ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …
Read More »ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸ್ಆಯಪ್ ಖಾತೆ ಸೃಷ್ಟಿ: ಪ್ರಕರಣ ದಾಖಲು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು …
Read More »ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …
Read More »ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …
Read More »ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …
Read More »SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ
ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್ ನಲ್ಲಿ ಶಾಲಾ ಲಾಗಿನ್ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …
Read More »ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …
Read More »ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.
ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …
Read More »ಆಯುಧ ಪೂಜೆ, ವಿಜಯದಶಮಿ ಹಬ್ಬ: ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ
ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದ್ದು, ಬಹುತೇಕ ಕಡೆ ಕಸ ರಾಶಿ ಬಿದ್ದಿರುವುದು ಕಂಡುಬರುತ್ತಿದೆ. ಮಾರುಕಟ್ಟೆ, ಜನಸಂದಣಿಯಿದ್ದ ಪ್ರದೇಶದಲ್ಲಿ ಮಾರಾಟವಾಗದೇ ಉಳಿದ ಬಾಳೆಕಂಬ, ಬೂದುಗುಂಬಳ ಅಲ್ಲಲ್ಲೇ ಬಿದ್ದಿದ್ದು, ಶೀಘ್ರ ವಿಲೇವಾರಿಯಾಗದೇ ಇದ್ದಲ್ಲಿ ಕೊಳೆತು ಗಬ್ಬು ನಾರುವ ಸ್ಥಿತಿಗೆ ತಲುಪಲಿದೆ. ಸಾಮಾನ್ಯ ದಿನಗಳಲ್ಲಿ ನಗರದಲ್ಲಿ 4,000 ಟನ್ ತ್ಯಾಜ್ಯ ಉತ್ಪತ್ತಿಯಾದರೆ, ಹಬ್ಬದ ಸಂದರ್ಭದಲ್ಲಿ ಶೇ. 20ರಿಂದ ಶೇ. 30ರಷ್ಟು ಹೆಚ್ಚುವರಿ ತ್ಯಾಜ್ಯ …
Read More »ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧ ಭಾಗಗಳಿಗೆ ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ
ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್ಆರ್ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ. ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ …
Read More »