Breaking News

ಬೆಂಗಳೂರು

ಮೆಗಾಸಿಟಿ ವಂಚನೆ ; ಸಚಿವ ಯೋಗೇಶ್ವರ್‌ ವಿರುದ್ದ ಸಿಐಡಿಗೆ ದೂರು

ಬೆಂಗಳೂರು: ಮೆಗಾಸಿಟಿ ಡೆವಲಪರ್ಸ್‌ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕ್ರಮ ಜರುಗಿಸಿ, ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಮೆಗಾಸಿಟಿ ನಿವೇಶನ ಸದಸ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ರವೀಂದ್ರ ಬೆಲೆಯೂರು ಸಿಐಡಿ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ‘1995-2000ದ ಅವಧಿಯಲ್ಲಿ 9,000 ಜನರಿಂದ ₹ 70 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಮೆಗಾಸಿಟಿ ಡೆವಲಪರ್ಸ್‌ ಮೇಲಿದೆ. 25 ವರ್ಷಗಳಾದರೂ ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ದೊರಕಿಲ್ಲ. ಕೇಂದ್ರ …

Read More »

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದ ಸಿಎಂ B.S.Y.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಉತ್ತರಿಸಿದರು. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಲಾಕ್‍ಡೌನ್‍ನಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ. ಕೈಗಾರಿಕೆಗಳ …

Read More »

ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ಪ್ರತಿನಿತ್ಯ 95 ಸಾವಿರ ಜನಕ್ಕೆ ಉಚಿತ ಊಟ

ಬೆಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ದೇಶಾದ್ಯಂತ ಅನೇಕ ಜನ ಆಹಾರದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಅಕ್ಷಯ ಪಾತ್ರೆ ಪ್ರತಿಷ್ಠಾನವು ಅನೇಕ ಜನರ ಹಸಿದ ಹೊಟ್ಟೆಗಳನ್ನು ತುಂಬಿಸುತ್ತಿದೆ. ಅದರಲ್ಲೂ ನಗರದ ಕೂಲಿ ಕಾರ್ಮಿಕರು, ಸ್ಮಶಾನದ ಸಿಬ್ಬಂದಿ, ಪೋಲಿಸರು, ಆರೋಗ್ಯ ಸಿಬ್ಬಂದಿಗಳಿಗೆ ಫುಡ್ ಪ್ಯಾಕೆಟ್ ಗಳ ವಿತರಣೆ ಮಾಡುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಪ್ರತಿನಿತ್ಯ 95,000 ಜನರಿಗೆ ಫುಡ್ ಪ್ಯಾಕೆಟ್ ಗಳನ್ನು ವಿತರಣೆ ಮಾಡುತ್ತಿದೆ. ಅದರಲ್ಲಿ 1,450 ಸ್ಮಶಾನ ಸಿಬ್ಬಂದಿಗಳಿಗೆ ನಿತ್ಯ …

Read More »

ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ರದ್ದು ಮಾಡಿ: ಡಿಕೆಶಿ

ಬೆಂಗಳೂರು: ‘ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಷಕ ಪರೀಕ್ಷೆಗಳನ್ನು ರದ್ದು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್​​ ಅವರಿಗೆ ಟ್ವೀಟ್‌ ಮಾಡಿರುವ ಅವರು, ‘ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ‌ ವಿನಾಯಿತಿ ನೀಡಲೇಬೇಕಾಗುತ್ತದೆ’ ಎಂದಿದ್ದಾರೆ. ’12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ‌ ಕೇಂದ್ರ ಸರ್ಕಾರದ‌ ನಿರ್ಧಾರವನ್ನು ನಾನು‌ ಸ್ವಾಗತಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

Read More »

ಬಿಗಿ ಕ್ರಮದೊಂದಿಗೆ ಲಾಕ್​ಡೌನ್​ ವಿಸ್ತರಣೆ: ಸಿಎಂ ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿ ಜೂನ್​ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್​ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬುದು ಇಂದು ಸಂಜೆ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಸಂಜೆ ಸಚಿವರ ಜೊತೆಗಿನ ಸಭೆ ಬಳಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.

