Breaking News

ಬೆಂಗಳೂರು

18 ವರ್ಷ ಮೇಲ್ಪಟ್ಟವರು ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಬರಬೇಡಿ: ಸಚಿವ ಸುಧಾಕರ್

ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ.1ರಿಂದಲೇ ಕೋವಿಡ್ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಲು ನಾಳೆ ಆಸ್ಪತ್ರೆಗಳಿಗೆ ಬರಬೇಡಿ. ನಮಗೆ ಕಂಪೆನಿಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬೇಕಾದಷ್ಟು ಲಸಿಕೆ ತಲುಪಿಲ್ಲ. ಯಾವಾಗ ಲಸಿಕೆ ಬರುತ್ತಿದೆ ಎಂಬ ಮಾಹಿತಿಯೂ ಇಲ್ಲ ಎಂದರು. ಹೀಗಾಗಿ ಲಸಿಕೆ ಪಡೆಯಲು 18ರಿಂದ 45 ವರ್ಷದವರೆಗಿನವರು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡವರು …

Read More »

ಗಮನಿಸಿ: ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ರೊಳಗಾಗಿ …

Read More »

ಪ್ರಾಣ ಉಳಿಸಬೇಕಾದವನೇ ರೆಮಿಡಿಸಿವಿರ್ ಬ್ಲಾಕ್ ಮಾಡಿ ಅರೆಸ್ಟ್ ಆದ

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮಿಡಿಸಿವಿರ್​​​ಅನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಆಸ್ಪತ್ರೆಯ ಸ್ಟಾಪ್ ನರ್ಸ್ ಮತ್ತು ಆಯುರ್ವೇದ ಆಸ್ಪತ್ರೆಯ ವೈದ್ಯನೊಬ್ಬನ ಸೇರಿದಂತೆ ಆರು ಮಂದಿಯ ಬಂಧನವಾಗಿದ್ದು, ಒಟ್ಟು 18 ರೆಮಿಡಿಸಿವಿರ್ ಇಂಜಕ್ಷನ್​​ಗಳನ್ನು ಸಿಸಿಬಿ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸುನಾಮಿ ದಿನೇ ದಿನೇ ವ್ಯಪಿಸುತ್ತಿದ್ದು, ವೈದ್ಯರು, ರೋಗಿಗಳು ರೆಮ್ಡೆಸಿವಿರ್ ಪಡೆಯಲು ಪರದಾಡುವಂತಾಗಿದೆ. ವಾರಗಳ ಕಾಲ ಅಲೆದರೂ ಔಷಧಿ …

Read More »

ಆಸ್ಪತ್ರೆಯಲ್ಲೇ ರೆಮಿಡಿಸಿವಿರ್‌ ಬಳಸಿ

ಹೊಸದಿಲ್ಲಿ: ದೇಶದಲ್ಲಿ ಸೋಂಕು ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಕೇಂದ್ರ ಸರಕಾರ ಹೋಮ್‌ ಐಸೊಲೇಶನ್‌ನ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿಶೇಷವಾಗಿ ರೋಗಲಕ್ಷಣ ರಹಿತ ಮತ್ತು ಅಲ್ಪ ಪ್ರಮಾಣದ ಲಕ್ಷಣಗಳು ಇರುವವರಿಗೆ ಇದರಿಂದ ಅನುಕೂಲವಾಗಲಿದೆ. ಮನೆಯಲ್ಲಿ ರೆಮಿಡಿಸಿವಿರ್‌ ಇಂಜೆಕ್ಷನ್‌ ಪಡೆಯುವುದನ್ನು ನಿಷೇಧಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಾತ್ರ ಪಡೆಯಬೇಕು ಎಂದು ಸಲಹೆ ಮಾಡಲಾಗಿದೆ. ಮತ್ತೂಂದು ಗಮನಾರ್ಹ ಅಂಶವೆಂದರೆ ಸೋಂಕು ದೃಢಪಟ್ಟವರು ಮನೆಯಲ್ಲಿರುವಾಗ ಕೂಡ ಮೂರು ಪದರಗಳ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಇನ್ನಿತರ ಸಲಹೆಗಳು …

Read More »

