Breaking News

ಬೆಂಗಳೂರು

ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, …

Read More »

ವಿಜಯೇಂದ್ರ ಮಠ ಸುತ್ತಾಟ ಗುಟ್ಟು?

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಸಚಿವರು, ಬಿಜೆಪಿ ನಾಯಕರು ಬಲವಾಗಿ ಪ್ರತಿಪಾದಿಸಿದ್ದರೂ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ಅವರು ಮಠಗಳನ್ನು ಸುತ್ತಲಾರಂಭಿಸಿರುವುದು ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಯಡಿಯೂರಪ್ಪನವರ ವಿರೋಧಿ ಎಂದೇ ಗುರುತಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಇತ್ತೀಚೆಗೆ ಹಲವು ಮಠಗಳಿಗೆ ಭೇಟಿ ಕೊಟ್ಟಿದ್ದರು. ದೆಹಲಿ ಮಟ್ಟದಲ್ಲಿ ಬಿಜೆಪಿಯೊಳಗೆ ‘ಹಿಡಿತ’ ಹೊಂದಿರುವ …

Read More »

ತೈಲ ಬೆಲೆ: ಇಂದಿನಿಂದ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಇಂದಿನಿಂದ ಐದು ದಿನ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್‌ ಬಂಕ್‌ಗಳ ಮುಂದೆ ಹಮ್ಮಿಕೊಂಡಿರುವ ಸರಣಿ ಪ್ರತಿಭಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೆಪಿಸಿಸಿಯಿಂದ ಜಿಲ್ಲಾವಾರು ಉಸ್ತುವಾರಿಗಳನ್ನು ನೇಮಿಸಲಾಗಿದೆ. ಶಾಸಕರು, ಮಾಜಿ ಸಚಿವರು ಮತ್ತು ಸಂಸದರು, ಮಾಜಿ ಸಂಸದರಿಗೆ ಜಿಲ್ಲಾವಾರು ಉಸ್ತುವಾರಿ ನೀಡಿದ್ದು, ಪ್ರತಿಯೊಬ್ಬರೂ ಪ್ರತಿಭಟನೆಯ ಮೇಲೆ ಜೂಮ್‌ ಮೂಲಕ ನಿಗಾ ಇರಿಸಿ ಕೆಪಿಸಿಸಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿಭಟನೆಯ ಒಂದು …

Read More »

‘ಲಾಕ್ಡೌನ್’ ನಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ, ‘ಅನ್ಲಾಕ್’ ಬಗ್ಗೆ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿ ಮಾಡಲಾದ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗುವುದು. ಕೈಗಾರಿಕೆ ಚಟುವಟಿಕೆಗಳಿಗೆ ಮತ್ತಷ್ಟು ಅವಕಾಶ ನೀಡಲಿದ್ದು, ಆಟೋ, ಟ್ಯಾಕ್ಸಿ, ಕ್ಯಾಬ್ ಗಳಿಗೆ …

Read More »

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಶಾಲಾರಂಭಕ್ಕೆ ದಿನ ನಿಗದಿ, ನಿರ್ಧಾರವಾಗದ ಶುಲ್ಕ : ಜೂ. 15ರಿಂದ ದಾಖಲಾತಿ; ಜು.1ರಿಂದ ತರಗತಿ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ, ದಾಖಲಾತಿ, ಶಾಲಾರಂಭದ ದಿನಾಂಕ ಪ್ರಕಟಿಸಿದ್ದರೂ ಶುಲ್ಕದ ಗೊಂದಲವನ್ನು ಮಾತ್ರ ಸರಕಾರ ಬಗೆಹರಿಸಿಲ್ಲ. 2020-21ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಬೋಧನ ಶುಲ್ಕದಲ್ಲಿ ಶೇ. 30ರಷ್ಟು ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಜೂ. 15ರಿಂದ ದಾಖಲಾತಿ ಆರಂಭವಾಗಿ, ಜು. 1ರಿಂದ ತರಗತಿಗಳು ಪ್ರಾರಂಭ ವಾಗಲಿವೆ. ಆದರೆ ಹೆತ್ತವರು ಶುಲ್ಕ ಪಾವತಿಗೆ ಹಿಂದೇಟು ಹಾಕುತ್ತಿದ್ದಾರೆ. ಪ್ರತ್ಯಕ್ಷ ತರಗತಿಗಳು ನಡೆಯದೆ ಇರುವುದರಿಂದ ಪೂರ್ಣ ಶುಲ್ಕ …

Read More »

ಸುಪ್ರೀಂ ಕೋರ್ಟ್‌ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೃಷಿ ಪ್ರೀತಿ

ಬೆಂಗಳೂರು: ಸುಪ್ರೀಂ ಕೋರ್ಟ್‌ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕೆ.ಎಂ. ನಟರಾಜ್ ಅವರು ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಕಾಯಕ ಮರೆತಿಲ್ಲ. ಸುಪ್ರೀಂ ಕೋರ್ಟ್‌ ರಜೆ ಅವಧಿಯಲ್ಲಿ ತಮ್ಮ ಕೃಷಿ ಪ್ರೀತಿ ಮುಂದುವರಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಕೊನೆತೋಟ ಮಹಾಬಲೇಶ್ವರ ನಟರಾಜ್ ಅವರು ಕೃಷಿ ಕುಟುಂಬದಲ್ಲಿ ಹುಟ್ಟಿ ಬೆಳೆದು ವಕೀಲ ವೃತ್ತಿಯಲ್ಲಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಇವರು …

Read More »

ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ

ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು …

Read More »

ಅನ್ ಲಾಕ್ ಗೆ ಸಿದ್ಧತೆ: ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೌಂಟ್ ಡೌನ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಒಂದೂವರೆ ತಿಂಗಳಿಂದ ಮನೆಯಲ್ಲೇ ಬಂಧಿಯಾದಂತಾಗಿದ್ದ ಜನರಿಗೆ ಬಿಡುಗಡೆ ಸಿಗಲಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಪ್ರಸ್ತುತ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಗಿಯಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ …

Read More »