Breaking News

ಬೆಂಗಳೂರು

ಕೊರೊನಾ ಸೋಂಕು ಮತ್ತು ಬಸ್ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು, ಏಪ್ರಿಲ್ 19: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ.19, 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ …

Read More »

2ನೇ ಅಲೆಯ ಸೋಂಕಿತರಲ್ಲಿ ಯುವಜನರೇ ಹೆಚ್ಚು! 63 ಯುವಕರು ಸಾವು ; ನಿರ್ಲಕ್ಷ್ಯವೇ ಕಾರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಸೋಂಕಿತರಲ್ಲಿ ಹೆಚ್ಚು ಕಡಿಮೆ ಅರ್ಧಕ್ಕರ್ಧದಷ್ಟು ಯುವಜನರೇ ಇದ್ದು, ಈ ಪೈಕಿ 63 ಮಂದಿ ಸಾವಿಗೀಡಾಗಿದ್ದಾರೆ. ಕೊರೊನಾ ವಯಸ್ಸಾದವರಲ್ಲಿ ಹೆಚ್ಚಾಗಿರುತ್ತದೆ ಹಾಗೂ ಬೇರೆ ಕಾಯಿಲೆಗಳು ಇದ್ದವರು ಮತ್ತು ವಯಸ್ಸಾದವರು ಮಾತ್ರ ಸಾವಿಗೀಡಾಗುತ್ತಾರೆ ಎಂಬ ಭಾವನೆ ಜನರಲ್ಲಿದೆ. ಅದಕ್ಕೆ ವಿರುದ್ಧವಾದ ವಿದ್ಯಮಾನ ಈಗ ಕಂಡು ಬರುತ್ತದೆ. ಎರಡನೇ ಅಲೆಗೆ ಹೆಚ್ಚು 20ರಿಂದ 40 ವರ್ಷದ ಯುವಜನರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅಲ್ಲದೆ, ಯಾವುದೇ ಆನಾರೋಗ್ಯ ಇಲ್ಲದಿದ್ದವರೂ ತೀವ್ರ …

Read More »

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

ಬೆಂಗಳೂರು : ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನಿಧನರಾಗಿದ್ದಾರೆ. ಇವರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸಾಧನೆಯನ್ನು ಹೊಗಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ …

Read More »

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ. ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ. ‘ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್‌ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, …

Read More »

ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ!

ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. 1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. …

Read More »

‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್

ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟಿರುವ “ಮಠ” ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇಂದು ಫೇಸ್‌ಬುಕ್ ಲೈವ್ ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ‘ಒಂದು ವೇಳೆ ನಾನು ಕೋವಿಡ್‍ದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಪ್ರಾಮಾಣಿಕ, ಹಾಗಂತ ಬಿಜೆಪಿಯವರೆಲ್ಲ ಪ್ರಾಮಾಣಿಕರಲ್ಲ. ಒಂದು ವರ್ಷ ಟೈಮ್ …

Read More »

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಚಿವ ಅಶೋಕ್‌, ಸುಧಾಕರ್‌ ನಡುವೆ ಶೀತಲ ಸಮರ

ಬೆಂಗಳೂರು: ಕೊರೊನಾ ನಿಯಂತ್ರಣದ ವಿಷಯದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್‌ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿ ಶನಿವಾರ ಸಚಿವ ಆರ್‌. ಅಶೋಕ್‌, ಬಸವರಾಜ ಬೊಮ್ಮಾಯಿ ಜೊತೆ ಸೇರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದಕ್ಕೆ ಸಚಿವ ಡಾ. ಸುಧಾಕರ್‌ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ ಭಾನುವಾರ …

Read More »

ಸಾರಿಗೆ ನೌಕರರ ಮುಷ್ಕರ : ನಿಗಮ-ನೌಕರರ ರಾತ್ರಿ ಕಾರ್ಯಾಚರಣೆ!

ಬೆಂಗಳೂರು : ಹನ್ನೊಂದು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯದತ್ತ ಮುಖ ಮಾಡುತ್ತಿಲ್ಲ. ಆದರೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಕೆಲವು ನೌಕರರು ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ! ಒಂದೆಡೆ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ವಿವಿಧ ಡಿಪೋಗಳಲ್ಲಿ ಅಧಿಕಾರಿಗಳು ಬೆಳಗಿನ ಜಾವ 4ರ ವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತೂಂದೆಡೆ ನೌಕರರು ರಾತ್ರಿಯಾಗುತ್ತಿದ್ದಂತೆಯೇ ಸಹೋದ್ಯೋಗಿಗಳ ಮನವೊಲಿಕೆಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳು ನಿತ್ಯ ಸಂಜೆ ಹೊರಡಿಸುವ ಅಮಾನತು, ವಜಾ, ವರ್ಗಾವಣೆ ಪಟ್ಟಿಗಾಗಿ ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ. …

Read More »

ಪಬ್ ಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಸಿಲಿಕಾನ್ ಸಿಟಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ವೇಗದಲ್ಲಿ ಕೊರೊನಾ ಹರಡುತ್ತಿದ್ದು, ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಪಬ್, ಬಾರ್‍ಗಳಲ್ಲಿ ಇದ್ಯಾವುದೂ ಪಾಲನೆಯಾಗುತ್ತಿಲ್ಲ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ನಗರದ ಪಬ್, ಬಾರ್ ಗಳಲ್ಲಿ ಕಿಮ್ಮತ್ತು ಇಲ್ಲದಂತಾಗಿದ್ದು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿ …

Read More »