ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ. ಈ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಸರ್ಕಾರ ಉದ್ದೇಶಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ಕುರಿತು ನಿರ್ಧಾರವನ್ನು ತೆಗದುಕೊಳ್ಳಲಾಗುವುದು …
Read More »ಸೋಂಕು ಕಡಿಮೆ ಆಗದಿದ್ದರೆ ಅನ್ ಲಾಕ್ ಇಲ್ಲ: ಡಿಸಿಎಂ ಸವದಿ
ಬೆಂಗಳೂರು, ಜೂ. 1- ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಬೇಡ. ಹಂತ ಹಂತವಾಗಿ ಅನ್ ಲಾಕ್ ಮಾಡಿದರೆ ಸೂಕ್ತ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ಮಾಡಿದ್ದರಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ. ಅನ್ …
Read More »ಲಸಿಕೆ ಮ್ಯಾಜಿಕ್: ಕೊರೊನಾ ನಿಯಂತ್ರಿಸುವಲ್ಲಿ ಪರಪ್ಪನ ಅಗ್ರಹಾರ ಅಧಿಕಾರಿಗಳು ಸಕ್ಸಸ್
ಬೆಂಗಳೂರು: ಪರಪ್ಪನ ಅಗ್ರಹಾರದ ಕೈದಿಗಳಿಗೆ ಕಳೆದ ಒಂದು ತಿಂಗಳಿನಿಂದ ಹಂತ ಹಂತವಾಗಿ ಕೊರೊನಾ ಲಸಿಕೆ ನೀಡಲಾಗ್ತಿದೆ. ಈಗಾಗಲೇ 2500ಕ್ಕೂ ಹೆಚ್ಚು ಕೈದಿಗಳಿಗೆ ಮೊದಲ ಡೋಸ್ ವ್ಯಾಕ್ಸಿನೇಷನ್ ಮುಗಿದಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಅಂತ ಹೇಳಲಾಗ್ತಿದೆ. ಜೈಲಿನಲ್ಲಿ ನೂರಕ್ಕೂ ಹೆಚ್ಚಿದ್ದ ಕೊರೊನಾ ಸೋಂಕಿನ ಪ್ರಮಾಣ ಈಗ ದಿಢೀರ್ ಇಳಿಕೆಯಾಗಿದೆ. ಕೇವಲ 12 ಮಂದಿ ವಿಚಾರಣಾಧೀನ ಕೈದಿಗಳು ಮಾತ್ರ ಈಗ ಸೋಂಕಿತರಾಗಿದ್ದಾರೆ ಅಂತ ತಿಳಿದುಬಂದಿದೆ. ಜೈಲಧಿಕಾರಿಗಳು ಕೈಗೊಂಡ ಕ್ರಮಗಳು …
Read More »ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ‘ಅಜಯ್ ರಾವ್’ ಮೇಕಪ್ ಮ್ಯಾನ್ ಬಲಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಾವಿನ ಸರಣಿ ಮುಂದುವರೆದಿದ್ದು, ಸಾವಿರಾರು ಮಂದಿ ಹೆಮ್ಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ಕಿಲ್ಲರ್ ಕೊರೊನಾ ಸೋಂಕಿಗೆ ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮೇಕಪ್ ಮ್ಯಾನ್ ಜಯರಾಮ್ ಮೃತಪಟ್ಟಿದ್ದಾರೆ. ಈ ಕುರಿತು ನಟ ಅಜಯ್ ರಾವ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಯರಾಮನ್ ನನ್ನ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದರು, ಕಳೆದ 11 ವರ್ಷಗಳದಿಂದ ನನ್ನ ಜೊತೆ ಕೆಲಸ ಮಾಡುತ್ತಿದ್ದರು. …
Read More »ಬೆಂಗಳೂರಲ್ಲಿ ಸೋಂಕು ನಿವಾರಕ ಸಿಂಪಡಣೆಗೆ ತಡೆ
ಬೆಂಗಳೂರು, ಜೂನ್ 01; ಬಿಬಿಎಂಪಿ ವಿಮಾನದ ಮೂಲಕ ಬೆಂಗಳೂರು ನಗರದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡುವ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿದೆ. ನಗರದ ಆಯ್ದ ಪ್ರದೇಶದಲ್ಲಿ ಇದನ್ನು ಜಾರಿಗೊಳಿಸಬೇಕಿತ್ತು. ಸೋಮವಾರದಿಂದ ಬುಧವಾರದ ತನಕ ನಗರದ ಆಯ್ದ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಣೆ ಮಾಡಲು ಏರಿಯಲ್ ವರ್ಕ್ಸ್ ಏರೋ ಎಲ್‍ಎಲ್‍ಪಿ ಸಂಸ್ಥೆಯ ಮುಂದಾಗಿತ್ತು. ಬಿಬಿಎಂಪಿ ಆಯುಕ್ತ ಗೌರವ ಗುಪ್ತ ಸೂಚನೆ ಅನ್ವಯ ಪ್ರಾಯೋಗಿಕ ಯೋಜನೆಗೆ ತಡೆ ನೀಡಲಾಗಿದೆ. ಕೆಲವು …
