ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …
Read More »‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಬೆಂಗಳೂರು: ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …
Read More »ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ
ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …
Read More »1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Read More »”ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ”
ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ. ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ …
Read More »ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮನವಿ
ಬೆಂಗಳೂರು : ಕೊರೋನಾ 2ನೇ ಅಲೆಯು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆನಂಕ್ರ ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸೋಂಕಿತ ಮಕ್ಕಳಿಗಾಗಿ ಹಾಸಿಗೆ ಕಾಯ್ದಿರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ …
Read More »ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ
ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …
Read More »ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್-ಡೀಸೆಲ್ ದರ ಕೂಡ ಏರಿಕೆಯಾಗುತ್ತಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ 22-24 ಪೈಸೆ ಹಾಗೂ ಡೀಸೆಲ್ 27-29 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೇಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.33 ರೂಪಾಯಿ ಹಾಗೂ ಡೀಸೆಲ್ ದರ 87.92 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 92.58ರೂ ಹಾಗೂ ಡೀಸೆಲ್ ದರ 83.22 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಏರಿಕೆ ಕಂಡಿದ್ದು, …
Read More »ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!
ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ. ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ. ಜ್ವರ, ಕೆಮ್ಮು …
Read More »ಲಾಕ್‌ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …
Read More »