಲ್ಲ ! ಹೆಚ್ಚುತ್ತಿವೆ ಕನ್ನಡದ ಅವಮಾನ ಪ್ರಕರಣ
ಬೆಂಗಳೂರು : ಕನ್ನಡ ನಾಡು-ನುಡಿಯನ್ನು ಅವಮಾನಿಸುವ ಘಟನೆಗಳು ನಡೆದಾಗ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಹೌದು. ಆದರೆ ಯಾವ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂಬುದೇ ಯಕ್ಷಪ್ರಶ್ನೆ! ಇತ್ತೀಚೆಗೆ ಗೂಗಲ್ ಮತ್ತು ಅಮೆಜಾನ್ ಕನ್ನಡ ಭಾಷೆ, ಕನ್ನಡದ ಧ್ವಜ ಮತ್ತು ರಾಜ್ಯ ಸರಕಾರದ ಲಾಂಛನಕ್ಕೆ ಅಗೌರವ ತೋರಿದಾಗ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳುವುದಾಗಿ ಸರಕಾರ ಭರವಸೆ ನೀಡಿತು. ಕನ್ನಡಿಗರ ಭಾವನಾತ್ಮಕ ಪ್ರತಿರೋಧಕ್ಕೆ ಮಣಿದ ಗೂಗಲ್, …
Read More »