Read More »ಸಿದ್ದರಾಮಯ್ಯಗೆ ತೀವ್ರ ಜ್ವರ: ಮಣಿಪಾಲ್‌ಗೆ ದಾಖಲು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಪಡೆಯಲಿದ್ದು, ಅವರು ಮಂಗಳವಾರ ಮತ್ತು ಬುಧವಾರ ಭಾಗವಹಿಸಲಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ’ ಎಂದು ಆಪ್ತ ಮೂಲಗಳು ಮಾಹಿತಿ …
Read More »ಸೆಕೆಂಡ್ ಡೋಸ್ 12 ವಾರದಿಂದ 1 ತಿಂಗಳಿಗೆ ಇಳಿಕೆ, ವಿದೇಶಕ್ಕೆ ಹೋಗುವವರಿಗೆ ಲಸಿಕೆ
ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮತ್ತು ವ್ಯಾಸಂಗ ಮಾಡುವವರಿಗೆ ಕೊರೋನಾ ಲಸಿಕೆಯನ್ನು ಆದ್ಯತೆಯ ಮೇಲೆ ನೀಡಲಾಗುತ್ತದೆ. ಇಂದಿನಿಂದ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಡಿಸಿಎಂ, ಲಸಿಕೆ ಕಾರ್ಯಪಡೆ ಅಧ್ಯಕ್ಷ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಇಂದು 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡಲಿದ್ದು, ಲಸಿಕೆ ಪಡೆಯಲು ಆಧಾರ್ ಕಾರ್ಡ್, ಪಾಸ್ಪೋರ್ಟ್, ವಿದೇಶದಲ್ಲಿರುವ ತಮ್ಮ ಕೆಲಸ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು …
Read More »ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟದಿಂದ ಜನರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಅವರೆಲ್ಲರೂ ಪವರ್ ಬೆಗ್ಗರ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸಿ.ಪಿ.ಯೋಗೇಶ್ವರ್, ಬಿ.ವೈ.ವಿಜಯೇಂದ್ರ ದೆಹಲಿ ಭೇಟಿಗೆ ಕಿಡಿಕಾರಿದ ಅವರು, ಸಿಎಂ ಯಡಿಯೂರಪ್ಪನವರು ಯಾರ್ಯಾರನ್ನೋ ಎಲ್ಲೆಲ್ಲಿಂದಲೊ ಕರೆತಂದರು. ಈಗ ಅವರೇ ಎಲ್ಲವನ್ನು ಅನುಭವಿಸುತ್ತಿದ್ದಾರೆ. ಅವರು ಮಾಡಿದ್ದನ್ನು ಅವರು ಅನುಭವಿಸುತ್ತಿದ್ದಾರೆ ಎಂದು ವ್ಯಂಗವಾಡಿದರು. ಇದೇ ವೇಳೆ ರಾಜ್ಯ …
Read More »ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ
ಬೆಂಗಳೂರು : ಟೆಸ್ಟಿಂಗ್ ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಶೇ. 5ರೊಳಗೆ ಬರುವ ವರೆಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ. ಲಾಕ್ ಡೌನ್ ಮತ್ತಿತರ ವಿಷಯದಲ್ಲಿ ತಜ್ಞರ ಸಲಹೆಯನ್ನು ಸರ್ಕಾರ ಚಾಚೂತಪ್ಪದೆ ಪಾಲಿಸಬೇಕು. ಎಲ್ಲರಿಗೂ ಲಸಿಕೆ ಹಾಕುವುದೊಂದೇ ಕೊರೊನಾದಿಂದ ದೂರ ಇರುವ ಮಾರ್ಗ. 12 ವರ್ಷದೊಳಗಿನ ಮಕ್ಕಳನ್ನು …
Read More »ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ
ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …
Read More »