ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …
Read More »ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್
ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರವೇ ಕಾರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಲೇಬೇಕು. ಈ ಕಾಯಿಲೆ ಸರ್ಕಾರ ಕೊಟ್ಟಿದ್ದು, ಹಳ್ಳಿಗಳಲ್ಲೂ ಕೊರೊನಾ ಬರಲು ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು. ಇನ್ನು ಹಳ್ಳಿಗಳಲ್ಲಿ ಕೃಷಿ ಮಾಡ್ತಿದ್ದವರಿಗೂ ಕೊರೊನಾ ಬಂದಿದೆ. ಬೆಳಿಗ್ಗೆ ನನ್ಮ ತೀರ ಆತ್ಮಿಯರು …
Read More »ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ
ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ …
Read More »ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ …
Read More »88ನೇ ವಸಂತಕ್ಕೆ ಕಾಲಿಟ್ಟ ಎಚ್.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಇತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ ಸುಮಲತಾ ಅಂಬರೀಶ್, ಸಚಿವರಾದ ಡಾ.ಕೆ.ಸುಧಾಕರ್, …
Read More »ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ: ಹೊರಟ್ಟಿ ಆಕ್ರೋಶ
ಬೆಂಗಳೂರು: ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ ನಿರ್ಲಕ್ಷಕ್ಕೆ ಕಿಡಿಕಾರಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಶಿಕ್ಷಕರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಕೆಲ ಸಲಹೆ ನೀಡಿದ್ದಾರೆ. ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ …
Read More »ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್
ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೆಟೀವ್ಸ್ ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ನಟಿ ನಿಶ್ವಿಕಾ ನಾಯ್ಡು …
Read More »ಚಿನ್ನ ಗಿರವಿ ಇಟ್ಟು ಸಾಲ ಪಡೆದವರಿಗೆ ಗುಡ್ ನ್ಯೂಸ್ : ಚಿನ್ನದ ಸಾಲದ ಮೇಲಿನ ಬಡ್ಡಿ ಮನ್ನಾ!
ಬೆಂಗಳೂರು : ಚಿನ್ನ ಗಿರವಿ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಚಿಂತನೆಯಿದ್ದು, ಈ ಬಗ್ಗೆ ಸದ್ಯದಲ್ಲೇ ವರ್ತಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಆಭರಣ ವರ್ತಕರ ಸಂಘ ತಿಳಿಸಿದೆ. ಬಡ ಮತ್ತು …
Read More »ವಾಹನ ಸವಾರರಿಗೆ ಬಿಗ್ ಶಾಕ್ : 100 ರ ಗಡಿ ಸಮೀಪ ಪೆಟ್ರೋಲ್ ಬೆಲೆ!
ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ಇಂದು ಮತ್ತೆ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯಾಗಿದೆ . ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 27 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 29 ಪೈಸೆ ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಈಗ ಲೀಟರ್ ಗೆ 92.85 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 83.51 ರೂ.ಗೆ ಏರಿಕೆಯಾಗಿದೆ. …
Read More »ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 476 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 13,338 ಜನರಿಗೆ ಕೊವಿಡ್ ದೃಢಪಟ್ಟಿದ್ದು, 239 ಜನರು ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನೂ ಸೇರಿಸಿ ಈವರೆಗೆ ರಾಜ್ಯದ ಕೊವಿಡ್ …
Read More »