ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲ ಎಂದಾದರೆ ಈ ಯೋಜನೆ ಇರುವುದು ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರು ಉಚಿತವಾಗಿ …
Read More »ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ನೂಕಿದ ಸರ್ಕಾರ; ಲಸಿಕೆ ಕೊಡುವಲ್ಲೂ ವಿಫಲ: ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದ ಸ್ಥಿತಿ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಆಕ್ಸಿಜನ್, ಐಸಿಯು ಆಯ್ತು ಈಗ ವ್ಯಾಕ್ಸಿನ್ ಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ದೂಡಿದ್ದೂ ಅಲ್ಲದೇ ಲಸಿಕೆ ಹಂಚಿಕೆಯಲ್ಲಿಯೂ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಆಕ್ಸಿಜನ್, ಐಸಿಯು, ರೆಮಿಡಿಸಿವಿರ್, ಬೆಡ್, ಚಿಕಿತ್ಸೆ ಕೊಡಲಾಗದೆ ಜನರನ್ನು ಹಾದಿ ಬೀದಿಯಲ್ಲಿ ಕೊಲ್ಲುತ್ತಿರುವ ರಾಜ್ಯ ಸರ್ಕಾರ ಲಸಿಕೆ ವೈಫಲ್ಯದ …
Read More »‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ
ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ 24ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹೆಚ್ಚು ಜನ ಗುಂಪುಗೂಡಬಾರದೆಂದು ಆದೇಶ ಹೊರಡಿಸಲಾಗಿದೆ. ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಜನ ತೆರಳಿದ್ದು, ಬಹುತೇಕರು ನರೇಗಾ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳ ಆತಂಕ ಹಿನ್ನೆಲೆಯಲ್ಲಿ ಮೇ 24ರ ವರೆಗೆ …
Read More »ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮೇ 24 ರವರೆಗೆ ಉಚಿತ ಊಟ, ತಿಂಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಆಹಾರ
ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉಚಿತವಾಗಿ ಆಹಾರ ಒದಗಿಸಲು ಆದೇಶಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರು, ವಲಸಿಗರು, ದುರ್ಬಲ ವರ್ಗದವರಿಗೆ ಹಸಿವು ನೀಗಿಸಲು ಮೇ 24 ರ ವರೆಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಆಹಾರ ಒದಗಿಸಲಾಗುವುದು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿರುವ 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಗಳು, ಬೆಂಗಳೂರಿನಲ್ಲಿರುವ 150 ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್ ಗಳು ಮತ್ತು 30 ಕ್ಕೂ ಅಧಿಕ …
Read More »ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ಧ: ಶೆಟ್ಟರ್
ಬೆಂಗಳೂರು : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಈಗಾಗಲೇ ನೂತನ ಸೂತ್ರವನ್ನು ರಚಿಸಿದ್ದು, ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ವತಿಯಿಂದ ಆಯೋಜಿಸಿದ್ದ ವೆಬಿನಾರ್ ನಲ್ಲಿ …
Read More »ಕರ್ನಾಟಕಕ್ಕೆ ಆಕ್ಸಿಜನ್ ನೆರವು ನೀಡಿದ ಇಸ್ರೇಲ್
ಬೆಂಗಳೂರು: ಕೊರೊನಾದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಇಸ್ರೇಲ್ ದೇಶದಿಂದ ಇಂದು ರಾಜ್ಯಕ್ಕೆ 2 ಆಕ್ಸಿಜನ್ ಜನರೇಟರ್‌ಗಳನ್ನು ನೀಡುವ ಮೂಲಕವ ನೆರವು ನೀಡಿದೆ. ಇಂಡಿಯಾಕ್ಕೆ ಸಾಕಷ್ಟು ಬೆಂಬಲವನ್ನು ನೀಡಬಲ್ಲವು ಎಂದು ಹೆಮ್ಮೆಪಡುತ್ತವೆ. ಆಕ್ಸಿಜನ್ ಜನರೇಟರ್‌ಗಳನ್ನು ನಾವು ಕರ್ನಾಟಕಕ್ಕೆ ನೀಡುತ್ತೇವೆ. 100 ಕ್ಕಿಂತ ಹೆಚ್ಚು ರೋಗಿಗಳಿಗೆ ಸಾಕಾಗುಷ್ಟು ಆಕ್ಸಿಜನ್ ಉತ್ಪಾದಿಸುತ್ತೇವೆ ಎಂದು ಇಸ್ರೇಲ್ ರಾಯಭಾರಿ ಮಾಹಿತಿ ನೀಡಿದ್ದಾರೆ. ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಆಕ್ಸಿಜನ್ ಸಿಲಿಂಡರ್‌ಗಳನ್ನು ರಾಜ್ಯಕ್ಕೆ ಕಳುಹಸುತ್ತಿರುವುದಕ್ಕೆ ಧನ್ಯವಾದಗಳು. ಈ ಆಕ್ಸಿಜನ್ ಸಿಲಿಂಡರ್‌ಗಳಿಂದಾಗಿ ರಾಜ್ಯದಲ್ಲಿ …
Read More »ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಹೈಕೋರ್ಟ್ ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಸರ್ಕಾರಕ್ಕೆ ಸೂಚನೆ ನೀಡಿದೆ. ಕೋವಿಡ್ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ …
Read More »ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ:B.S.Y..
ಬೆಂಗಳೂರು: ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ. ವ್ಯಾಕ್ಸಿನ್ ಬರ್ತಾ ಇದ್ದಂತೆ ಎಲ್ಲರಿಗೂ ಕೊಡ್ತೇವೆ, ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಬಗ್ಗೆ ಸಮಸ್ಯೆ ಇಲ್ಲ. ಗೊಂದಲ ಬೇಡ, ಆತಂಕ ಬೇಡ ಎಂದು ಮನವಿ ಮಾಡಿಕೊಂಡರು. ವಾರ್ ರೂಂಗಳಿಗೆ ಭೇಟಿ ಕೊಡ್ತೀನಿ. ಕೊರೊನಾ ಸ್ವಲ್ಪ ಕಂಟ್ರೋಲ್ ಗೆ ಬರ್ತಿದೆ, ಜನ ಸಹಕಾರ ಕೊಟ್ಟರೆ ಅನುಕೂಲ. ದೇಶದಲ್ಲಿ ಕೊರೊನಾ ಹೆಚ್ಚಳ …
Read More »ದುಡ್ಡು ಪ್ರಿಂಟ್ ಮಾಡ್ತೀವಾ ಎಂದ ಈಶ್ವರಪ್ಪಗೆ ಡಿಕೆಶಿ ಡಿಚ್ಚಿ
ಬೆಂಗಳೂರು : ದುಡಿಯುವ ವರ್ಗಕ್ಕೆ ಪರಿಹಾರ ನೀಡೋಕೆ ನಾವು ದುಡ್ಡು ಪ್ರಿಂಟ್ ಮಾಡ್ತಿಲ್ಲ ಎಂದ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಸಚಿವರು ನೋಟ್ ಎಣಿಸುವ ಯಂತ್ರವನ್ನು ಇರಿಸಿಕೊಂಡಿದ್ದಾರಲ್ಲಾ ಎಂದು ಟಾಂಗ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೂರನೇ ಅಲೆ ಎದುರಿಸಲು ಸಿದ್ಧರಾಗಿ ಎಂದು ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಿ, ನಮ್ಮದೇನು ತಕರಾರು ಇಲ್ಲ. …
Read More »ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ : ಸಿದ್ದರಾಮಯ್ಯ
ಬೆಂಗಳೂರು : ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ …
Read More »