Breaking News

ಬೆಂಗಳೂರು

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …

Read More »

ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು

ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್‌ಆರ್‌ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್‌ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್‌) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …

Read More »

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …

Read More »

ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್

ಬೆಂಗಳೂರು: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …

Read More »

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …

Read More »

ಮಾಜಿ ಶಾಸಕ ಎನ್.ಎಸ್.ಖೇಡ ನಿಧನ

ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …

Read More »

ತಂದೆಗೆ ಮಗುವನ್ನು ನೋಡಲು ಬಿಡದ IPS ಅಧಿಕಾರಿ..? ಪತಿಯಿಂದ ಆರೋಪ.. ಡಿಜಿಪಿಗೆ ದೂರು

ಬೆಂಗಳೂರು: ಐಪಿಎಸ್​ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಡಿಜಿ&ಐಜಿಪಿ ಪ್ರವೀಣ್ ಸೂದ್​​ಗೆ ದೂರು ನೀಡಲಾಗಿದೆ. ವರ್ತಿಕಾ ಅವರು ತನ್ನ ಪತಿಗೆ ಮಗುವನ್ನ ನೋಡಲು ಬಿಡ್ತಿಲ್ಲ ಎಂದು ಆರೋಪಿಸಲಾಗಿದೆ. ತನ್ನ ಅಧಿಕಾರ ಬಳಸಿಕೊಂಡು ವರ್ತಿಕಾ ಕಟಿಯಾರ್ ತಮ್ಮ ಪತಿಗೆ ಮಗು ನೋಡದಂತೆ ತಡೆದಿದ್ದಾರೆ.. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಎಫ್​ಎಸ್​ ಅಧಿಕಾರಿಯಾಗಿರುವ ವರ್ತಿಕಾ ಅವರ ಪತಿ ನಿತಿನ್ ಶುಭಾಶ್, ತನಗೆ …

Read More »

ಆರೋಪಿಗಳಿಗೆ ಜಾಮೀನು ನೀಡಬೇಡಿ ಎಂದು ಎಸ್‍ಐಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲ್ಯಾಕ್‍ಮೇಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಜಾಮೀನು ನೀಡಬೇಡಿ ಎಂದು ಎಸ್‍ಐಟಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.. ಆರೋಪಿಗಳು ಇದೂವರೆಗೂ ತನಿಖೆಗೆ ಸಹಕಾರ ನೀಡಿಲ್ಲ. ಸಿಡಿ ರಿಲೀಸ್ ಆದ ದಿನವೇ ತಲೆ ಮರೆಸಿಕೊಂಡಿದ್ದಾರೆ. ಎಷ್ಟು ಬಾರಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ದೂರುದಾರರಿಗೆ ಬೆದರಿಕೆ ಹಾಕಿದ್ದಕ್ಕೆ ಸಾಕ್ಷ್ಯಗಳಿದ್ದು, ಹೊರರಾಜ್ಯದಲ್ಲಿ ಯುವತಿಯ ಜೊತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳಿವೆ. ಸಾಕ್ಷ್ಯಗಳ ಪ್ರಕಾರ ಕೆಲವೊಂದು ವೀಡಿಯೋ ತುಣುಕುಗಳನ್ನು ದೂರುದಾರರಿಗೆ ನೀಡಿದ್ದಾರೆ . …

Read More »

ತಮಿಳು ಖ್ಯಾತ ನಟ ವಿಶಾಲ್ ವಿರುದ್ಧ ಕಿಡಿಕಾರಿದ ನಟಿ ಗಾಯಿತ್ರಿ ರಘುರಾಮ್

ಬೆಂಗಳೂರು : 5 ದಿನಗಳ ಹಿಂದೆ ತಮಿಳು ಖ್ಯಾತ ನಟ ವಿಶಾಲ್ ತಮಿಳುನಾಡಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ಅತ್ಯಾಚಾರ ಎಸಗಿದ್ದನ್ನು ಕುರಿತು ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ ವುಡ್ ನ ಮನಸೆಲ್ಲ ನೀನೇ ‘ ಚಿತ್ರದ ನಟಿ , ಕೊರಿಯೋಗ್ರಾಫರ್ , ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಗಾಯಿತ್ರಿ ರಘುರಾಮ್ ವಿಶಾಲ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಬರುವಂತೆ ಟ್ವೀಟ್ ಮಾಡಿದ್ದಾರೆ. ವಿಶಾಲ್ ಅವರು …

Read More »

ದರೋಡೆಗೆ ಸಂಚು: ಐದು ಮಂದಿ ಬಂಧನ

ಬೆಂಗಳೂರು: ಸಾರ್ವಜನಿಕರನ್ನು ಬೆದರಿಸಿ, ದರೋಡೆಗೆ ಸಂಚು ರೂಪಿಸಿದ್ದ ಆರೋಪದಡಿ ಕುಖ್ಯಾತ ರೌಡಿಗಳ ಸಹಚರರಾದ ಐದು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಸ್ಲೀಂ ಪಾಷಾ (38), ಶೇಖ್ ತನ್ವರ್‌ (21), ಮಹಮದ್ ಸುಲ್ತಾನ್ (23), ಸೈಯದ್‌ ಫೈರೋಜ್‌ (32) ಹಾಗೂ ಇಮ್ರಾನ್ ಪಾಷಾ (34) ಬಂಧಿತರು. ‘ಇವರು ವಿವೇಕನಗರ ಠಾಣಾ ವ್ಯಾಪ್ತಿಯ ಇನ್ಫೆಂಟ್ ಜೀಸಸ್ ಚರ್ಚ್‌ ಸಮೀಪದ ದಾರಿಯಲ್ಲಿ ಒಂಟಿಯಾಗಿ ಬರುವವರ ಮೇಲೆ ಹಲ್ಲೆ ನಡೆಸಿ, ನಗದು-ಚಿನ್ನಾಭರಣ ದೋಚಲು ಆರೋಪಿಗಳು …

Read More »