Read More »

ಜನತೆಗೆ ಬದುಕುವ ಚಿಂತೆ, ಬಿಜೆಪಿಗೆ ಕುರ್ಚಿ ಕಿತ್ತಾಟದ್ದೇ ಚಿಂತೆ, ಈ ಸರ್ಕಾರ ಭ್ರಷ್ಟಾಚಾರದ ಸಂತೆ’ : ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್

ಬೆಂಗಳೂರು: ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಗೆ ಸದಾ ಕುರ್ಚಿಯದ್ದೇ ಚಿಂತೆ ಎಂದು ಲೇವಡಿ ಮಾಡಿದೆ. ಜನರಿಗೆ ಬದುಕುವ ಚಿಂತೆಯಾದರೆ, ಬಿಜೆಪಿಗೆ ಕುರ್ಚಿ ಕಿತ್ತಾಟದ್ದೇ ಚಿಂತೆಯಾಗಿದೆ. ಇಡೀ ರಾಜ್ಯ ಸರ್ಕಾರ ಭ್ರಷ್ಟಾಚಾರದ ಸಂತೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಬಿಜೆಪಿಯವರು ಒಬ್ಬೊಬ್ಬರಾಗಿ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಆಯಂಫೋಟೆರಿಸಿನ್-ಬಿ ತರುವುದಕ್ಕೆ ಅಲ್ಲ, ಲಸಿಕೆ …

Read More »

ಆನ್​​ಲೈನ್​ ಗ್ಯಾಂಬ್ಲಿಂಗ್ ನಿರ್ಬಂಧ..? ಸರ್ಕಾರಕ್ಕೆ ಹೈಕೋರ್ಟ್​ ನೀಡಿದ ಸೂಚನೆ ಏನು..?

ಬೆಂಗಳೂರು: ಆನ್ ಲೈನ್ ಜೂಜು ರದ್ದು ಕೋರಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ಮುಖ್ಯ ವಿಭಾಗಯ ಪೀಠದಲ್ಲಿ ನಡೆಯಿತು. ಆನ್ ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದೆ.. ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಹೈಕೋರ್ಟ್​ಗೆ ಅನ್ ಲೈನ್ ಗೇಮ್ಸ್ ಒಕ್ಕೂಟ ಮನವಿ ಸಲ್ಲಿಸಿತು. ಇದಕ್ಕೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿತು. ಆನ್ ಲೈನ್ ಗ್ಯಾಂಬ್ಲಿಂಗ್ ಬಗ್ಗೆ ಸರ್ಕಾರ ಪ್ರತಿಕ್ರಿಯಿಸಬೇಕು. ಈ ಕುರಿತು ರಾಜ್ಯ ಸರ್ಕಾರ ನಿರ್ಧಾರ …

Read More »

ಇಂದು ಸಂಜೆ ಸಿಎಂ ಮಹತ್ವದ ಸಭೆ, ಲಾಕ್ ಡೌನ್ ವಿಸ್ತರಣೆ ಫಿಕ್ಸ್..!?

ಬೆಂಗಳೂರು : ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದರೂ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡುವ ಸಂಬಂಧ ಇಂದು ಸಂಜೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ ಎರಡು ಪ್ರಮುಖ ಸಭೆಗಳು ನಡೆಯಲಿದ್ದು,ರಾಜ್ಯದಲ್ಲಿ ಪುನಃ ಲಾಕ್ ಡೌನ್ ಮುಂದುವರೆಸುವ ಕುರಿತಾಗಿ ತೀರ್ಮಾನ ಹೊರಬೀಳುವ ಸಂಭವವಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೋವಿಡ್ ತಜ್ಞರು, ವೈದ್ಯರು …

Read More »

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶರಣಾಗಲು ಸೂಚನೆ ನೀಡಿದರೂ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್ ಗಾಯಗೊಂಡಿದ್ದಾರೆ. …

Read More »

ರಾಜ್ಯದಲ್ಲೂ ರದ್ದಾಗುತ್ತಾ ‘ದ್ವಿತೀಯ PUC’ ಪರೀಕ್ಷೆ : ಈ ಕುರಿತು ಸಚಿವ ‘ಸುರೇಶ್ ಕುಮಾರ್’ ಹೇಳಿದ್ದೇನು..?

ಬೆಂಗಳೂರು : ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಈ ನಡುವೆ ರಾಜ್ಯದಲ್ಲೂ ‘ದ್ವಿತೀಯ PUC’, ‘SSLC’ ಪರೀಕ್ಷೆ ರದ್ದಾಗುತ್ತಾ..ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲವಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಪರೀಕ್ಷೆ ನಡೆಸಬೇಕೋ/ಬೇಡವೋ ಎಂಬುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸಿ …

Read More »