Breaking News

ಬೆಂಗಳೂರು

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡವಾಗಿದರೂ  ಆರೋಗ್ಯ ಇಲಾಖೆ ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಪ್ರಕಟಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಇಲಾಖೆಯು ಇಂದು ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು. ಆದರೆ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ತನ್ನ ವೆಬ್‌ಸೈಟ್‌ನಲ್ಲಿ ಇಲಾಖೆ ಪ್ರಕಟಿಸಿತ್ತು. ಸರ್ಕಾರದ ನಿರ್ಧಾರಕ್ಕೆ ಕನ್ನಡ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ನಿರ್ಧಾರವನ್ನು ಸಮರ್ಥಿಸಿ, …

Read More »

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

ಬೆಂಗಳೂರು: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ  ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು. ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ ಉದ್ಯೋಗಾಕಾಂಕ್ಷಿಗಳು ಯುವಕರ ಹೋರಾಟಕ್ಕೆ ಬೆಂಬಲ ಕೊಡುವಂತೆ ಕೋರಿದರು. ದೇವೇಗೌಡ ಭೇಟಿ ಬಳಿಕ ಮಾತಾಡಿದ ಉದ್ಯೋಗಾಕಾಂಕ್ಷಿ ಲಕ್ಷ್ಮಿಕಾಂತ್, ಸರ್ಕಾರ ಪ್ರತಿ ವರ್ಷ 1ಲಕ್ಷ ಹುದ್ದೆ ಸೃಷ್ಟಿ ಮಾಡ್ತೇವೆ ಎಂದು ಹೇಳಿದ್ರು. ಆದ್ರೆ ಹುದ್ದೆಗಳ ಸೃಷ್ಟಿಸುವ ಕೆಲಸ ಮಾಡ್ತಿಲ್ಲ. ಸುಳ್ಳು …

Read More »

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

ಬೆಂಗಳೂರು: ಜಿಬಿಎ , ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡುಕೊಳ್ಳುವ ಆಕಾಂಕ್ಷೆ ನಮಗೆ ಇದೆ. ಬಿಜೆಪಿ ಯಾವ ನಿಲುವು ತೆಗೆದುಕೊಳ್ಳುತ್ತೋ ಅದರ ಮೇಲೆ ನಾವು ತೀರ್ಮಾನ ಮಾಡ್ತೀವಿ ಅಂತ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡ ತಿಳಿಸಿದ್ದಾರೆ. ಮೈತ್ರಿ ಬಗ್ಗೆ ಜೆಪಿ ಭವನದಲ್ಲಿ ಮಾತಾಡಿದ ಅವರು, ನಾವು ಎನ್‌ಡಿಎ ಭಾಗವಾಗಿದ್ದೇವೆ. ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅನ್ನೋದು ನಮ್ಮ ಆಕಾಂಕ್ಷೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. …

Read More »

ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿದ ದರ್ಶನ

ಬೆಂಗಳೂರು: ತಲೆ ದಿಂಬು, ಟಿವಿ ಆಯ್ತು ಈಗ ವಿಚಾರಣೆ ವೇಳೆ ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ತ್ವರಿತಗತಿಯಲ್ಲಿ ನಡೆಸುವಂತೆ, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ, ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ನ್ಯಾಯಾಧೀಶರಿಗೆ ದರ್ಶನ್ ಧನ್ಯವಾದ ಹೇಳಿದರು. ಥ್ಯಾಂಕ್ಸ್ ಹೇಳಬಾರದು ನಮ್ಮ ಕೆಲಸ ಮಾತ್ರ ಮಾಡಿದ್ದೇವೆ, ಥ್ಯಾಂಕ್ಸ್ ಹೇಳುವ ಅಗತ್ಯವಿಲ್ಲ ಅಂತಾ ನ್ಯಾಯಾಧೀಶರು ತಿಳಿಸಿದರು. …

Read More »

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಚಿವ ಸಂಪುಟ‌ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ್ದರು. ಈ ಬೆನ್ನಲ್ಲೇ 24 ಮಂದಿ ವಿಧಾನ ಪರಿಷತ್‌ ಸದಸ್ಯರೂ  ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್‌ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್‌ಸಿಗಳು ಸಹಿ ಮಾಡಿದ ಪತ್ರವನ್ನ ಖರ್ಗೆ …

Read More »

ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನಮ್ಮ ಸರ್ಕಾರ ಎಲ್ಲಾ ಹುದ್ದೆ  ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ  ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ  ಕುರಿತು ಬೆಂಗಳೂರಿನಲ್ಲಿ ಸಚಿವರು ಮಾತನಾಡಿದರು. ಸರ್ಕಾರ ಎಲ್ಲಾ ಹುದ್ದೆ ಭರ್ತಿಗೆ ಸಿದ್ದ ಇದೆ. ಯುವಕರ ಸಮಸ್ಯೆಗಳ ಅರಿವಿದೆ, ವಿಪಕ್ಷದಲ್ಲಿ ಇದ್ದಾಗಲೂ ನಾವು ಸ್ಪಂದಿಸಿದ್ದೇವೆ ಈಗಲೂ 35-40 ಸಾವಿರ ಹುದ್ದೆ ತುಂಬಿದ್ದೇವೆ. ಈಗಲೂ ಒಳ ಮೀಸಲಾತಿ ಸಮಸ್ಯೆ ಸ್ವಲ್ಪ ಇದೆ, …

Read More »

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು:ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ  24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ …

Read More »

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು

ಬೆಂಗಳೂರು:  ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ  ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಮಾದರಿಯಾಗಿದ್ದಾರೆ. ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ …

Read More »

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ  ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌  ಪ್ರತಿಭಟನೆ ನಡೆಸಿದೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ …

Read More »

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ  ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …

Read More »