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಮೇ ತಿಂಗಳಿಂದ ರೇಷನ್ ಸ್ಥಗಿತ

ಬೆಂಗಳೂರು: ಆಹಾರ ಇಲಾಖೆ ವತಿಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳ ಪರಿಶೀಲನೆ ಕಾರ್ಯ ಆರಂಭಿಸಿದ್ದು, 1.31 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಗುರುತಿಸಿದೆ. ಇಂತಹ ಕಾರ್ಡ್ ಗಳಿಗೆ ಮೇ ತಿಂಗಳಿನಿಂದ ಪಡಿತರ ವಿತರಣೆ ನಿಲ್ಲಿಸಲು ತೀರ್ಮಾನಿಸಲಾಗಿದೆ. ರೇಷನ್ ಪಡೆಯುವ ಅರ್ಹರ ಪಟ್ಟಿಯಲ್ಲಿ ಮೃತಪಟ್ಟ 4.43 ಲಕ್ಷ ಫಲಾನುಭವಿಗಳು ಇರುವುದು ಕಂಡುಬಂದಿದೆ. ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆ ಅಡಿ ಕಾರ್ಡ್ ಪಡೆದುಕೊಂಡಿರುವ ಅನರ್ಹರನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. …

Read More »

ಸಚಿವರ ಹಾಗೂ 1 ವರ್ಷದ ಸಂಬಳ, ಶಾಸಕರ 1 ತಿಂಗಳ ಸಂಬಳ ಕೋವಿಡ್ ನಿಯಂತ್ರಣಕ್ಕಾಗಿ.”: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ …

Read More »

ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ.

ಬೆಂಗಳೂರು – ಕೊರೋನಾ ದಿನದಿಂದ ದಿನಕ್ಕೆ ಎಂತೆಂತವರ ಜೀವವನ್ನು ಕಸಿದುಕೊಳ್ಳುತ್ತಿದೆ ಎಂದು ನೋಡಿದಾಗ ನಿಂತಲ್ಲೇ ಕುಸಿದು ಬೀಳುವಂತಾಗಿದೆ. ಪತ್ನಿ ಪತಿಯನ್ನು ಉಳಿಸಿಕೊಳ್ಳಲು, ತಾಯಿ ಮಗನನ್ನು ಉಳಿಸಿಕೊಳ್ಳಲು, ಮಗ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಹೆಣಗಾಡುವುದನ್ನು ಕೇಳಿದರೆ ಈ ಜೀವನದ ಮೇಲಿನ ಭರವಸೆಯೇ ಹೊರಟು ಹೋಗುವಂತಾಗಿದೆ. ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ. ಇದು ಒಬ್ಬ ಹೆಣ್ಮಗಳ ಕಥೆಯಲ್ಲ, ಸಾವಿರಾರು ಜನರು ಕ್ಷಣ 7ಣವೂ ಪಡುತ್ತಿರುವ ಪಾಡು. …

Read More »

ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು:H.D.K.

ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ …

Read More »

ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ. ಕಿಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು …

Read More »

ಕಿಲ್ಲರ್ ಕೊರೊನಾ: ಆಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

ಬೆಂಗಳೂರು: ಕಿಲ್ಲರ್ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಹಾಗೂ ಸಾಯುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಪರ್ಯಾಸವೆಂದರೆ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರು ಮೃತರ ಅಂತ್ಯಸಂಸ್ಕಾರವನ್ನು ವಿಡಿಯೋ ಮೂಲಕ ವೀಕ್ಷಿಸುತ್ತಿದ್ದಾರೆ. ತಮ್ಮವರನ್ನು ವಿಡಿಯೋ ಮೂಲಕವೇ ವಿದಾಯ ಹೇಳುತ್ತಿದ್ದಾರೆ. ಹೌದು ಮಹಾಮಾರಿ ಕೊರೊನಾದಿಂದ ಮೃತಪಟ್ಟಂತಹ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು ಭಾಗಿಯಾಗುತ್ತಿಲ್ಲ. ಕೆಲವರು ಮೃತದೇಹವನ್ನೇ ಬಿಟ್ಟು ಹೋಗುತ್ತಿದ್ದಾರೆ. ಮತ್ತೆ ಕೆಲವರು ಮೊಬೈಲ್ ವಿಡಿಯೋದಲ್ಲೇ ಅಂತ್ಯಸಂಸ್ಕಾರವನ್ನು ವೀಕ್ಷಿಸಿ ದೂರದಿಂದಲೇ …

Read More »