ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …
Read More »ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ
ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು …
Read More »ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ …
Read More »ಮೂರನೇ ಆಲೆ ಆತಂಕ: ಪರಿಷತ್ ಸಭಾಪತಿ ಹೊರಟ್ಟಿ ಸಲಹೆ
ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. …
Read More »ಸೋಂಕಿತರು ಇನ್ನು ಮುಂದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕು ; ಆರೋಗ್ಯ ಸಚಿವರು
ಬೆಂಗಳೂರು : ಸೋಂಕಿತರು ಇನ್ನು ಮುಂದೆ ಹೋಂ ಐಸೋಲೇಷನ್ ನಲ್ಲಿ ಇರುವಂತಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸ್ವ್ಯಾಬ್ ಪರೀಕ್ಷೆ ವರದಿ 24 ರಿಂದ 36 ಗಂಟೆಯ ಒಳಗಾಗಿ ಸಿಗುವಂತೆ ಕ್ರಮ …
Read More »ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?
ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …
Read More »ಮಕ್ಕಳ ಮನೆಗೇ ಬರಲಿದೆ ಪಠ್ಯಪುಸ್ತಕ : ಆಗಸ್ಟ್ ಅಂತ್ಯದ ವೇಳೆಗೆ ಶಾಲೆಗಳಿಂದ ರವಾನೆ
ಬೆಂಗಳೂರು : ಕೊರೊನಾ ದಿಂದಾಗಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಸ್ವಯಂ ಅಧ್ಯಯನಕ್ಕೆ ಅನುಕೂಲವಾಗುವಂತೆ ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕ ಪೂರೈಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ಪಠ್ಯಪುಸ್ತಕ ಮುದ್ರಣ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘವು ಎಲ್ಲ ಶಾಲೆಗಳಿಂದ ಈಗಾಗಲೇ ಪುಸ್ತಕದ ಮಾಹಿತಿ ಪಡೆದಿದೆ. ಪುಸ್ತಕ ಮುದ್ರಣ ಕ್ಕಾಗಿ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು, ಕಾರ್ಯಾದೇಶ ನೀಡಿದ 100 ದಿನಗಳೊಳಗೆ ಟೆಂಡರ್ ಪಡೆದ ಸಂಸ್ಥೆ ಪುಸ್ತಕಗಳನ್ನು ಮುದ್ರಿಸಿ, ಕರ್ನಾಟಕ …
Read More »ಕೋವಿಡ್ ಲಸಿಕೆಯ 2ನೇ ಡೋಸ್ ನೀಡಲು ತರ್ಕಬದ್ಧ ನೀತಿ ಜಾರಿಗೊಳಿಸಿ: ಹೈಕೋರ್ಟ್
ಬೆಂಗಳೂರು, ಮೇ 21: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲು ತರ್ಕಬದ್ಧ ನೀತಿಯನ್ನು ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಮೇ 25ರಂದು ತರ್ಕಬದ್ಧವಾದ ಲಸಿಕೆ ನೀತಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಕೋವಿಡ್ ಲಸಿಕೆಯ ವ್ಯಾಪಕ ಕೊರತೆಯಿದೆ ಎಂಬ ವಿಚಾರವನ್ನು ಮನಗಂಡ ಮೇಲೆ ನ್ಯಾಯಾಲಯವು …
Read More »ಕೋವಿಡ್ ಕಾರಣಕ್ಕೆ ಎಲ್ಲಾ ತಪ್ಪಿಗೂ ಕ್ಷಮೆ ಸಿಗದು: ಹೈಕೋರ್ಟ್
ಬೆಂಗಳೂರು: ಎಲ್ಲಾ ಲೋಪಕ್ಕೂ ಕೋವಿಡ್ ಕಾರಣ ನೀಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಿರೀಕ್ಷಣಾ ಜಾಮೀನು ಆದೇಶದಲ್ಲಿದ್ದ ನಿರ್ಬಂಧ ಸಡಿಲಿಕೆ ಕೋರಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. 10 ದಿನಗಳಲ್ಲಿ ಪೊಲೀಸ್ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಮಂಡ್ಯ ನಿವಾಸಿ ದೇವರಾಜ್ ಎಂಬುವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸರು ಸ್ಪೋಟಕ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು 2019ರ ನವೆಂಬರ್ 4ರಂದು ದಾಖಲಿಸಿದ್ದರು. ಟೈಫಾಯಿಡ್‌ನಿಂದ ಬಳಲುತ್ತಿದ್ದ ಕಾರಣ ನೀಡಿದ್ದಕ್ಕಾಗಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿತ್ತು. …
Read More »ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ
ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ …
Read More »