ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.
Read More »ಹಳ್ಳಿಗಳಲ್ಲಿ ಕೊರೋನಾ 2ನೇ ಅಲೆ ಹರಡಲು ಸರ್ಕಾರದ ವೈಫಲ್ಯವೇ ಕಾರಣ : ಸಿದ್ದು
ಬೆಂಗಳೂರು, ಮೇ 21- ಕೊರೋನಾ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿದೆ. ಮೊದಲನೆ ಅಲೆ ನಗರ ಪ್ರದೇಶದಲ್ಲಿ ಇತ್ತು. ಎರಡನೇ ಅಲೆ ಗ್ರಾಮೀಣ ಪ್ರದೇಶಕ್ಕೂ ಹಬ್ಬಿದೆ. ಸರ್ಕಾರದ ವೈಪಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ಸರ್ಕಾರ ಎಚ್ಚೆತ್ತುಕೊಂಡು ಪರೀಕ್ಷೆಗಳನ್ನು ಸರಿಯಾಗಿ ಮಾಡುತ್ತಿಲ್ಲ, ವೈದ್ಯಕೀಯ ವ್ಯವಸ್ಥೆ ಸರಿ ಮಾಡಿಲ್ಲ. ಸುಳ್ಳು ಹೇಳುವುದೇ …
Read More »ಬಿಜೆಪಿಯವರಿಗೆ ಲಸಿಕೆ ಮೇಲೆ ನಂಬಿಕೆ ಇರಲಿಲ್ಲ, ಅದಕ್ಕೆ ಮೊದಲು ಮೋದಿ ಪಡೆದಿಲ್ಲ: ಡಿ.ಕೆ.ಶಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ …
Read More »ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …
Read More »ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!
ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …
Read More »ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ
ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …
Read More »18+ ಲಸಿಕೆ ನಾಳೆ ಮತ್ತೆ ಆರಂಭ
ಬೆಂಗಳೂರು: ರಾಜ್ಯದಲ್ಲಿ 18-44 ವರ್ಷ ವಯೋಮಾನದವರಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೋವಿಡ್ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲಸಿಕೆ ಕೊರತೆಯಿಂದ 18-44 ವರ್ಷ ದವರ ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತವಾಗಿತ್ತು. ಸದ್ಯ ಮೇ 15ರಂದು ನಡೆದ ತಜ್ಞರ ಸಮಿತಿ ಸಭೆಯ ತೀರ್ಮಾನದಂತೆ ಕೊರೊನಾ ಮುಂಚೂಣಿ ಕಾರ್ಯಕರ್ತರು ಆದ್ಯತಾ ವಲಯದ 18ರಿಂದ 44 ವರ್ಷ ದವರಿಗೆ ಲಸಿಕೆ ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ …
Read More »ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವೀಡಿಯೋ ಸಂವಾದ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ “ಸಂಘರ್ಷ’ ಏರ್ಪಟ್ಟಿದೆ. ವೀಡಿಯೋ ಸಂವಾದ ನಡೆಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದಕ್ಕೆ, “ಮಾಹಿತಿ ಪಡೆಯಬಹುದು. ಆದರೆ ವೀಡಿಯೋ ಸಂವಾದ ನಡೆಸಲು ಅವಕಾಶ ಇಲ್ಲ ಎಂದು ಮುಖ್ಯ ಮಂತ್ರಿಯವರಿಂದ ನಿರ್ದೇಶಿತನಾಗಿ ದ್ದೇನೆ’ ಎಂಬ ಉತ್ತರ ಸಿಕ್ಕಿದೆ. ಇದರಿಂದ …
Read More »ವೈದ್ಯೆಯಿಂದ ವ್ಯಾಕ್ಸಿನ್ ಕಳ್ಳ ದಂಧೆ – ಪೊಲೀಸರ ಬಲೆಗೆ ಗ್ಯಾಂಗ್
ಬೆಂಗಳೂರು: ಹಲವರು ವ್ಯಾಕ್ಸಿನ್‍ಗಾಗಿ ದಿನಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇನ್ನೂ ಹಲವರು ಮೂರ್ನಾಲ್ಕು ದಿನ ಆಸ್ಪತ್ರೆಗೆ ಅಲೆದರೂ ವ್ಯಾಕ್ಸಿನ್ ಖಾಲಿ ಆಗಿದೆ 3 ದಿನ ಬಿಟ್ಟು ಬನ್ನಿ ಎಂದೇ ಹೇಳುತ್ತಿದ್ದಾರೆ. ಆದರೆ ಬೆಂಗಳೂರಿನ ವೈದ್ಯೆಯೊಬ್ಬಳು ಕಳ್ಳ ಮಾರ್ಗದಲ್ಲಿ ವ್ಯಾಕ್ಸಿನ್ ನೀಡಿದ್ದಾರೆ. ಈ ಕುರಿತು ಭಯಾನಕ ಸತ್ಯ ಇದೀಗ ಹೊರ ಬಿದ್ದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ …
Read More »ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ :B.S.Y.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರುವ ನಿರ್ಬಂಧಗಳ ಬೆನ್ನಲ್ಲೇ ರಾಜ್ಯ ಸರಕಾರ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಲ ಮರುಪಾವತಿದಾರರಿಗೆ ಬಿಗ್ ರಿಲೀಪ್ ಕೊಟ್ಟಿದ್ದು, ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ ನೀಡಿದೆ. ರೈತರು ಹಾಗೂ ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಿದೆ. ಜುಲೈ ಅಂತ್ಯದ ವರೆಗೆ ಸಾಲದ …
Read More »