ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …
Read More »ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು: ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ರಾಜ್ಯದ ಆಕ್ಸಿಜನ್ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಸೂಕ್ತ ಆದೇಶ ಹೊರಡಿಸಲಿಗೆ ಎಂದೂ ಎಚ್ಚರಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ …
Read More »ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ ಸೇರಿದಂತೆ 8 ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ …
Read More »ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ: ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಆದೇಶ
ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ದಂಧೆ ಬಯಲು ಬೆನ್ನಲೇ ಇದೇ ಕೃತ್ಯದಲ್ಲಿ ತೊಡಗಿದ್ದ ಮಹಿಳೆ ಸೇರಿ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಗುಣಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ಕಂಡುಬಂದು ಹೋಮ್ ಐಸೋಲೇಷನ್ನಲ್ಲಿದ್ದ ಸೋಂಕಿತರ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ವಂಚನೆ ಜಾಲವನ್ನು …
Read More »ಮೋದಿ ಯಾವ ಮಾರ್ಗದರ್ಶನ ನೀಡುತ್ತಾರೋ ಅದನ್ನು ಪಾಲಿಸಲಾಗುತ್ತದೆ. ಅವರು ಹೇಳಿದಂತೆ ಲಾಕ್ ಡೌನ್ ಬಗ್ಗೆ ತೀರ್ಮಾನ :B.S.Y.
ಮಿತಿ ಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ ದೌನ್ ಜಾರಿಯಾಗುವ ಸಾಧ್ಯತೆ ಇದ್ದು, ಇಂದು ಸಂಜೆ ನಿರ್ಧಾರ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಸೂಚನೆಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ, ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಏನು ನಿರ್ದೇಶನ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸಲಹೆ ಸೇರಿದಂತೆ ಎಲ್ಲವನ್ನೂ ಇಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ …
Read More »ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ; ಸಂಸದ-ಶಾಸಕರು ಪ್ರಕರಣ ಬಯಲಿಗೆಳೆದ ಬೆನ್ನಿಗೇ ಎಫ್ಐಆರ್
ಬೆಂಗಳೂರು: ರಾಜ್ಯದ ಒಟ್ಟಾರೆ ಸೋಂಕಿನ ಪೈಕಿ ಅತಿಹೆಚ್ಚು ರಾಜ್ಯದ ರಾಜಧಾನಿಯಲ್ಲೇ ಇದ್ದು, ಸೋಂಕಿತರು ಸರಿಯಾದ ಸಮಯಕ್ಕೆ ಹಾಸಿಗೆ, ಐಸಿಯು, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದರೆ ಒಂದಷ್ಟು ಮಂದಿ ಇಂಥ ಸಂದರ್ಭದಲ್ಲೂ ಬೆಡ್ ಬ್ಲಾಕಿಂಗ್ ಮಾಡಿಸಿ ಹಣ ಮಾಡಿಕೊಳ್ಳುತ್ತಿದ್ದಾರೆ. ಅಂಥ ಪ್ರಕರಣವನ್ನು ಸಂಸದ-ಶಾಸಕರು ಜತೆಯಾಗಿ ಬಯಲಿಗೆಳೆದ ಬೆನ್ನಿಗೇ ಇಬ್ಬರು ಆರೋಪಿಗಳ ಬಂಧನವಾಗಿದೆ. ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರೋಹಿತ್ ಮತ್ತು ನೇತ್ರಾ ಎಂಬಿಬ್ಬರು ಏಜೆಂಟ್ಗಳನ್ನು ಬಂಧಿಸಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ …
Read More »ಕೋವಿಡ್ ವಾರ್ ರೂಮ್ಗೆ ಒಂದೇ ಸಮುದಾಯದವರೇಕೆ?: ಸಿಬ್ಬಂದಿ ಪಟ್ಟಿ ನೋಡಿ ತೇಜಸ್ವಿ ಸೂರ್ಯ ಫುಲ್ ಗರಂ
ಬೆಂಗಳೂರು: ರಾಜಧಾನಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದ ಸಂಸದ-ಶಾಸಕರು ಆ ನಂತರ ಕೋವಿಡ್ ವಾರ್ ರೂಮ್ಗೆ ನೇಮಿಸಲಾಗಿರುವ ಸಿಬ್ಬಂದಿಯ ಪಟ್ಟಿ ನೋಡಿ ಕೆಂಡಾಮಂಡಲವಾಗಿದ್ದಾರೆ. ಅವರನ್ನೆಲ್ಲ ನೇಮಿಸಿದ್ದು ಯಾರು, ಹೇಗೆ ನೇಮಿಸಿಕೊಳ್ಳಲಾಗಿದೆ ಎಂದು ಹೆಲ್ಪ್ಲೈನ್ ಉಸ್ತುವಾರಿಗಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ವಾರ್ ರೂಮ್ಗೆ ನೇಮಿಸಲ್ಪಟ್ಟಿರುವ 17 ಮಂದಿಯ ಪಟ್ಟಿಯಲ್ಲಿದ್ದ ಹೆಸರುಗಳನ್ನು ಸಂಸದ ತೇಜಸ್ವಿ ಸೂರ್ಯ ಓದಿದ್ದಾರೆ. ಆ ಪಟ್ಟಿಯಲ್ಲಿ ಇದ್ದ ಹೆಸರುಗಳನ್ನು ಓದಿದ ತೇಜಸ್ವಿ ಸೂರ್ಯ, ಅಲ್ಲಿ ಬರೀ …
Read More »ಜನತಾ ಕರ್ಫ್ಯೂ ಮುಂದುವರಿಕೆ; ಪತ್ರಕರ್ತರನ್ನು ‘ಕೋವಿಡ್ ವಾರಿಯರ್ಸ್’ ಆಗಿ ಘೋಷಣೆ: ಸಿಎಂ ಬಿಎಸ್ ವೈ
ಬೆಂಗಳೂರು: ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮೇ 22ರವರೆಗೂ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರೆಯಲಿದ್ದು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಹೇಳಿದರು. ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ‘ಜಿಲ್ಲೆಗಳಲ್ಲಿ ಕೊವಿಡ್ …
Read More »ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …
Read More »ಚಾಮರಾಜನಗರ ದುರಂತ: ಆರೋಗ್ಯ ಸಚಿವರ ತಪ್ಪಿದ್ದರೆ ಕ್ರಮ ಜರುಗಿಸಲಿ -ಸಿ.ಟಿ.ರವಿ
ಬೆಂಗಳೂರು: ‘ಚಾಮರಾಜನಗರ ದುರಂತಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇ ಬೇಕು. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರೆ ಅದರ ಹೊಣೆಯನ್ನು ಸರ್ಕಾರ ಹೊರಬೇಕಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ‘ಈ ದುರಂತಕ್ಕೆ ಕಾರಣರಾದವರಿಗೆ ಕಠಿಣ ಕ್ರಮ ಜರುಗಿಸಿದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಬಹುದು. ಆರೋಗ್ಯ ಸಚಿವರು ತಪ್ಪು ಮಾಡಿದ್ದರೆ ಅವರ ವಿರುದ್ಧವೂ ಕ್ರಮ ಆಗಬೇಕು. ಕೂಡಲೇ ತನಿಖೆ ನಡೆಸಿ ಶಿಸ್ತು ಕ್ರಮ ತೆಗೆದುಕೊಳ್ಳಲು …
Read More »