Breaking News

ಬೆಂಗಳೂರು

ಕೋವಿಡ್-19: ಬೆಂಗಳೂರು ಪೊಲೀಸರ ಜಾಗೃತಿ ವಿಡಿಯೊ

ಬೆಂಗಳೂರು: ಕೊರೊನಾ‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಕೋರಿ ನಗರ ಕಮಿಷನರೇಟ್ ವತಿಯಿಂದ ವಿಡಿಯೊ ಬಿಡುಗಡೆ ಮಾಡಲಾಗಿದೆ. ‘ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು, ಸರ್ಕಾರ ರೂಪಿಸಿರುವ‌ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಕಮಿಷನರ್ ಕಮಲ್ ಪಂತ್ ಕೋರಿದ್ದಾರೆ. ಕಾನ್‌ಸ್ಟೆಬಲ್‌ನಿಂದ ಹಿಡಿದು ಕಮಿಷನರ್‌ವರೆಗೂ ಎಲ್ಲರೂ ವಿಡಿಯೊದಲ್ಲಿ ಜಾಗೃತಿ ಮಾತುಗಳನ್ನಾಡಿದ್ದಾರೆ. ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಸೌಮೆಂದು ಮುಖರ್ಜಿ, ಮುರುಗನ್, ಜಂಟಿ‌ …

Read More »

ಸಿ.ಎಂ. ಇಬ್ರಾಹಿಂಗೆ ಮಾತೃ ವಿಯೋಗ

ಬೆಂಗಳೂರು: ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರಿಗೆ ಮಾತೃ ವಿಯೋಗವಾಗಿದೆ. ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ರಾಹಿಂ ಅವರ ತಾಯಿ ಬಿ.ಬಿ‌. ಸಾರಾ ಮಂಗಳವಾರ ನಿಧನರಾಗಿದ್ದಾರೆ. ಸಾರಾ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತೈಜಿಸಿದ್ದಾರೆ.

Read More »

ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ʼಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳʼ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆಯಾಗ್ತಿದ್ದು, ವೆಂಟಿಲೇಟರ್‌, ಆಕ್ಸಿಜನ್‌ ಸೇರಿ ಬೆಡ್‌ಗಳ ಕೊರತೆ ಉಂಟಾಗ್ತಿದೆ. ಇನ್ನು ಸ್ಮಶಾನಗಳ ಮುಂದೆ ಹೌಸ್‌ ಫುಲ್‌ ಬೋರ್ಡ್‌ ಪ್ರದರ್ಶಿಸಲಾಗ್ತಿದೆ. ಈ ನಡುವೆ ಸರ್ಕಾರ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್‌ ಬೆಡ್‌ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡಿದೆ. ಹೌದು, ಇಂದು ನಡೆದ ಕೋವಿಡ್‌ ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ …

Read More »

ನೀವೂ ಮನೆಯಲ್ಲಿದ್ರೂ ನಿಮ್ಮ ಹೆಸರಲ್ಲಿ ಬುಕ್ ಆಗುತ್ತೆ ಬೆಡ್ –ಬೆಂಗಳೂರಿನಲ್ಲಿ ಬೆಡ್‍ಗಾಗಿ ರಾತ್ರೋ ರಾತ್ರಿ ಡೀಲ್

ಬೆಂಗಳೂರು: ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿದೆ. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದಾರೆ. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಲಭ್ಯವಾಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. …

Read More »

ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು ಮಾಡಿದ್ದು, ವಾರ್ ರೂಮಿನಲ್ಲಿದ್ದ ದಂಧೆಕೋರರ ಬೆವರಿಳಿಸಿದ್ದಾರೆ. ಕಳೆದ ಐದಾರು ದಿನಗಳಿಂದ ಬೆಡ್ ಹಂಚಿಕೆ ಕುರಿತು ತನಿಖೆ ನಡೆಸಿರುವ ತೇಜಸ್ವಿ ಸೂರ್ಯ, ಬೆಡ್ ಅಭಾವದ ಕಾರಣ ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಸೌಥ್ ವಾರ್ ರೂಮಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಬೆಡ್ ದಂಧೆಯ ಮಾಹಿತಿ ಬಿಚ್ಚಿಟ್ಟರು. ಬೆಂಗಳೂರಿನ ನಿವಾಸಿಗೆ ಪಾಸಿಟಿವ್ ವರದಿ ಬರುತ್ತಿದ್ದಂತೆ, ಆಯಾ ಭಾಗದ …

Read More »

ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು. ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. …

Read More »

ಕೊರೊನಾ ಪರಿಣಾಮ: ಭಾರತದ ನಿರುದ್ಯೋಗ ದರ 4 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ

ಭಾರತದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ನಾಲ್ಕು ತಿಂಗಳ ಗರಿಷ್ಠ ಶೇಕಡಾ 8ಕ್ಕೆ ಏರಿಕೆಗೊಂಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಅನೇಕ ರಾಜ್ಯಗಳು ನಿರ್ಬಂದಕ್ಕೊಳಗಾಗಿದ್ದು, ವೈರಸ್‌ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದೆ. ಖಾಸಗಿ ಸಂಶೋಧನಾ ಸಂಸ್ಥೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಪ್ರೈ.ಲಿ.ನ ಅಂಕಿ ಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇಕಡಾ 6.5 ರಷ್ಟಿದ್ದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ಶೇಕಡಾ 7.97ಕ್ಕೆ ಏರಿಕೆಗೊಂಡಿದೆ. ಭಾರತದಲ್ಲಿ ಭಾನುವಾರ 3,689ರಷ್ಟು ಸೋಂಕಿತರು ಕೋವಿಡ್‌-19ಗೆ ಬಲಿಯಾಗಿದ್ದು ದಾಖಲೆಯಾಗಿದೆ. …

Read More »

1912 ಹೆಲ್ಪ್‌ಲೈನ್‌ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ

ಬೆಂಗಳೂರು: ಎರಡು ದಿನಗಳ ಒಳಗಾಗಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್‌ಗೆ ಸಂಬಂಧಿತ ಎಲ್ಲ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಜೋಡಿಸಬೇಕು; ಬೆಡ್ ಹಂಚಿಕೆ ಪಾರದರ್ಶಕಗೊಳಿಸಬೇಕು ಎಂದು \ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಡೆಡ್‌ಲೈನ್‌ ವಿಧಿಸಿದರು. ಬೆಂಗಳೂರಿನಲ್ಲಿ ದಿನವಿಡೀ ಕೋವಿಡ್‌ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡ ಅವರು, ಮಾಹಿತಿ ಮತ್ತು ಸೌಲಭ್ಯಗಳ ಕೊಂಡಿಯಾಗಿರುವ ಹೆಲ್ಪ್‌ಲೈನ್‌ ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶದಿಂದ ಸೋಮವಾರ ಸಂಜೆ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿರುವ ಕೋವಿಡ್‌ ಬೆಡ್‌ಗಳ ಪ್ರಮಾಣ, ಹಂಚಿಕೆ …

Read More »

ಮುಖ್ಯಮಂತ್ರಿ B.S.Y.ರಾಜೀನಾಮೆ ನೀಡಲಿ- ಸಿದ್ದರಾಮಯ್ಯ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ …

Read More »

ನನ್ನ ತಾಯಿಗೇ ಬೆಡ್ ಕೊಡ್ತಿಲ್ಲ ಎಂದು ಸಿದ್ದರಾಮಯ್ಯ ಬಳಿ ಕಣ್ಣೀರಿಟ್ಟ ಶಾಸಕಿ ಕುಸುಮಾ ಶಿವಳ್ಳಿ!

ಬೆಂಗಳೂರು: ಕರ್ನಾಟಕದ ಪಾಲಿಗೆ ಇಂದು ಕರಾಳ ದಿನ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್​​ ಕೊರತೆ ಉಂಟಾಗಿ 24 ಮಂದಿ ರೋಗಿಗಳು ನರಳಾಡಿ ಪ್ರಾಣ ಬಿಟ್ಟಿದ್ದಾರೆ. ಇನ್ನು ಸೋಂಕಿತರಿಗೆ ಬೆಡ್​ ಸಿಗದೇ ಪರದಾಡುತ್ತಿರುವುದು ಸಾಮಾನ್ಯವೇನೋ ಎನ್ನುವಂತಾಗಿದೆ. ಸಚಿವರು, ಶಾಸಕರು, ಸೆಲೆಬ್ರೆಟಿಗಳು ಕೂಡ ತಮ್ಮವರಿಗಾಗಿ ಬೆಡ್​​​ ಹೊಂದಿಸಲಾಗದೇ ದಿಕ್ಕೆಟ್ಟಿದ್ದಾರೆ. ತಮ್ಮೆಲ್ಲಾ ಪ್ರಭಾವನ್ನು ಬಳಸಿದರೂ ಆಸ್ಪತ್ರೆಗಳಲ್ಲಿ ಒಂದು ಬೆಡ್​ ಸಿಗುತ್ತಿಲ್ಲ. ಇದಕ್ಕೆ ಕುಂದಗೋಳ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಕುಸುಮಾ ಶಿವಳ್ಳಿಯೂ ಹೊರತಾಗಿಲ್ಲ. ತಮ್ಮ ಸೋಂಕಿತ ತಾಯಿಗೆ …

Read More »