Breaking News

ಬೆಂಗಳೂರು

ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …

Read More »

ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …

Read More »

ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …

Read More »

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್

ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …

Read More »

‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ಕೋವಿಡ್‌ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …

Read More »

ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …

Read More »

1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Read More »

”ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ”

ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ. ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ …

Read More »

ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮನವಿ

ಬೆಂಗಳೂರು : ಕೊರೋನಾ 2ನೇ ಅಲೆಯು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆನಂಕ್ರ ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸೋಂಕಿತ ಮಕ್ಕಳಿಗಾಗಿ ಹಾಸಿಗೆ ಕಾಯ್ದಿರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ …

Read More »

ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ

ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …

Read More »