ಬೆಂಗಳೂರು: ಗುರುವಾರ ನಿಗದಿಯಾಗಿರುವಂತೆಯೇ ನಮ್ಮ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕಾರ್ಯರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ. 38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ಡಿಸೆಂಬರ್ 13 ರಿಂದ ಚರ್ಚೆಗೆ ಕರೆಯುತ್ತೇವೆ ಎಂದು ಹೇಳಿದರೂ ಇಲ್ಲಿಯವರೆಗೆ ಕರೆದಿಲ್ಲ ಎಂದು ಸಿಟ್ಟು ಹೊರಹಾಕಿದರು. ನಮ್ಮ ಪ್ರಕಾರ 27 …
Read More »ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸಲು ಡಿಕೆಶಿ ಟೀಂ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಾಡಲಾಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿತು. ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತರನ್ನು ಭೇಟಿಯಾದ ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯ ಚುನಾವಣಾ ಆಯೋಗವು ಜಿಬಿಎ ಅಡಿಯಲ್ಲಿನ 5 …
Read More »ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗೂ ಮೊದಲೇ ಪಲಿತಾಂಶ ಡೇಟ್ ಪ್ರಕಟಿಸಿದ ಶಿಕ್ಷಣ ಇಲಾಖೆ
ಬೆಂಗಳೂರು:2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ.28ರಿಂದ ಮಾ.17ರವರೆಗೆ ದ್ವಿತೀಯ …
Read More »ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ …
Read More »ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ
ಬೆಂಗಳೂರು: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ ಅಂತ ಮಾಜಿ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಲ್ಲಿ ಫಾರಿನ್ ಟ್ರಿಪ್ ಪಾಲಿಟಿಕ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡನ್ನ ಧಿಕ್ಕರಿಸೋ ಕೆಲಸ ನಡೆದಿದೆ. ಸಿಎಂ-ಡಿಸಿಎಂ ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ …
Read More »ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್ ರಾಜಣ್ಣ
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ …
Read More »ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ
ಬೆಂಗಳೂರು: ಫೆ.28 ರಿಂದ ಮಾರ್ಚ್ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ …
Read More »ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು
ಬೀದರ್: ಮುಖ ತೊಳೆಯಲು ಹೋಗಿ ಕಾಲು ಜಾರಿ ನೀರುಪಾಲಾಗಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಜಲಸಮಾಧಿಯಾಗಿರುವ ಘಟನೆ ಬೀದರ್‌ನ ಹಾಲಳ್ಳಿ ಗ್ರಾಮದ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಹಳ್ಳೆಖೇಡ್(ಬಿ) ಗ್ರಾಮದ ತಂದೆ ಈಶಪ್ಪ (50) ಮತ್ತು ಮಗ ಅಮರೇಶ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ, ವಾಪಸ್ ಹಳ್ಳಿಖೇಡ್‌ಗೆ ಹೋಗುತ್ತಿದ್ದರು. ಈ ವೇಳೆ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ಮಗ ಮುಖ ತೊಳೆಯಲು …
Read More »ಮಾ.6 ರಂದು ಬಜೆಟ್ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು: ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ವೇಳಾಪಟ್ಟಿ ಅಧಿಕೃತ ಪ್ರಕಟವಾಗಿದ್ದು ಬೆಳಗ್ಗೆ 10:15ಕ್ಕೆ ಮಂಡನೆಯಾಗಲಿದೆ. ಕಳೆದ ಬಾರಿ ಮಾರ್ಚ್ 7 ರಂದು ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಮಾಡಿದ್ದರು. ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ. ಸಿದ್ದರಾಮಯ್ಯನವರು ಈಗಾಗಲೇ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದು, ಮುಂಬರುವ ಚುನಾವಣೆ …
Read More »ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ …
Read More »
Laxmi News 24×7